Site icon Vistara News

Theft Case | ಪೊಲೀಸರ ಮನೆಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Theft Case

ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯ ಬಿಜಿಎಸ್ ಶಾಲೆ ಸಮೀಪ ಕಳ್ಳರು (Theft Case) ಕೈ ಚಳಕ ತೋರಿಸಿದ್ದಾರೆ. ಪೊಲೀಸರ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ದೋಚಿ ಪರಾರಿ ಆಗಿದ್ದಾರೆ.

ಕೆ.ಆರ್.ಎಸ್ ಠಾಣೆಯಲ್ಲಿ ಪೊಲೀಸ್‌ ಪೇದೆಯಾಗಿರುವ ರವಿ ಹಾಗೂ ಕುಟುಂಬ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಯಾರೂ ಇಲ್ಲದನ್ನು ತಿಳಿದ ಕಳ್ಳರು ಬಾಗಿಲ ಬೀಗ ಮುರಿದಿದ್ದಾರೆ. ಬಳಿಕ ಮನೆಯಲ್ಲಿದ್ದ ಸುಮಾರು 3.80 ಲಕ್ಷ. ರೂ ಮೌಲ್ಯದ 95 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.

ಕೆಆರ್‌ಎಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರ ಮನೆಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯರ ಪಾಡೇನು ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ | Illegal mining | ಪೊಲೀಸರ ಎದುರಿಗೆ ಹೊಡಿಬಡಿ; ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಥಳಿತ

Exit mobile version