Site icon Vistara News

Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Tejasvi Surya

ಬೆಂಗಳೂರು: ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ವಿರುದ್ಧ ಚುನಾವಣಾ ಆಯೋಗದಿಂದ ಗುರುವಾರ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ. ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರು ಸ್ಪರ್ಧೆಯಲ್ಲಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 congress booth agent allegation for Fake voting in Hassan Lok Sabha constituency

ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ ಆರಂಭವಾಗಿದೆ. ಈ ನಡುವೆ ಹಾಸನ ಲೋಕಸಭಾ ಕ್ಷೇತ್ರದ (Hasana Lok Sabha constituency) ಹೊಳೆನರಸೀಪುರ ತಾಲೂಕಿನ ಹಿಡುವಲಹಿಪ್ಪೆ ಗ್ರಾಮದ ಮತಗಟ್ಟೆಯಲ್ಲಿ ನಕಲಿ ಮತದಾನ (Fake voting) ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಬೂತ್ ಏಜೆಂಟ್ (Congress booth agent) ಆರೋಪ ಮಾಡಿದ್ದು, ತೀವ್ರ ಮಾತಿನ ಚಕಮಕಿ ನಡೆದಿದೆ.

ನಕಲಿ ಮತದಾನ ಮಾಡಲಾಗಿದೆ ಎಂದು ಮತದಾನ ಕೇಂದ್ರದೊಳಗೆ ಕಾಂಗ್ರೆಸ್ ಬೂತ್ ಏಜೆಂಟ್ ಆರೋಪ ಮಾಡಿದ್ದಾರೆ. ಮತಗಟ್ಟೆ ಸಂಖ್ಯೆ 251ರಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Exit mobile version