Site icon Vistara News

Film City: ರಾಜ್ಯದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಮಾಡಲು ಸಿಎಂ ಬೊಮ್ಮಾಯಿಗೆ ಚಿತ್ರರಂಗದ ಗಣ್ಯರ ಮನವಿ

Film City

#image_title

ಬೆಂಗಳೂರು: ರಾಜ್ಯದಲ್ಲಿ ಚಿತ್ರನಗರಿ (Film City) ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.‌ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಸತೀಶ್ ರೆಡ್ಡಿ ಮತ್ತಿತರರು ಹಾಜರಿದ್ದರು.

ಇತ್ತೀಚೆಗೆ ಏರೋ ಇಂಡಿಯಾ-2023 ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದಾಗ ನಟ ಯಶ್‌, ರಾಜ್ಯದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಇದೀಗ ಚಿತ್ರರಂಗದ ಗಣ್ಯರು ಕೂಡ ರಾಜ್ಯದಲ್ಲಿ ಫಿಲ್ಮ್‌ ಸಿಟಿ ಅಗತ್ಯವಿದ್ದು, ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಅವರನ್ನು ಕೋರಿದ್ದಾರೆ.

ರಾಜ್ಯದಲ್ಲಿ ಸುಸಜ್ಜಿತ ಫಿಲ್ಮ್​​ಸಿಟಿ ನಿರ್ಮಾಣ ಆಗಬೇಕು ಎಂಬುದು ಚಿತ್ರರಂಗದ ಹಲವು ವರ್ಷಗಳ ಬೇಡಿಕೆ. ಇದೇ ಬೇಡಿಕೆಯನ್ನು ಯಶ್ ಅವರು ಪ್ರಧಾನಿ ಮೋದಿ ಎದುರು ಇಟ್ಟಿದ್ದರು. ಶೂಟಿಂಗ್​ಗೆ ಬೇಕಾದ ಎಲ್ಲ ವ್ಯವಸ್ಥೆ ಇರುವಂತಹ ಫಿಲ್ಮ್​ ಸಿಟಿ ನಿರ್ಮಾಣ ಮಾಡಿದರೆ ವಿದೇಶಕ್ಕೆ ಹೋಗಿ ಶೂಟಿಂಗ್ ಮಾಡುವ ಅಗತ್ಯವಿರುವುದಿಲ್ಲ. ಸಿನಿಮಾ ಖರ್ಚು ಕೂಡ ಕಡಿಮೆಯಾಗುತ್ತದೆ. ಇದರಿಂದ ಚಿತ್ರರಂಗಕ್ಕೆ ಅನುಕೂಲವಾಗಲಿದೆ. ಹೀಗಾಗಿ ಫಿಲ್ಮ್‌ ಸಿಟಿ ನಿರ್ಮಿಸಬೇಕು ಎಂದು ಮನವಿ ಮಾಡಿದ್ದರು.

Exit mobile version