ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ (TET Result 2022) ಮುಂದಿನ ವಾರದಲ್ಲಿ ಪ್ರಕಟಗೊಳ್ಳಲಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನವೆಂಬರ್ 6ರ ಭಾನುವಾರದಂದು ರಾಜ್ಯಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನಡೆದಿತ್ತು. ಟಿಇಟಿ ಪರೀಕ್ಷೆಯ ಪತ್ರಿಕೆ-1ಕ್ಕೆ 1,54,929, ಪತ್ರಿಕೆ-2ಕ್ಕೆ 2, 06,456 ಅರ್ಜಿಗಳು ಬಂದಿದ್ದವು. ರಾಜ್ಯಾದ್ಯಂತ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಪತ್ರಿಕೆ-1ಕ್ಕೆ 589 ಪರೀಕ್ಷಾ ಕೇಂದ್ರಗಳಿದ್ದರೆ, ಪತ್ರಿಕೆ-2ಕ್ಕೆ 781 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿತ್ತು.
ಇದೀಗ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಗಳೆಲ್ಲವೂ ಪೂರ್ಣಗೊಂಡಿದ್ದು, ಮುಂದಿನ ವಾರದೊಳಗೆ ಫಲಿತಾಂಶವನ್ನು ಪ್ರಕಟಿಸಲಾಗುವುದೆಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಇದನ್ನೂ ಓದಿ | Border Dispute | ಕರ್ನಾಟಕಕ್ಕೆ ಸಂಘರ್ಷವೇ ಬೇಕೆಂದರೆ ನಾವೂ ಸಿದ್ಧ: ರಾಜ್ ಠಾಕ್ರೆ ಸುದೀರ್ಘ ಪತ್ರ