ಬೆಂಗಳೂರು: ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಟ್ಟಡವೊಂದರ ಹತ್ತನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ತ್ರಿದಿಪ್ ಕೊನ್ವರ್ (28) ಮೃತಪಟ್ಟವರು.
ತ್ರಿದಿಪ್ ಅವರು ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಉದ್ಯೋಗಕ್ಕಾಗಿ ಬಂದಿದ್ದರು. ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಾ ಬೆಳ್ಳಂದೂರು ಸಮೀಪದ ಶೋಭಾ ಡಾಲಿಯಾ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದರು.
ಇವರು ಶನಿವಾರ ಬೆಳಗ್ಗೆ ಕಟ್ಟಡದಿಂದ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗ್ಗೆ ಸುಮಾರು ೩ ಗಂಟೆ ಹೊತ್ತಿಗೆ ಅವರು ಕಟ್ಟಡದ ಹತ್ತನೇ ಮಹಡಿ ಅಂದರೆ ಟೆರೇಸ್ಗೆ ಹೋಗಿದ್ದಾರೆ. ಅಲ್ಲಿ ಜಾರಿ ಬಿದ್ದು ಪ್ರಾಣ ಕಳೆದುಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಬೆಳ್ಳಂದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ| ಚಿನ್ನಾಭರಣಕ್ಕಾಗಿ ಉಸಿರುಗಟ್ಟಿಸಿ ವೃದ್ಧೆ ಹತ್ಯೆ: ಕೊಲೆ ಮಾಡುತ್ತಾರೆಂದು ಮೊದಲೇ ಹೇಳಿದ್ದರೂ ನಿರ್ಲಕ್ಷ್ಯ?