Site icon Vistara News

Vistara Kannada Sambhrama: ಗುರುಕಿರಣ್‌ ಗಾಯನ ಮೋಡಿಗೆ ಹುಚ್ಚೆದ್ದು ಕುಣಿದ ಪ್ರೇಕ್ಷಕರು

gurukiran music

ಬೆಂಗಳೂರು: ವಿಸ್ತಾರ ಕನ್ನಡ ಸಂಭ್ರಮದಲ್ಲಿ (Vistara Kannada Sambhrama) ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಗುರುಕಿರಣ್‌ ಮತ್ತು ತಂಡ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಳಿಸಿತು. ನಗರದ ರವೀಂದ್ರ ಕಲಾಕ್ಷೇತ್ರದ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಗುರುಕಿರಣ್‌ ಲೈವ್‌ ಮ್ಯೂಸಿಕ್‌ ಶೋನಲ್ಲಿ ಸಂಗೀತದ ಅಲೆಗೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.

ಎಂಟಿವಿ ಸುಬ್ಬಲಕ್ಷ್ಮಿಗೆ ಬರಿ ಓಳು, ರಾ..ರಾ ರಕ್ಕಮ್ಮ, ಬಂಡಲ್‌ ಬಡಾಯಿ ಮಹದೇವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿ ವಿವಿಧ ಸೂಪರ್‌ ಹಿಟ್‌ ಹಾಡುಗಳಿಗೆ ನೆರೆದಿದ್ದ ಜನರು ಹುಚ್ಚೆದ್ದು ಕುಣಿದರು. ಸಂಗೀತ ಕಾರ್ಯಕ್ರಮ ವೀಕ್ಷಿಸಲು ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದರು.

ಇದನ್ನೂ ಓದಿ | Vistara Kannada Sambhrama : ವಿಸ್ತಾರ ಕನ್ನಡ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿದ ಹೆಂಗಳೆಯರು

ಹೊಸತನಗಳ ಮೂಲಕ ಒಂದೇ ವರ್ಷದಲ್ಲಿ ಮನೆಮಾತಾದ ನಾಡಿನ ಜನಪ್ರಿಯ ಮಾಧ್ಯಮ ಸಂಸ್ಥೆ ವಿಸ್ತಾರ ನ್ಯೂಸ್‌ ಆಯೋಜಿಸಿದ್ದ ವಿಸ್ತಾರ ಕನ್ನಡ ಸಂಭ್ರಮದ ಭಾಗವಾಗಿ ರವೀಂದ್ರ ಕಲಾ ಕ್ಷೇತ್ರದಲ್ಲಿ (Ravindra Kalakshetra) ಶನಿವಾರ ಬೆಳಗ್ಗೆ 9 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಾಡು, ಸಂಗೀತ, ಕನ್ನಡ ಸಾಹಿತ್ಯದ ಗೋಷ್ಠಿಗಳು, ನಟ-ನಟಿಯರು, ಕಿರುತೆರೆ ಕಲಾವಿದರ ಜತೆ ನೇರ ಮುಕ್ತ ಮಾತುಕತೆ, ಯಕ್ಷಗಾನ ವೈಭವ ನೋಡುಗರ ಗಮನ ಸೆಳೆದವು.

Exit mobile version