Theft Case: 9 ವರ್ಷದ ಬಳಿಕ ಹೊಸಪೇಟೆ ಸರಗಳ್ಳತನ ಪ್ರಕರಣ ಸುಖಾಂತ್ಯ; ಚಿನ್ನದಂಗಡಿಗೆ ಕನ್ನ ಹಾಕಿದ ಸೇಲ್ಸ್‌ಮ್ಯಾನ್‌ - Vistara News

ಕರ್ನಾಟಕ

Theft Case: 9 ವರ್ಷದ ಬಳಿಕ ಹೊಸಪೇಟೆ ಸರಗಳ್ಳತನ ಪ್ರಕರಣ ಸುಖಾಂತ್ಯ; ಚಿನ್ನದಂಗಡಿಗೆ ಕನ್ನ ಹಾಕಿದ ಸೇಲ್ಸ್‌ಮ್ಯಾನ್‌

Theft Case: ವಿಜಯನಗರದಲ್ಲಿ 9ವರ್ಷದ ಬಳಿಕ ಸರಗಳ್ಳತನ ಪ್ರಕರಣ ಸುಖಾಂತ್ಯಗೊಂಡಿದ್ದರೆ, ಬೆಳಗಾವಿಯಲ್ಲಿ ಚಿನ್ನದಂಗಡಿಗೆ ಕನ್ನ ಹಾಕಿದ ಸೇಲ್ಸ್‌ಮ್ಯಾನ್‌ನ್ನು ಬಂಧಿಸಲಾಗಿದೆ. ಕೊಪ್ಪಳದಲ್ಲಿ ಹಗಲು ಹೊತ್ತಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರು ಪೊಲೀಸ್‌ ಬಲೆಗೆ ಬಿದ್ದರೆ, ಬೆಂಗಳೂರಿನಲ್ಲಿ ಕಳ್ಳನೊಬ್ಬ ಪೊಲೀಸರಿಗೆ ಲಾಕ್‌ ಆಗಿದ್ದಾನೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಕಳೆದ 2014ರಲ್ಲಿ ನಡೆದಿದ್ದ ಮಾಂಗಲ್ಯ ಸರ ಕಳ್ಳತನ ಪ್ರಕರಣವೊಂದನ್ನು (Theft Case) ಪೊಲೀಸರು ಇದೀಗ ಭೇದಿಸಿದ್ದಾರೆ. ವಿಜಯನಗರದ ಹೊಸಪೇಟೆ ಪಟ್ಟಣ ನೆಕ್ಸ್ಟ್​​ ಎಲೆಕ್ಟ್ರಾನಿಕ್‌ ಶೋ ರೂಂ ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದು ಕಿತ್ತುಕೊಂಡು ಭಾಸ್ಕರ್‌ ಎಂಬಾತ ಪರಾರಿ ಆಗಿದ್ದ.

Theft Case
ಭಾಸ್ಕರ್‌ ಸರಗಳ್ಳ

ಆರೋಪಿ ಭಾಸ್ಕರ್ ವಿರುದ್ಧ ಹೊಸಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ವಿರುದ್ಧ ಪಿ.ಐ ರಘುಕುಮಾರ್ ಐಪಿಸಿ ಕಲಂ 392 ದೂರು ದಾಖಲಿಸಿ, ಪಿಐ ಶ್ರೀಧರದೊಡ್ಡಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಗೀತಾ ಎಸ್.ಮಿರಜಕರ ವಾದ ಮಂಡನೆ ಮಾಡಿದ್ದರು. ಹೊಸಪೇಟೆಯ ಪ್ರಧಾನ ಸಿಜೆ(ಕಿ.ವಿ) ಮತ್ತು ಸಿಎಂಎಫ್.ಸಿ ನ್ಯಾಯಾಲಯದ ನ್ಯಾಯಾದೀಶರಾದ ಬಿ.ಕಿಷನ್ ಮಾಡಲಗಿ ವಿಚಾರಣೆ ನಡೆಸಿ ಆರೋಪಿಗೆ ಎರಡು ವರ್ಷದ ಸಾದಾ ಜೈಲುವಾಸ ಹಾಗೂ 5 ಸಾವಿರ ದಂಡವನ್ನು ವಿಧಿಸಿ ತೀರ್ಪು ನೀಡಿದೆ.

ಚಿನ್ನದಂಗಡಿಗೆ ಕನ್ನ ಹಾಕಿದ ಸೇಲ್ಸ್‌ಮ್ಯಾನ್‌

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಚಿನ್ನದಂಗಡಿಯಲ್ಲಿ ಕೆಲಸ ಮಾಡುವ ಸೇಲ್ಸ್‌ಮ್ಯಾನ್‌ಗಳೇ ಕನ್ನ ಹಾಕಿದ್ದಾರೆ. ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಗಿರೀಶ ಕಾಂತಿ ಎಂಬಾತ 36,81,528 ರೂ ಮೌಲ್ಯದ ‌643 ಗ್ರಾಂ ಬಂಗಾರ ಕದ್ದು ಪರಾರಿ ಆಗಿದ್ದ. ಕಳ್ಳತನ ನಡೆಯುತ್ತಿದ್ದಂತೆ ಅಂಗಡಿ ಮಾಲೀಕ ಹುಕ್ಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಗಿರೀಶನನ್ನು ಬಂಧಿಸಿ ಬಂಗಾರ ವಶಪಡಿಸಿಕೊಂಡಿದ್ದಾರೆ.

Theft Case

ಹಗಲು ಹೊತ್ತಿನ ಕಳ್ಳರನ್ನು ಬಂಧಿಸಿದ ಪೊಲೀಸರು

ಹಗಲು ಹೊತ್ತಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಹಾಗೂ ತಾವರಗೇರಾ ಪೊಲೀಸರು ಬಂಧಿಸಿದ್ದಾರೆ. ಕುಷ್ಟಗಿ ಹಾಗೂ ತಾವರಗೇರಾದಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದವು. ಏಳು ತಿಂಗಳನಿಂದ ಕುಷ್ಟಗಿ ಹಾಗೂ ತಾವರಗೇರಾದಲ್ಲಿ ಕಳ್ಳತನ ಪ್ರಕರಣ ವರದಿಯಾಗುತ್ತಿದ್ದವು. ಹೀಗಾಗಿ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಕಲಬುರಗಿ ಜಿಲ್ಲೆಯ ಮಟಕಿ ಗ್ರಾಮದ ಸಿದ್ದರಾಮ ಪೂಜಾರ, ಮೊಗಾಂಬಿಯ ಗಂಗಾರಾಮ, ಕಂಪ್ಲರ ತಾಂಡಾದ ಗುಲಾಬ್, ಆಳಂದದ ಹೀರಾಚಂದ್ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಬಂಧಿತರಿಂದ 13 ಲಕ್ಷ ರೂಪಾಯಿ ಮೌಲ್ಯದ 246 ಗ್ರಾಂ ಬಂಗಾರ, 91 ಸಾವಿರ ರೂಪಾಯಿ ಮೌಲ್ಯದ ಬೆಳ್ಳಿ ಹಾಗೂ 5 ಲಕ್ಷ ರೂಪಾಯಿ ಮೌಲ್ಯ ಕಾರು ಸೇರಿ ಒಟ್ಟು 19.09 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕುಖ್ಯಾತ ಮನೆಗಳ್ಳ ಲಾಕ್‌

ಯಶವಂತಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮನೆಗಳ್ಳನ ಬಂಧನವಾಗಿದೆ. ಮುದಾಸಿರ್(32) ಬಂಧಿತ ಆರೋಪಿ ಆಗಿದ್ದಾನೆ. ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿದಂತೆ ತುಮಕೂರಿನ ಠಾಣೆಗಳಲ್ಲೂ ದೂರು ದಾಖಲಾಗಿದ್ದವು. ಬರೋಬ್ಬರಿ 40ಕ್ಕೂ ಹೆಚ್ಚು ಮನೆ ಕಳವು ಕೇಸ್‌ಗಳಲ್ಲಿ ಭಾಗಿಯಾಗಿದ್ದ, ಒಂದೇ ದಿನದಲ್ಲಿ ಒಂದೇ ಏರಿಯಾದಲ್ಲಿ ಬೀಗ ಹಾಕಿದ್ದ ಮನೆಗಳೇ ಟಾರ್ಗೆಟ್‌ ಮಾಡುತ್ತಿರುವುದು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Disproportionate Assets: ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆ ಮತ್ತೆ ಒಂದು ವಾರ ವಿಸ್ತರಣೆ

ಸಹಚರರನ್ನು ಕಳ್ಳತನಕ್ಕೆ ಕರೆದೊಯ್ದರೆ ಸಿಕ್ಕಿಬೀಳುವ ಹಿನ್ನೆಲೆ ಮುದಾಸಿರ್‌ ಏಕಾಂಗಿಯಾಗಿಯೇ ಕಳ್ಳತನಕ್ಕೆ ಇಳಿಯುತ್ತಿದ್ದ. ಮೊದಲ ಮತ್ತು ಎರಡನೇ ಮಹಡಿಗಳನ್ನು ಗುರುತು ಮಾಡಿ ಬಳಿಕ ಬೀಗ ಹಾಕಿದ್ದ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಸದ್ಯ ಯಶವಂತಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road Accident: ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಬ್ಬ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

VISTARANEWS.COM


on

Road accident in Ankola The biker was burnt to death
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Gold Rate Today: ಕಳೆದ ತಿಂಗಳು ಚಿನ್ನದ ದರಗಳು ಬೆಂಗಳೂರು ಸೇರಿದಂತೆ ಎಲ್ಲೆಡೆ ದಾಖಲೆ ಪ್ರಮಾಣದ ಏರಿಕೆ ಕಂಡಿದ್ದವು. ಕಳೆದ ವಾರ ದರ ತುಸು ಇಳಿದು, ಮತ್ತೆ ಏರಲು ಆರಂಭಿಸಿದೆ. ಇಂದಿನ ದರಗಳು ಹೀಗಿವೆ.

VISTARANEWS.COM


on

gold model
Koo

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಬುಧವಾರ ತುಸು ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹45 ಹಾಗೂ ₹49 ಏರಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರ ತುಸು ಇಳಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,660ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,280 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,600 ಮತ್ತು ₹6,66,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,265 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,120 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,650 ಮತ್ತು ₹7,26,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,75072,800
ಮುಂಬಯಿ66,600 72,650
ಬೆಂಗಳೂರು66,600 72,650
ಚೆನ್ನೈ67,30073,420

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕರ್ನಾಟಕ

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Lok Sabha Election 2024: ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

VISTARANEWS.COM


on

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹಣದ ಹರಿವು ಹೆಚ್ಚಳವಾಗಿರುತ್ತದೆ. ಕೆಲವು ಕಡೆ ಅಕ್ರಮಗಳು ನಡೆಯುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಲ್ಲಿ ಬೆಂಗಳೂರಿನ ಹದಿನಾರು ಕಡೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿವೆ. ಒಟ್ಟಾರೆ 21.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳಲಾಗಿದೆ.

ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

2 ದಿನಗಳಲ್ಲಿ 16 ಕಡೆ ದಾಳಿ; ಸಿಕ್ಕ ಚಿನ್ನ, ನಗದು ಎಷ್ಟು?

1) 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆ
– ಶಂಕರಪುರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

2) 3 ಕೋಟಿ 39 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ 800 ಗ್ರಾಂ ಚಿನ್ನ ಪತ್ತೆ
ಶಾರದಾದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

3) 2 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 400 ಗ್ರಾಂ ಪತ್ತೆ
ಮರ್ಕೈಂಟಲ್ ಬ್ಯಾಂಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

4) 5 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 598 ಗ್ರಾಂ ಚಿನ್ನ ಪತ್ತೆ
ಜಯನಗರ 3ನೇ ಬ್ಲಾಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

5) 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆ
ಸಾರಸ್ವತ ಬ್ಯಾಂಕ್, ಚಾಮರಾಜಪೇಟೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

6) 3 ಲಕ್ಷ 34 ಸಾವಿರ ರೂಪಾಯಿ ಮೌಲ್ಯದ 6.38 ಕ್ಯಾರೆಟ್ ವಜ್ರ ಪತ್ತೆ
ಅಂಚೆ ಕಚೇರಿ ಬಳಿ, ಬಸವನಗುಡಿ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

7) 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆ
ಮಾತಾ ಶಾರದಾ ದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

8) 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆ
ಜಯನಗರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

ಇದನ್ನೂ ಓದಿ: VVPAT Verification: ಇವಿಯಂ-ವಿವಿಪ್ಯಾಟ್‌ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು, ಈ ಕ್ಷೇತ್ರವೊಂದರಲ್ಲೇ ಸರಿ ಸುಮಾರು 21.15 ಕೋಟಿ ರೂಪಾಯಿಯಷ್ಟು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಎಷ್ಟು ನಗದು ಪತ್ತೆಯಾಗಿದೆ ಎಂಬ ಬಗ್ಗೆ ಇನ್ನೂ ಐಟಿ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿಲ್ಲ.

Continue Reading

ವಿಜ್ಞಾನ

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Zero Shadow Day: ಎಲ್ಲರೂ ನಮ್ಮನ್ನು ತೊರೆದರೂ ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತು ಇಂದು ಕೆಲವು ನಿಮಿಷಗಳ ಮಟ್ಟಿಗೆ ಬೆಂಗಳೂರಿಗರ ಪಾಲಿಗೆ ಸುಳ್ಳಾಗಲಿದೆ. ಅಂದರೆ ಮಧ್ಯಾಹ್ನ ನೆರಳೇ ಮೂಡುವುದಿಲ್ಲ. ಇದನ್ನು ʼಶೂನ್ಯ ನೆರಳಿನ ದಿನʼ ಎನ್ನುತ್ತಾರೆ. ಇದು ಯಾಕೆ ಸಂಭವಿಸುತ್ತದೆ? ಏನಿದರ ವೈಶಿಷ್ಟ್ಯ? ಮುಂತಾದ ವಿವರ ಇಲ್ಲಿದೆ.

VISTARANEWS.COM


on

Zero Shadow Day
Koo

ಬೆಂಗಳೂರು: ಇಂದು (ಏಪ್ರಿಲ್‌ 24) ಬೆಂಗಳೂರಿಗರು ವಿಶಿಷ್ಟ ವಿದ್ಯಾಮಾನವೊಂದಕ್ಕೆ ಸಾಕ್ಷಿಯಾಗಲಿದ್ದಾರೆ. ಪ್ರತಿ ಕ್ಷಣವೂ ನಿಮ್ಮೊಂದಿಗೆ ಇರುವ ನೆರಳು ಕೆಲ ಹೊತ್ತು ನಿಮ್ಮನ್ನು ಬಿಟ್ಟು ದೂರ ಹೋಗಲಿದೆ. ಅಂದರೆ ಯಾವುದೇ ಲಂಬ ವಸ್ತುವೂ ನೆರಳನ್ನು ಹೊಂದಿರುವುದಿಲ್ಲ! ಇದನ್ನೇ ʼಶೂನ್ಯ ನೆರಳಿನ ದಿನʼ (Zero Shadow Day) ಎಂದು ಕರೆಯುತ್ತಾರೆ. ಇದು ಹೇಗೆ ರೂಪುಗೊಳ್ಳುತ್ತದೆ? ಏನಿದರ ವೈಶಿಷ್ಟ್ಯ ? ಮುಂತಾದ ನಿಮ್ಮ ಕುತೂಹಲಗಳಿಗೆ ಇಲ್ಲಿದೆ ಉತ್ತರ.

ಮಧ್ಯಾಹ್ನ 12.17ರಿಂದ 12.23ರ ನಡುವೆ ಈ ವಿದ್ಯಾಮಾನ ಸಂಭವಿಸಲಿದ್ದು, ಈ ವೇಳೆ ಸೂರ್ಯನ ಸ್ಥಾನವು ನಿಖರವಾಗಿ ಉತ್ತುಂಗದಲ್ಲಿರುತ್ತದೆ. ಹೀಗಾಗಿ ಎಲ್ಲ ವಸ್ತುಗಳ ನೆರಳು ಕಣ್ಮರೆಯಾಗುತ್ತದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಈ ಸಂದರ್ಭಕ್ಕಾಗಿ ತನ್ನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಏನಿದು ʼಶೂನ್ಯ ನೆರಳಿನ ದಿನʼ ?

ಸೂರ್ಯನು ಮಧ್ಯಾಹ್ನ ನಡು ನೆತ್ತಿಯ ಮೇಲಿರುವಾಗ ಲಂಬವಾಗಿರುವ ವಸ್ತುವಿಗೆ ಸ್ವಲ್ಪ ಮಾತ್ರವಾದರೂ ನೆರಳು ಇದ್ದೇ ಇರುತ್ತದೆ. ಆದರೆ ನಾಳೆ ಅಂಥ ಯಾವುದೇ ನೆರಳು ಇರುವುದಿಲ್ಲ. ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ.

ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಮತ್ತು ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ. ಈ ಪರಿಭ್ರಮಣ ಚಲನೆಯಿಂದಾಗಿ, ಒಂದು ಶೂನ್ಯ ನೆರಳು ದಿನವು ಉತ್ತರಾಯಣದಲ್ಲಿ (ಸೂರ್ಯ ಉತ್ತರದ ಕಡೆಗೆ ಚಲಿಸುವಾಗ) ಬರುತ್ತದೆ ಮತ್ತು ಇನ್ನೊಂದು ದಕ್ಷಿಣಾಯನದಲ್ಲಿ (ಸೂರ್ಯನು ದಕ್ಷಿಣಕ್ಕೆ ಚಲಿಸುವಾಗ) ಬರುತ್ತದೆ. 23.5 ಡಿಗ್ರಿ ಉತ್ತರ ಮತ್ತು 23.5 ಡಿಗ್ರಿ ದಕ್ಷಿಣ ಅಕ್ಷಾಂಶಗಳ ನಡುವೆ ವಾಸಿಸುವ ಜನರಿಗೆ, ಸೂರ್ಯನ ಅವನತಿಯು ಅವರ ಅಕ್ಷಾಂಶಕ್ಕೆ ಎರಡು ಬಾರಿ ಸಮನಾಗಿರುತ್ತದೆ.

ಮಹತ್ವ

ಇದು ಸೂರ್ಯನ ನಿಖರವಾದ ಸ್ಥಾನವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಜತೆಗೆ ವಿಜ್ಞಾನಿ ಮತ್ತು ಖಗೋಳಶಾಸ್ತ್ರಜ್ಞರಿಗೆ ಸೂರ್ಯನ ಬೆಳಕಿನ ನಡವಳಿಕೆ ಮತ್ತು ಭೂಮಿಯ ವಾತಾವರಣದ ಮೇಲೆ ಅದು ಬೀರುವ ಪರಿಣಾಮಗಳ ಬಗ್ಗೆ ಸಂಶೋಧನೆ ನಡೆಸಲು ಅವಕಾಶವನ್ನು ಕಲ್ಪಿಸುತ್ತದೆ. ಸಾಮಾನ್ಯವಾಗಿ ಶೂನ್ಯ ನೆರಳು ಸುಮಾರು ಒಂದೂವರೆ ನಿಮಿಷ ಕಾಲ ಅನುಭವಕ್ಕೆ ಬರುತ್ತದೆ.

ಎಲ್ಲೆಲ್ಲಿ , ಯಾವಾಗ?

ಶೂನ್ಯ ನೆರಳಿನ ದಿನ ದೇಶದ ವಿವಿಧ ನಗರಗಳಲ್ಲಿ ವರ್ಷದಲ್ಲಿ ಎರಡು ಬಾರಿ ಅನುಭವಕ್ಕೆ ಬರುತ್ತದೆ. ಅದು ಯಾವಾಗ ಎನ್ನುವ ವಿವರ ಇಲ್ಲಿದೆ.

  • ಕನ್ಯಾಕುಮಾರಿ: ಏಪ್ರಿಲ್ 10 ಮತ್ತು ಸೆಪ್ಟೆಂಬರ್ 1 (ಮಧ್ಯಾಹ್ನ: 12.21, 12.22)
  • ಬೆಂಗಳೂರು: ಏಪ್ರಿಲ್ 24 ಮತ್ತು ಆಗಸ್ಟ್ 18 (ಮಧ್ಯಾಹ್ನ: 12.17, 12.25)
  • ಹೈದರಾಬಾದ್: ಮೇ 9 ಮತ್ತು ಆಗಸ್ಟ್ 5 (ಮಧ್ಯಾಹ್ನ: 12.12, 12.19)
  • ಮುಂಬೈ: ಮೇ 15 ಮತ್ತು ಜೂನ್ 27 (ಮಧ್ಯಾಹ್ನ: 12.34, 12.45)
  • ಭೋಪಾಲ್: ಜೂನ್ 13 ಮತ್ತು ಜೂನ್ 28 (ಮಧ್ಯಾಹ್ನ: 12.20, 12.23)

ಇದನ್ನೂ ಓದಿ: Water From Air: ಗಾಳಿಯಿಂದಲೇ ನೀರು ಉತ್ಪಾದನೆ! ಬೆಂಗಳೂರು ಸ್ಟಾರ್ಟಪ್‌ನ ಕ್ರಾಂತಿಕಾರಿ ಹೆಜ್ಜೆ!

Continue Reading
Advertisement
Kannada New Movie Vidyarthi Vidyarthiniyare Bad Boys Full Video In AI Touch
ಸಿನಿಮಾ3 mins ago

Kannada New Movie: ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾದ ವಿಡಿಯೊ ಸಾಂಗ್‌ಗೆ ʻAIʼ ಟಚ್‌!

Vicky Kaushal transforms into Chhatrapati Sambhaji Maharaj
ಸಿನಿಮಾ5 mins ago

Vicky Kaushal: ಛತ್ರಪತಿ ಸಂಭಾಜಿ ಮಹಾರಾಜ ಲುಕ್‌ನಲ್ಲಿ ವಿಕ್ಕಿ ಕೌಶಲ್; ಫೋಟೊ ಲೀಕ್‌!

Patanjali Case
ದೇಶ37 mins ago

Patanjali Case: ಪತಂಜಲಿ ಕೇಸ್‌; ಜಾಹೀರಾತು ಮೂಲಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್‌

Road accident in Ankola The biker was burnt to death
ಕ್ರೈಂ38 mins ago

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Sachin Tendulkar Net Worth Assets Owned
ಕ್ರಿಕೆಟ್58 mins ago

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

gold model
ಚಿನ್ನದ ದರ59 mins ago

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
ಕರ್ನಾಟಕ1 hour ago

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Train Ticket Cancellation
ದೇಶ1 hour ago

Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

sam pitroda narendra modi
ಪ್ರಮುಖ ಸುದ್ದಿ1 hour ago

Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Rajkumar Birth Anniversary Dodmane family visited Rajkumar Samadhi
ಸಿನಿಮಾ2 hours ago

Rajkumar Birth Anniversary: ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌