Site icon Vistara News

Theerthahalli News: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭ; ಗೃಹ ಸಚಿವ ಆರಗ ಜ್ಞಾನೇಂದ್ರ

Araga Jnanendra Home Minister

ತೀರ್ಥಹಳ್ಳಿ: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದ್ದು, 2000 ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನ ತರಲಾಗಿದೆ. ಈ ಹಿಂದೆ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಕಾಲದಲ್ಲಿ ಅಭಿವೃದ್ಧಿಗೆ ಆದ್ಯತೆ ಇರಲಿಲ್ಲ. ಹಾಗಾಗಿ ಬಿಜಿಪಿ ಕುರಿತು ಈಗ ತೀರ್ಥಹಳ್ಳಿ ಜನತೆಗೆ ಹೆಚ್ಚಿನ ನಂಬಿಕೆ ಬಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಪ್ರಮುಖರ ಸಮೇತರಾಗಿ ಅನೇಕರು ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮುಖರು ಬಿಜೆಪಿಗೆ ಸೇರಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಣದ ಆಮಿಷ ತೋರಿಸಿ ಕಾಂಗ್ರೆಸ್ ಪಕ್ಷದಿಂದ ಸೆಳೆಯಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಪಕ್ಷದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಕಿಮ್ಮನೆಯವರ ಉಪೇಕ್ಷೆಯಿಂದ ಪಕ್ಷ ತೊರೆಯುತ್ತಿದ್ದಾರೆ ಎಂದು ಸೇರ್ಪಡೆಗೊಂಡವರೇ ಹೇಳುತ್ತಿದ್ದಾರೆ. ಸುಖಾಸುಮ್ಮನೆ ಆರೋಪ ಹೊರಿಸುತ್ತಿರುವ ಕಿಮ್ಮನೆ ರತ್ನಾಕರ್ ಶಿಕ್ಷಣ ಮಂತ್ರಿ ಆಗಿದ್ದಾಗ ಪರೀಕ್ಷೆ ಬರೆಯದೆ ಇದ್ದವರಿಗೂ ಕೆಲಸ ನೀಡಲಾಗಿತ್ತು. ವಂಚನೆ ಮಾಡಿದವರನ್ನು ಜೈಲಿಗೆ ಹಾಕಲಾಗಿದೆ. ಆದರೆ, ಆರೋಪಿಗಳ ರಕ್ಷಣೆಯೂ ಆಯಿತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆ ಮಾಡಲು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಬಾಳೆ ಬೈಲು ರಾಘವೇಂದ್ರ, ರಂಗಾಯಣ ನಿರ್ದೇಶಕ ಸಂದೇಶ ಜವಳಿ, ತಾಲೂಕು ಕಾರ್ಯದರ್ಶಿ ರಕ್ಷಿತ್ ಮೇಗರವಳ್ಳಿ, ಕವಿರಾಜ್ ಬೇಗುವಳ್ಳಿ, ಕುಕ್ಕೆ ಪ್ರಶಾಂತ್ ಉಪಸ್ಥಿತರಿದ್ದರು.

ಇದನ್ನೂ ಓದಿ | Shahrukh Khan: ಟಾಪ್‌ 10 ಶಾರುಖ್‌ ಖಾನ್‌ ಹಿಟ್‌ ಸಿನಿಮಾ, ಗಳಿಕೆ ಎಷ್ಟು?

Exit mobile version