ಮಂಗಳೂರು: ನಗರದ ಮಿನಿ ವಿಧಾನಸೌಧದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಸೀಲ್ದಾರ್ ಹಾಗೂ ಸಹಾಯಕ, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ತಹಸೀಲ್ದಾರ್ ಪುರಂದರ ಹೆಗ್ಡೆ ಹಾಗೂ ಸಹಾಯಕ ಶಿವಾನಂದ ನಾಟ್ಯಾಕರ್ ಬಂಧಿತರು. ದಕ್ಷಿಣ ಕನ್ನಡ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಮಂಗಳೂರಿನ ಮಿನಿ ವಿಧಾನಸೌಧದ ಮೇಲೆ ಶುಕ್ರವಾರ ದಾಳಿ ನಡೆಸಲಾಗಿದೆ.
ವೃದ್ಧರೊಬ್ಬರ ಜಾಗ ಮಾರಾಟಕ್ಕೆ ನಿರಾಕ್ಷೇಪಣಾ ಪತ್ರ ನೀಡಲು ತಹಸೀಲ್ದಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. 4,700 ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ತಹಸೀಲ್ದಾರ್ ಅನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಅಮಾನುಲ್ಲಾ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ | ಚಿಂತಾಮಣಿಯಲ್ಲಿ ಕಳ್ಳತನ ಆರೋಪ ಹೊರಿಸಿ ದಲಿತ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ