ಕರ್ನಾಟಕ
Chitradurga News: ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದ ಜನ; ವಿಡಿಯೊ ವೈರಲ್
Chitradurga News: ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜನರು ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸಿದ್ದಾರೆ. ಬೆಸ್ಕಾಂ ಮೀಟರ್ ರೀಡರ್ ಆಗಮಿಸಿದಾಗ, ನಾವು ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿರುವುದು ಕಂಡುಬಂದಿದೆ.
ಚಿತ್ರದುರ್ಗ: ಅಧಿಕಾರಕ್ಕೆ ಬಂದರೆ 200 ಯುನಿಟ್ ವಿದ್ಯುತ್ ಉಚಿತ ಎಂದು ಕಾಂಗ್ರೆಸ್ ಗ್ಯಾರಂಟಿ ನೀಡಿತ್ತು. ಈಗ ಪಕ್ಷಕ್ಕೆ ಬಹುಮತ ಬಂದಿದೆ. ಪಕ್ಷ ನೀಡಿರುವ ಎಲ್ಲ ಗ್ಯಾರಂಟಿಗಳನ್ನು ಈಡೇರಿಸುತ್ತದೋ ಇಲ್ಲವೋ ಎಂಬ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಈ ನಡುವೆ (Chitradurga News) ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜನರು ವಿದ್ಯುತ್ ಬಿಲ್ ಪಾವತಿಗೆ ನಿರಾಕರಿಸಿ, ಬೆಸ್ಕಾಂ ಮೀಟರ್ ರೀಡರ್‌ಗೆ ಆವಾಜ್ ಹಾಕಿರುವ ಘಟನೆ ನಡೆದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಹೀಗಾಗಿ ನಾವು ಬಿಲ್ ಕಟ್ಟಲ್ಲ ಎಂದು ಗ್ರಾಮಸ್ಥರು ಹೇಳಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮಕ್ಕೆ ವಿದ್ಯುತ್ ಬಿಲ್ ವಿತರಿಸಲು ಮೀಟರ್ ರೀಡರ್ ತೆರಳಿ ಬಿಲ್ ಕಟ್ಟುವಂತೆ ಗ್ರಾಮಸ್ಥರಿಗೆ ಕೇಳಿದ್ದಾರೆ. ಈ ವೇಳೆ ಗ್ರಾಮಸ್ಥರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ. ವಿದ್ಯುತ್ ಫ್ರೀ ಎಂದು ಕಾಂಗ್ರೆಸ್ ಮೊದಲೇ ಘೋಷಿಸಿದೆ. ಈಗ ಆ ಪಕ್ಷ ಅಧಿಕಾರಕ್ಕೆ ಬಂದಿದೆಯಲ್ಲ, ನಾವು ಬಿಲ್ ಕಟ್ಟೋದಿಲ್ಲ ಎಂದು ಹೇಳಿದ್ದಾರೆ.
ಈ ವೇಳೆ ಸರ್ಕಾರದ ಆದೇಶ ಬರುವವರೆಗೆ ಬಿಲ್ ಕಟ್ಟಬೇಕೆಂದು ಮೀಟರ್ ರೀಡರ್, ಜನರಿಗೆ ತಿಳಿಸಿದ್ದಾರೆ. ಆದೇಶದ ಬಗ್ಗೆ ಕಾಂಗ್ರೆಸ್‌ನವರಿಗೇ ಕೇಳಿ ಎಂದು ಹೇಳಿರುವ ಜನರು, ನಾವು ವಿದ್ಯುತ್ ಬಿಲ್ ಕಟ್ಟುವುದಿಲ್ಲ, ಏನು ಮಾಡುತ್ತೀರೋ ಮಾಡಿ ಎಂದು ಹೇಳಿರುವುದು ಕಂಡುಬಂದಿದೆ.
ಕರ್ನಾಟಕ
BJP Protest: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ವಿದ್ಯುತ್ ದರ ಏರಿಕೆ, ಹಾಲಿನ ಖರೀದಿ ದರ ಕಡಿತಕ್ಕೆ ಆಕ್ರೋಶ
BJP Protest: ಬಿಜೆಪಿಯಿಂದ ಮಂಗಳವಾರವೂ ವಿವಿಧೆಡೆ ಪ್ರತಿಭಟನೆ ಮುಂದುವರಿಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಸೇರಿ ಮೂರು ಜಿಲ್ಲಾ ಘಟಕಗಳಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.
ಬೆಂಗಳೂರು: ವಿದ್ಯುತ್ ದರ ಏರಿಕೆ, ಹಾಲಿನ ದರ ಕಡಿತ, ಗ್ಯಾರಂಟಿ ಯೋಜನೆಗಳಿಗೆ ಹಲವು ಷರತ್ತು ಅನ್ವಯ ಸೇರಿ ರಾಜ್ಯ ಸರ್ಕಾರ ವಿವಿಧ ನೀತಿ, ನಿರ್ಧಾರಗಳನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಗಿದೆ. ವಿವಿಧೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ವಿವಿಧ ಷರತ್ತುಗಳ ಹೇರಿಕೆ ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಿಎಂ ಹಾಗೂ ಡಿಸಿಎಂ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಯಾವುದೇ ಷರತ್ತುಗಳ ಹಾಕದೇ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಕಾರ್ಯಕರ್ತರು
ಮೈಸೂರು: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ನೀಡಿತ್ತು. ಈಗ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ ಮಾಡಿದೆ. ರೈತರಿಗೆ ನೀಡುತ್ತಿದ್ದು ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಿದೆ. ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಸಾರ್ವಜನಿಕರಿಗೆ ಬರೆ ಹಾಕುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವುದಾಗಿ ಹೇಳಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ತೊಲಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪರಾಜಿತ ಅಭ್ಯರ್ಥಿಗಳಾದ ಕವೀಶ್‌ಗೌಡ, ಸಂದೇಶ್ ಸ್ವಾಮಿ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ವಿಭಾಗೀಯ ಪ್ರಭಾರ ಮೈ.ವಿ.ರವಿಶಂಕರ್ ಸೇರಿ ಪ್ರಮುಖರು ಭಾಗಿಯಾಗಿದ್ದರು.
ಗೋ ಭಕ್ಷಕ ಸಿದ್ದರಾಮಯ್ಯ ಎಂದು ಆಕ್ರೋಶ
ಕೋಲಾರ: ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗೋ ಭಕ್ಷಕ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಧಿಕ್ಕಾರ ಕೂಗಿದರು. ಇದೇ ವೇಳೆ ಬಸ್ ನಿಲ್ದಾಣ ವೃತ್ತದಲ್ಲಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಹೋರಾಟ
ಇದನ್ನೂ ಓದಿ | Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಿರಿ
ವಿಜಯನಗರ: ವಿದ್ಯುತ್ ಬಿಲ್ ದರ ಏರಿಕೆ ವಿರೋಧಿಸಿ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಡಾ. ಪುನೀತ್ ರಾಜ್‍ಕುಮಾರ್ ವೃತ್ತದಿಂದ, ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು, ಬೆಲೆ ಏರಿಕೆ ಆದೇಶ ವಾಪಸ್ ಪಡೆಯಬೇಕು ಎಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹಾವೇರಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಹೋರಾಟ
ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳಿಗೆ ಕಂಡಿಷನ್ ಹಾಕಿರುವುದಕ್ಕೆ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ವಿದ್ಯುತ್ ಬಿಲ್ ಏರಿಕೆಗೆ ಖಂಡನೆ ವ್ಯಕ್ತಪಡಿಸಿದರು.
ಕಾರಟಗಿಯಲ್ಲಿ ಪ್ರತಿಭಟನಾ ಮೆರವಣಿಗೆ
ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಿದ್ಯುತ್ ದರ ಏರಿಕೆ, ಹಾಲಿನ ಖರೀದಿ ದರ ಕಡಿತ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ಖಂಡಿಸಿ ಮಾಜಿ ಶಾಸಕ ಬಸವರಾಜ ದಡೇಸೂಗೂರು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಒಇ ಕಾರ್ಯಾಲಯದಿಂದ ಎಪಿಎಂಸಿವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ವಿದ್ಯುತ್ ಬೆಲೆ ಏರಿಕೆ, ಹಾಲಿನ ಖರೀದಿ ದರ ಇಳಿಕೆ ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಹಾಗೂ ಸೀಕಲ್ಲು ರಾಮಚಂದ್ರಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಒತ್ತಾಯಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆಯ ದೃಶ್ಯ
ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ
ಧಾರವಾಡ: ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಅಳವಡಿಕೆ ಹಾಗೂ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | 200 ಯುನಿಟ್ ಫ್ರೀ ಕೊಡಿ ಅನ್ನುವವರಿಗೆ ವಿವೇಕ ಇದೆಯಾ? ಈಗೆಷ್ಟು ಬಳಸ್ತಿದ್ದಾರೋ ಅಷ್ಟೇ ಬಳಸಬೇಕೆಂದ ಸಿದ್ದರಾಮಯ್ಯ
ಮಂಗಳೂರು: ನಗರದ ಮಿನಿ ವಿಧಾನಸೌಧ ಮುಂಭಾಗ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಕಾರ್ಯಕರ್ತರು ಧಿಕ್ಕಾರ ಘೋಷಣೆ ಕೂಗಿದರು.
ಕರ್ನಾಟಕ
Ballari News: ಮಕ್ಕಳಲ್ಲಿ ಪರಿಸರ ಪ್ರೇಮ ಮೂಡಿಸಿದ ಶಾಲೆ
Ballari News: ಪರಿಸರ ಸಂರಕ್ಷಣೆಗೆ ವಿಶೇಷ ಕಾಳಜಿ ತೋರಿರುವ ಬಳ್ಳಾರಿಯ ಎಸ್.ಕೆ. ಮೋದಿ ನ್ಯಾಷನಲ್ ಶಾಲೆಯಲ್ಲಿ ಪ್ರತಿವರ್ಷ ಪರಿಸರ ದಿನದಂದು ವಿದ್ಯಾರ್ಥಿಗಳ ಹೆಸರಿನಲ್ಲಿ ಸಸಿ ನೆಟ್ಟು ವಿದ್ಯಾರ್ಥಿಗಳೇ ಪೋಷಿಸುವ ಮೂಲಕ ಪರಿಸರ ಜಾಗೃತಿ ಕುರಿತು ಅರಿವು ಮೂಡಿಸಲಾಗುತ್ತಿದೆ.
ಬಳ್ಳಾರಿ: ಪರಿಸರ ದಿನ (Environment Day)ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿ ವರ್ಷ ಶಾಲೆಯೊಂದರಲ್ಲಿ (School) ಮಕ್ಕಳ ಹೆಸರಿನಲ್ಲಿ ಗಿಡ ನೆಟ್ಟು, ಮಕ್ಕಳೇ ಪೋಷಣೆ ಮಾಡುವುದರ ಮೂಲಕ ವಿಶೇಷವಾಗಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಗಣಿನಗರಿ ಬಳ್ಳಾರಿಯ ಎಸ್.ಕೆ. ಮೋದಿ ನ್ಯಾಷನಲ್ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪ್ರತಿವರ್ಷ ವಿದ್ಯಾರ್ಥಿಗಳ ಹೆಸರಿನಲ್ಲಿ ಸಸಿ ನೆಟ್ಟು ವಿದ್ಯಾರ್ಥಿಗಳೇ ಪೋಷಿಸುವ ಮೂಲಕ ಪರಿಸರ ಜಾಗೃತಿ ಕುರಿತು ಅರಿವು ಮೂಡಿಸಲಾಗುತ್ತಿದೆ.
ಇದನ್ನೂ ಓದಿ: ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ವಿಸ್ತಾರ ನ್ಯೂಸ್ ಸಹಯೋಗದೊಂದಿಗೆ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ವರ್ಷ 60 ಮಕ್ಕಳ ಹೆಸರಿನಲ್ಲಿ ಸಸಿ ನೆಡುವ ಮೂಲಕ ಶಾಲೆ ಮಾದರಿಯಾಗಿದೆ.
ಶಾಲೆಯ ಏಳನೇ ತರಗತಿಯ ಪ್ರತಿಯೊಬ್ಬರ ವಿದ್ಯಾರ್ಥಿಗಳ ಹೆಸರಿನಲ್ಲಿ ನಾನಾ ರೀತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಕಾಳಜಿಯನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ಮೆರೆದಿದ್ದಾರೆ.
ಹಸಿರಾಗಿಸಿದ ಶಾಲೆಯ ಆವರಣ
ಈಗಾಗಲೇ ಕಳೆದ ಎರಡು ವರ್ಷದಿಂದ ಈ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಶಾಲೆಯ ಆವರಣದಲ್ಲಿ ಕಳೆದ ವರ್ಷ ಮಾವು, ಬೇವು, ತೆಂಗು ಹಾಗೂ ನಾನಾ ರೀತಿಯ ಸಸಿಗಳನ್ನು ಐವತ್ತು ವಿದ್ಯಾರ್ಥಿಗಳ ಹೆಸರಿನಲ್ಲಿ ನೆಟ್ಟು ಬೆಳೆಸಿದ್ದಾರೆ. ಅದರಂತೆ ಈ ವರ್ಷ ಕೂಡ 60 ವಿದ್ಯಾರ್ಥಿಗಳ ಹೆಸರಿನಲ್ಲಿ ಪರಿಸರ ದಿನದಂದು ನೆಡುವ ಮೂಲಕ ಪರಿಸರ ಪ್ರೇಮವನ್ನು ಎತ್ತಿಹಿಡಿದ್ದಾರೆ.
ಈ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಇನ್ನು ಬೆಂಗಳೂರಿನಿಂದ ಚೆನ್ನೈಗೆ ಎರಡೇ ಗಂಟೆ ಸಾಕು, ಶೀಘ್ರ ಮೈಸೂರು-ಬೆಂಗಳೂರಿಗೂ ಬರಲಿದೆ ಬುಲೆಟ್ ಟ್ರೈನ್!
ಈ ಸಂದರ್ಭದಲ್ಲಿ ಶಾಲಾ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಜಿ. ರಾಜಶೇಖರ ಗೌಡ, ಮುಖ್ಯಗುರು ಸರಸ್ವತಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಕರ್ನಾಟಕ
Yadgiri News: ಪರಿಸರ ಸಂರಕ್ಷಣೆಗೆ ಇರಲಿ ಎಲ್ಲರ ಕಾಳಜಿ: ಸಂಗಮೇಶ ಉಪಾಸೆ
Yadgiri News: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಯಾದಗಿರಿ: ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಸೋಮವಾರ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ (Mahatma Gandhi) ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.
ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆ, ಪ್ರತೀಕ್ಷಾ ಸೇವಾ ಸಂಸ್ಥೆ, ನಗರಸಭೆ ಹಾಗೂ ಅರಣ್ಯ ಇಲಾಖೆ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಬಳಿಕ ಮಾತನಾಡಿದ ಅವರು, ಅರಣ್ಯ ನಾಶದಿಂದ ಈಗ ತಾಪಮಾನ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಪರಿಸರದ ಕಾಳಜಿ ತೊರಬೇಕಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಬೇಕಿದೆ, ಸಸಿಗಳನ್ನು ನೆಟ್ಟು ಮರ ಗಿಡಗಳನ್ನು ಬೆಳೆಸಿ ಅರಣ್ಯ ಸಂಪತ್ತು ಹೆಚ್ಚಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಶಾಂತಿ ಸದನ ಶಾಲೆಯ ಕಾರ್ಯದರ್ಶಿ ಬಸವಂತರೆಡ್ಡಿ, ಪ್ರತೀಕ್ಷಾ ಸೇವಾ ಸಂಸ್ಥೆಯ ಅಧ್ಯಕ್ಷ ಸಿದ್ದು ಪಾಟೀಲ, ಶಾಲೆ ಮಕ್ಕಳು ಹಾಗೂ ಪರಿಸರ ಪ್ರೇಮಿಗಳು ಸಸಿಗಳನ್ನು ನೆಟ್ಟರು.
ಇದನ್ನೂ ಓದಿ: Monsoon Forecast 2023 : ಹವಾಮಾನ ಇಲಾಖೆ VS ಸ್ಕೈಮೆಟ್; ಹೇಗಿರಲಿದೆ ಈ ಬಾರಿಯ ಮುಂಗಾರು ಮಳೆ?
ಕಾರ್ಯಕ್ರಮದಲ್ಲಿ ಮುಖಂಡರಾದ ಬಂದಪ್ಪ ಅರಳಿ, ಬನಶಂಕರ ಸಾಹುಕಾರ, ಸಿಎಂ ಶಿವಶರಣಪ್ಪ, ಶರಣು ಇಡ್ಲುರು, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ಆರೋಗ್ಯ ನಿರೀಕ್ಷಕರಾದ ಶರಣಮ್ಮ, ಸಿದ್ದಾರ್ಥ, ಮಹ್ಮದ್ ಸಲೀಂ, ವಿಶ್ವರಾಧ್ಯ ಗುತ್ತೇದಾರ, ಜ್ಞಾನೇಶ್ವರಿ ನಾಟೇಕಾರ್, ಮಲ್ಲಿಕಾರ್ಜುನ ಹಾಗೂ ಇತರರು ಪಾಲ್ಗೊಂಡಿದ್ದರು.
ಕರ್ನಾಟಕ
Lok Sabha Election 2024 : ಲೋಕಸಭೆಯಲ್ಲಿ ಕಾಂಗ್ರೆಸ್ ಮಣಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಪ್ರಸ್ತಾಪ!
BJP JDS alliance: ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಅನ್ನು ಮಣಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಒಂದನ್ನು ಸಿದ್ಧ ಮಾಡಿಕೊಂಡಿದೆ ಎನ್ನಲಾಗಿದ್ದು, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು “ಕೈ”ಗೆ ಪೆಟ್ಟುಕೊಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ (Congress-JDS) ಮೈತ್ರಿ ಮಾಡಿಕೊಂಡು ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿದ್ದವು. ಆದರೆ, ಕೊನೆಯಲ್ಲಿ ಈ ಎರಡೂ ಪಕ್ಷಗಳು ತಲಾ 1 ಸ್ಥಾನವನ್ನು ಗೆದ್ದುಕೊಂಡರೆ ಉಳಿದ 25 + 1 ಸ್ಥಾನವನ್ನು ಬಿಜೆಪಿ ಮತ್ತು ಬೆಂಬಲಿತ ಅಭ್ಯರ್ಥಿಗೆ ಜಯ ಒಲಿದಿತ್ತು. ಆದರೆ, ಈ ಬಾರಿ ಈ ಚಿತ್ರಣವೇ ಉಲ್ಟಾ ಆಗುವ ಲಕ್ಷಣಗಳು ಕಾಣುತ್ತಿದ್ದು, 2024ರ ಲೋಕಸಭಾ ಚುನಾವಣೆಗೆ (Lok Sabha Election 2024) ಕಾಂಗ್ರೆಸ್ ಅನ್ನು ಮಣಿಸಲು ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಲೆಕ್ಕಾಚಾರಗಳೂ ಈ ಪಕ್ಷಗಳಲ್ಲಿ ನಡೆಯುತ್ತಿವೆ ಎಂಬ ಗುಸು ಗುಸು ಪ್ರಾರಂಭವಾಗಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. 135 ಸ್ಥಾನಗಳನ್ನು ಗೆದ್ದು ಬೀಗಿದೆ. ಅಲ್ಲದೆ, ಈಗಾಗಲೇ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಆದೇಶವನ್ನೂ ಹೊರಡಿಸಿದೆ. ಜತೆಗೆ ಮುಂದಿನ ಲೋಕಸಭೆ ಚುನಾವಣೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮುಂದಡಿ ಇಡುತ್ತಿದೆ. ಪ್ರತಿಯೊಂದು ಹೆಜ್ಜೆಯನ್ನೂ ಈ ನಿಟ್ಟಿನಲ್ಲಿ ಇಡಲಾಗುತ್ತಿದೆ. ಹೀಗಾಗಿ ಮುಂದಿನ ವರ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನು ಗೆಲ್ಲುವ ಟಾರ್ಗೆಟ್ ಅನ್ನು ಕೈ ಪಕ್ಷ ಇಟ್ಟುಕೊಂಡಿದೆ.
ಎದುರೇಟು ಕೊಡಲು ಮಾಸ್ಟರ್ ಪ್ಲ್ಯಾನ್?
ಕಾಂಗ್ರೆಸ್‌ನ ಈ ಟಾರ್ಗೆಟ್‌ಗೆ ಎದುರೇಟು ಕೊಡಲು ಬಿಜೆಪಿ, ಜೆಡಿಎಸ್ ಪಕ್ಷಗಳ ನಡುವೆ ಮಾತುಕತೆ ನಡೆದಿದೆ. ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಎರಡಂಕಿ ದಾಟದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಅನ್ನೇ ಹೆಣೆಯಲಾಗಿದೆ. 2019ರಲ್ಲಿ ಒಂದು ಸ್ಥಾನವನ್ನು ಮಾತ್ರ ಗೆದ್ದಿರುವ ಕಾಂಗ್ರೆಸ್, ಈ ಬಾರಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಅಲ್ಲದೆ, ತನ್ನ ಟಾರ್ಗೆಟ್ ಕ್ಷೇತ್ರಗಳಲ್ಲಿ ಆ ನಿಟ್ಟಿನಲ್ಲಿ ಕೆಲವು ಸೂಚನೆಗಳನ್ನೂ ನೀಡಿದೆ ಎನ್ನಲಾಗಿದೆ. ಇದನ್ನು ತಡೆಯಲು ಈಗ ಬಿಜೆಪಿ ಪ್ಲ್ಯಾನ್ ಮಾಡಿದೆ.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಏನಿದೆ ಲೆಕ್ಕಾಚಾರದ ಸೂತ್ರ?
ಹಳೇ ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್‌ಗೆ ಶಕ್ತಿ ಇದೆ. ಹೀಗಾಗಿ ಇಲ್ಲಿ ಕ್ಷೇತ್ರ ಹಂಚಿಕೆಯ ಸೂತ್ರವನ್ನು ಅನುಸರಿಸಲಾಗುತ್ತಿದೆ. ಅಂದರೆ, ಮಂಡ್ಯ, ಹಾಸನ, ತುಮಕೂರು ಮೂರು ಕ್ಷೇತ್ರ ಬಿಟ್ಟು ಕೊಟ್ಟರೆ ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ಹೇಳಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಅನ್ನು ಹೊಂದಿದೆ. ಹೀಗಾಗಿ ಹೈಕಮಾಂಡ್ ಮಟ್ಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕರೆ ಕಾಂಗ್ರೆಸ್‌ಗೆ ಮೈತ್ರಿ ಪಕ್ಷಗಳನ್ನು ಎದುರಿಸುವ ಸವಾಲು ತಲೆದೋರಲಿದೆ.
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ21 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ22 hours ago
Ullal News: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಯು.ಟಿ. ಖಾದರ್
-
ಕರ್ನಾಟಕ14 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ21 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ11 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ23 hours ago
Sulochana Latkar: ಬೆಳಗಾವಿಯಲ್ಲಿ ಹುಟ್ಟಿ ಬಾಲಿವುಡ್ನಲ್ಲಿ ಮಿಂಚಿದ್ದ ನಟಿ ಸುಲೋಚನಾ ಲಾಟ್ಕರ್ ಇನ್ನಿಲ್ಲ
-
ದೇಶ13 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ