Site icon Vistara News

Mysore Dasara 2023: ಬರ ಹಿನ್ನೆಲೆ ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

Mysore dasara

ಮೈಸೂರು: ಬರ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಅನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ದಸರಾವನ್ನು (Mysore Dasara 2023) ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾ ಆಚರಿಸಲಿದೆ ಎಂದು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Mysore Dasara : ನಾದಬ್ರಹ್ಮ ಹಂಸಲೇಖ ಈ ಬಾರಿಯ ಮೈಸೂರು ದಸರಾ ಉದ್ಘಾಟಕ; ಸಿಎಂ ಸಿದ್ದರಾಮಯ್ಯ ಘೋಷಣೆ

ಅ.15ರಿಂದ ನವರಾತ್ರಿ

ಅ.15ರಿಂದ ಮೈಸೂರಿನಲ್ಲಿ ಶರನ್ನವರಾತ್ರಿ ಉತ್ಸವ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಲಾಗುತ್ತದೆ.

Exit mobile version