ಉಡುಪಿ: ನೆಟ್ಟಾರು ಪ್ರವೀಣ್ ಮತ್ತು ಸುರತ್ಕಲ್ ಫಾಜಿಲ್ ಹತ್ಯೆಯ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಂತೆ ಭಾಸವಾಗುತ್ತಿದೆ. ಹೀಗಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಆಯಕಟ್ಟಿನ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿ ತಪಾಸಣೆ ಕಾರ್ಯ ನಡೆಸಿದೆ.
ಜಿಲ್ಲೆಯ ಕುಂದಾಪುರ ಪೊಲೀಸರು ಹೊರ ಭಾಗದಿಂದ ಬರುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಬೆಳ್ಳಾರೆ ಹಾಗು ಸುರತ್ಕಲ್ ಹತ್ಯೆ ಬಳಿಕ ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚುವ ಮತ್ತು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಂಡಿದ್ದಾರೆ.
ಮಂಗಳೂರಿಗೆ ಹೋಲಿಸಿದರೆ ಉಡುಪಿ ಸದ್ಯ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ ಯಾವುದೇ ಗಾಳಿ ಸುದ್ದಿ ವದಂತಿಗಳಿಗೆ ಕಿವಿಗೊಡದಂತೆ, ಶಾಂತಿಯಿಂದ ವರ್ತಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಇದನ್ನೂ ಓದಿ| Surathkal Murder | ಸುರತ್ಕಲ್‌ನಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ