ಬೆಂಗಳೂರು : ಏಳು ಐಎಎಸ್ ಅಧಿಕಾರಿಗಳನ್ನು ನಾನಾ ಇಲಾಖೆಗಳಿಗೆ ವರ್ಗಾವಣೆ (IAS Officers Transfer ) ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದ್ದಾರೆ. ಕಪಿಲ್ ಮೋಹನ್, ಉಮಾಶಂಕರ್ ಎಸ್ ಆರ್, ಸೆಲ್ವಕುಮಾರ್ ಎಸ್, ಪೊನ್ನುರಾಜ್ ಮತ್ತಿತರರಿಗೆ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ಕಪಿಲ್ ಮೋಹನ್ ಅವರನ್ನು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್. ಆರ್ ಅವರನ್ನು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಎಸ್ ಅವರನ್ನು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಕೌಶಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ನೀಡಲಾಗಿದೆ.
ಕರ್ನಾಟಕ ಸರಕಾರದ ಇ-ಆಡಳಿತ ಇಲಾಖೆಯ ಕಾರ್ಯದರ್ಶಿಯಾಗಿದ್ದ ಪೊನ್ನುರಾಜ್ ವಿ ಅವರನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಹಾಸನ ಜಿಲ್ಲೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್ ಆರ್. ಅವರಿಗೆ ಕೆಐಎಡಿಬಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಯನ್ನು ನೀಡಲಾಗಿದೆ. ಕೆಐಎಡಿಬಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿದ್ದ ಎನ್. ಶಿವಶಂಕರ್ ಅವರಿಗೆ ನಗರಾಡಳಿತ ಇಲಾಖೆಯ ನಿರ್ದೇಶಕ ಹುದ್ದೆ ನೀಡಲಾಗಿದೆ. ನಗರಾಡಳಿತ ಇಲಾಖೆಯ ನಿರ್ದೇಶಕರಾಗಿದ್ದ ಅರ್ಚನಾ ಎಮ್. ಎಸ್ ಅವರನ್ನು ಹಾಸನ ಜಿಲ್ಲೆಯ ಉಪ ಆಯುಕ್ತರಾಗಿ ನೇಮಿಸಲಾಗಿದೆ.