ಬೆಂಗಳೂರು : ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಕುರಿತು ಗುರುವಾರ (ಜು.14) ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಯಿತು.
ಕರಾವಳಿ ಜಿಲ್ಲೆಗಳಲ್ಲಿ ವರ್ಷಕ್ಕೆ 12 ಲಕ್ಷ ಕ್ವಿಂಟಲ್ ಕುಚ್ಚಲಕ್ಕಿ ಅಗತ್ಯವಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೇವಲ ಎರಡೂವರೆ ಲಕ್ಷ ಕ್ವಿಂಟಲ್ ಭತ್ತ ಮಾತ್ರ ಉತ್ಪಾದನೆ ಮಾಡಲಾಗುತ್ತದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಕೇರಳ ಮತ್ತು ತೆಲಂಗಾಣ ರಾಜ್ಯಗಳಿಂದ ಭತ್ತ ಪೂರೈಸಿಕೊಳ್ಳಲು ಚಿಂತನೆ ನಡೆದಿದೆ.
ಈ ಸಂಬಂಧ ಈ ವಾರಾಂತ್ಯದಲ್ಲಿ ಅಧ್ಯಯನ ತಂಡವೊಂದು ತೆಲಂಗಾಣಕ್ಕೆ ಭೇಟಿ ನೀಡಲಿದೆ. ಈಗಾಗಲೇ ಕೇರಳಕ್ಕೆ ಒಂದು ಅಧ್ಯಯನ ತಂಡ ಭೇಟಿ ನೀಡಿದೆ. ಈ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ಜಂಟಿ ನಿರ್ದೇಶಕ ವಿಜಯಕುಮಾರ್, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಆಹಾರ ನಿಗಮದ ಎಂಡಿ ಬಸವರಾಜ ಸೋಮಣ್ಣನವರ ಭಾಗಿಯಾಗಿದ್ದರು.
ಇದನ್ನು ಓದಿ| ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತ: ಕಾರಿನಲ್ಲಿದ್ದವರು ಸೇಫ್