ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅಂತರ ವಿಭಾಗ ಮಟ್ಟದ ಕೋರಿಕೆ, ಪರಸ್ಪರ ವರ್ಗಾವಣೆಗೆ (Teachers Transfer) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಿದ್ದು, ಆಗಸ್ಟ್ 17ರಿಂದ ಪ್ರಕ್ರಿಯೆ ಆರಂಭವಾಗಲಿದೆ. ಆ. 17, 19, 20 ಮತ್ತು 27 ರಂದು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ವರ್ಗಾವಣೆಗೆ ಈಗಾಗಲೇ ಪ್ರಕಟಿಸಿರುವ ಆದ್ಯತಾ ಪಟ್ಟಿಗೆ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ತಾವು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಎಲ್ಲಾ ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್‌ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು.
ಆ.17ರಂದು ಎಲ್ಲಾ ಮುಖ್ಯ ಶಿಕ್ಷಕರು, ಹಿರಿಯ ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಹಾಗೂ 1ರಿಂದ 300 ರವರೆಗೆ ಅದ್ಯತಾ ಕ್ರಮಾಂಕದ ಸಹ ಶಿಕ್ಷಕರಿಗೆ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ಆಗಸ್ಟ್ 19 ರಂದು 301 ರಿಂದ 800 ರವರೆಗಿನ ಅದ್ಯತಾ ಕ್ರಮಾಂಕದ ಸಹ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಾಗುವುದು, ಆ.20ರಂದು 801 ರಿಂದ ಕ್ರಮಾಂಕ ಮುಕ್ತಾಯವಾಗುವವರೆಗೆ ಕೌನ್ಸೆಲಿಂಗ್ ನಡೆಯಲಿದೆ. ಅದೇ ರೀತಿ ಆ.17ರಿಂದ ಪರಸ್ಪರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ | Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ಲಿಮಿಟೆಡ್ ನಲ್ಲಿ (HESCOM) ಖಾಲಿ ಇರುವ ಒಟ್ಟು 338 ಹುದ್ದೆಗಳಿಗೆ ಅರ್ಹರಿಂದ ಅರ್ಜಿ (Job Alert) ಆಹ್ವಾನಿಸಲಾಗಿದೆ. ಅಪ್ರೆಂಟಿಸ್‌ಶಿಪ್ ಕಾಯಿದೆ 1961ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ (Apprentice Post) ನೇಮಕಾತಿಗಾಗಿ ಈ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅವಕಾಶವನ್ನು ಪಡೆಯಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2024 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಇದು ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಏಕೀಕೃತ ಪೋರ್ಟಲ್ ಆಗಿದೆ.
ಹುದ್ದೆಗಳ ವಿವರ
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಪದವೀಧರರಿಗೆ ಒಟ್ಟು 200 ಹುದ್ದೆಗಳು, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರುವವರಿಗೆ ಒಟ್ಟು 138 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಪ್ರೆಂಟಿಸ್‌ಶಿಪ್ ಹುದ್ದೆಗೆ ಹೆಸ್ಕಾಂನಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ಅಪ್ರೆಂಟಿಸ್‌ಗಳಿಗೆ ಮಾಸಿಕ ಸ್ಟೈಫಂಡ್ 9000 ರೂ. ಮತ್ತು ಡಿಪ್ಲೋಮಾ ಅಪ್ರೆಂಟಿಸ್‌ಗಳಿಗೆ ಮಾಸಿಕ ಸ್ಟೈಫಂಡ್ 8000 ರೂ. ಆಗಿರುತ್ತದೆ.
ಅರ್ಹತೆ
ಅಪ್ರೆಂಟಿಸ್ ಶಿಪ್ ನಿಯಮಗಳ ಪ್ರಕಾರ ಪ್ರತಿ ಹುದ್ದೆಗೂ ವಯಸ್ಸಿನ ಮಿತಿ ಅನ್ವಯಿಸುತ್ತದೆ. ಇದಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ, ಬಿಟೆಕ್ ಪದವಿ ಹಾಗೂ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸುವ ಮೊದಲು ಪೂರ್ಣ ನೇಮಕಾತಿ ಅಧಿಸೂಚನೆಯನ್ನು ಒಮ್ಮೆ ಎಚ್ಚರಿಕೆಯಿಂದ ಓದಿ. ಇದರಿಂದ ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಬಹುದು. ಬಳಿಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಆನ್‌ಲೈನ್ ಮೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ. ಅನಂತರ ಆನ್‌ಲೈನ್ ಅಪ್ಲಿಕೇಶನ್‌ನಲ್ಲಿ ಕೇಳಿರುವ ಅಗತ್ಯ ದಾಖಲೆಗಳು ಮತ್ತು ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ. ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿದ ಅನಂತರ ಅರ್ಜಿ ನಮೂನೆಯನ್ನು ಸಲ್ಲಿಸಿ.
ಇದನ್ನೂ ಓದಿ: Job Alert: ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಆಗಸ್ಟ್ 27ರೊಳಗೆ ಘೋಷಣೆ ಮಾಡಲಾಗುತ್ತದೆ. ದಾಖಲೆ ಪರಿಶೀಲನೆ ಪ್ರಕ್ರಿಯೆಯು ಸೆಪ್ಟೆಂಬರ್ 9ರಂದು ಹುಬ್ಬಳ್ಳಿಯ ಕಾರವಾರ ರಸ್ತೆ, ವಿದ್ಯುತ್ ನಗರದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ (ಎಲ್.), ಐಟಿಐ, ಹೆಸ್ಕಾಂನಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ಇರುತ್ತದೆ.