ಯಾದಗಿರಿ: ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆನೆಕಾಲು ರೋಗ ನಿಯಂತ್ರಣಕ್ಕೆ ವಿತರಿಸಲಾದ ಮಾತ್ರೆ ಸೇವಿಸಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, (Students Fall Sick) ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಯಲ್ಲಿ ಸೋಮವಾರ ಮಕ್ಕಳಿಗೆ ಆನೆಕಾಲು ರೋಗ ನಿಯಂತ್ರಣದ ಮಾತ್ರೆಗಳನ್ನು ವಿತರಿಸಲಾಗಿತ್ತು. ಮಾತ್ರೆ ನುಂಗಿದ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ಮಕ್ಕಳು ಅಸ್ವಸ್ಥರಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮಕ್ಕಳಿಗೆ ಚಿಕಿತ್ಸೆ ನೀಡುವಾಗ ವೈದ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಪೋಷಕರು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ | Suicide | ಸ್ಕೂಲ್‌ನಲ್ಲಿ ಎಲ್ಲರೆದರು ಟೀಚರ್ ಬೈದರೆಂದು ನೇಣಿಗೆ ಶರಣಾದ ವಿದ್ಯಾರ್ಥಿನಿ!