ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ.
ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, ಸ್ವಾಗತ ಕೋರಿರುವ ಬ್ಯಾನರ್‌ನಲ್ಲಿ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಮುದ್ರಿಸಲಾಗಿದೆ. ಧಾರವಾಡದ ಹಲವು ಭಾಗಗಳಲ್ಲಿ ಇಂತಹ ಬ್ಯಾನರ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ.
ಇದನ್ನೂ ಓದಿ | 108 ತಾಂತ್ರಿಕ ಸಮಸ್ಯೆ | ರಾಜ್ಯದ ಜನರ ಕ್ಷಮೆ ಯಾಚಿಸಿದ ಆರೋಗ್ಯ ಸಚಿವ ಸುಧಾಕರ್