Site icon Vistara News

ಮುರುಘಾಶರಣರನ್ನು ಬಂಧಿಸಲು ಆರು ದಿನ ಸಾಕ್ಷಿಗಳನ್ನು ಕ್ರೋಡೀಕರಿಸಿದ್ದ ಪೊಲೀಸರು

chitradurga muruga sharana

ಬೆಂಗಳೂರು: ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾಶರಣರನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ವಶಕ್ಕೆ ಪಡೆದುಕೊಳ್ಳುವ ಮೊದಲು ಪೊಲೀಸರು ಹಲವು ಸಾಕ್ಷಿಗಳನ್ನು ಕ್ರೋಡೀಕರಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಆರು ದಿನಗಳ ಕಾಲ ಸಾಕಷ್ಟು ಸಾಕ್ಷಿಗಳನ್ನು ಸಂಗ್ರಹಿಸಿದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಮುರುಘಾ ಶರಣನ್ನು ಬಂಧಿಸಲು ಸಂತ್ರಸ್ತೆಯ ಹೇಳಿಕೆಯೇ ಪ್ರಮುಖ ಸಾಕ್ಷಿ ಎನ್ನಲಾಗುತ್ತಿದೆ. ಅಂತೆಯೇ ಸಂತ್ರಸ್ತೆಗೆ ನಡೆಸಲಾದ ವೈದ್ಯಕೀಯ ಪರೀಕ್ಷೆಯ ವರದಿಯೂ ಗುರುವಾರ ಪೊಲೀಸರ ಕೈ ಸೇರಿರಬಹುದು. ಆಧಾರದಲ್ಲೂ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಕರಣದಲ್ಲಿನ ಎರಡನೇ ಆರೋಪಿಯಾಗಿರುವ ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರು ನೀಡಿರುವ ಹೇಳಿಕೆಯೂ ಶ್ರೀಗಳನ್ನು ಬಂಧಿಸಲು ಪ್ರಮುಖ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಬಂಧಿತ ರಶ್ಮಿ,ಹೇಳಿಕೆಯಲ್ಲಿ ಶ್ರೀಗಳ ಬಂಧನಕ್ಕೆ ಪೂರಕ ಸಾಕ್ಷಿ ಪೊಲೀಸರಿಗೆ ದೊರಕಿರಬಹುದು ಎಂದು ಹೇಳಲಾಗುತ್ತಿದೆ.ಈ ಎಲ್ಲ ಸಾಕ್ಷಿಗಳನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಶ್ರೀಗಳ ಬಂಧನ ಹಿನ್ನೆಲೆ ಚಿತ್ರದುರ್ಗದಲ್ಲಿ ಹೈ ಅಲರ್ಟ್‌, ಮುಂದಿನ ಪ್ರಕ್ರಿಯೆ ಏನು?

Exit mobile version