ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಗಣಿಹಾರ ಸಿಂದಗಿ ಮಾರ್ಗದಲ್ಲಿ ಸ್ಟೇರಿಂಗ್ ಕಟ್ ಆಗಿದ್ದರಿಂದ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ(Accident) 43 ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ ಚಲಿಸುತ್ತಿದ್ದಾಗ ಏಕಾಏಕಿ ಸ್ಟೇರಿಂಗ್ ತುಂಡಾಗಿದೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | Lokayukta Raid | ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ