Theft Case : ಪ್ರಯಾಣಿಕರ ಸೋಗಿನಲ್ಲಿ ರ‍್ಯಾಪಿಡೊ‌ ಚಾಲಕನ ಕಿಡ್ನ್ಯಾಪ್‌! - Vistara News

ಕರ್ನಾಟಕ

Theft Case : ಪ್ರಯಾಣಿಕರ ಸೋಗಿನಲ್ಲಿ ರ‍್ಯಾಪಿಡೊ‌ ಚಾಲಕನ ಕಿಡ್ನ್ಯಾಪ್‌!

Theft case: ರ‍್ಯಾಪಿಡೊ‌ ಚಾಲಕರನ್ನೇ (rapido bike) ಟಾರ್ಗೆಟ್ ಮಾಡುವ ಆ ಸುಲಿಗೆಕೋರ ಪ್ರಯಾಣಿಕರ ಸೋಗಿನಲ್ಲಿ ರೈಡಿಂಗ್‌ ಬುಕ್ ಮಾಡಿಕೊಳ್ಳುತ್ತಿದ್ದ. ನಿರ್ಜನ ಪ್ರದೇಶ ಅಥವಾ ಮನೆಗೆ ಕರೆದೊಯ್ದು ಚಾಲಕನಿಗೆ ಚಾಕು ತೋರಿಸಿ ಹೆದರಿಸಿ ಸುಲಿಗೆ ಮಾಡುತ್ತಿದ್ದವನು ಈಗ ಖಾಕಿ ಖೆಡ್ದಕ್ಕೆ ಬಿದ್ದಿದ್ದಾನೆ.

VISTARANEWS.COM


on

Rapido driver kidnapped
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಳ್ಳತನ, ಸುಲಿಗೆ ಪ್ರಕರಣಗಳು ವರದಿ ಆಗುತ್ತಿದೆ. ಸದ್ಯ ರಾಜಧಾನಿ ಬೆಂಗಳೂರಲ್ಲಿ ಕಳ್ಳರು ಯಾವ್ಯಾವ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಾರೆ ಎಂಬ ಅಂದಾಜು ಸಿಗುತ್ತಿಲ್ಲ. ಮೈ ಬಗ್ಗಿಸಿ ದುಡಿಯಲಾರದ ಕೆಲವರು ಅಡ್ಡದಾರಿ ಹಿಡಿದು ಜನರಿಂದ ಸುಲಿಗೆ (Theft Case) ಮಾಡಿ ಹಣ ಮಾಡುತ್ತಾರೆ. ಕೆಲ ಕಳ್ಳಕಾಕರು ಗ್ಯಾಂಗ್‌ ಕಟ್ಟಿಕೊಂಡು ದರೋಡೆಗಿಳಿದರೆ, ಇಲ್ಲೊಬ್ಬ ಸಿಂಗಲ್‌ ಆಗಿ (rapido bike) ಫೀಲ್ಡಿಗಿಳಿಯುತ್ತಿದ್ದ.

ಕೇವಲ ರ‍್ಯಾಪಿಡೋ ಚಾಲಕರನ್ನೇ (rapido bike) ಟಾರ್ಗೆಟ್ ಮಾಡುವ ಈತ ಚಾಲಕರನ್ನು ಹೆದರಿಸಿ ಅವರಿಂದ ಹಣ ದೋಚಿ ಹೋಗುತ್ತಿದ್ದ. ಈ ಕಳ್ಳನ ಹಿಂದೆ ಬಿದ್ದ ಗಿರಿನಗರ ಪೊಲೀಸರು ಆರೋಪಿ ಪವನ್ ಎಂಬಾತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: CCB Police Raid : ಪಬ್‌, ಬಾರ್‌ ಮೇಲೆ ಸಿಸಿಬಿ ದಾಳಿ; ಮಾಜಿ, ಹಾಲಿ ಸಚಿವರ ಹೆಸ್ರು ಹೇಳಿದ ಅಪ್ರಾಪ್ತರು ಲಾಕ್‌!

ಈ ಪವನ್‌ ಸಂಜೆಯಾಗುತ್ತಿದ್ದಂತೆ ಪ್ರಯಾಣಿಕರ ಸೋಗಿನಲ್ಲಿ ರ‍್ಯಾಪಿಡೋ ಬೈಕ್‌ ಬುಕ್ ಮಾಡುತ್ತಿದ್ದ. ಬೈಕ್‌ನಲ್ಲಿ ಕೂತು ಸ್ವಲ್ಪ ದೂರ ಹೋಗುತ್ತಿದ್ದಂತೆ, ಚಾಕು ಹಿಡಿದು ಹೆದರಿಸಿ ತಾನು ಹೇಳುವ ಜಾಗಕ್ಕೆ ಹೋಗು ಎಂದು ಕಿಡ್ನ್ಯಾಪ್ ಮಾಡುತ್ತಿದ್ದ. ನೇರವಾಗಿ ತನ್ನ ರೂಮಿ ಕರೆದೊಯ್ದು ಸುಲಿಗೆ ಮಾಡುತ್ತಿದ್ದ. ಹೀಗೆ ರ‍್ಯಾಪಿಡೋ ಚಾಲಕ ಮನು ಎಂಬಾತನನ್ನು ಈ ಪವನ್‌ ಕಿಡ್ನ್ಯಾಪ್‌ ಮಾಡಿ ರೂಮಿನಲ್ಲಿ ಲಾಕ್‌ ಮಾಡಿ ಸುಲಿಗೆ ಮಾಡಿದ್ದಾನೆ.

ಮನು ಬಳಿಯಿರುವ ಹಣವನ್ನು ಕಸಿದುಕೊಂಡಿದ್ದಾನೆ. ಬಳಿಕ ಮೊಬೈಲ್ ಹಾಗೂ ಗಾಡಿ ನೀಡಿ ಕಳಿಸಿದ್ದಾನೆ. ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬರುತ್ತಿದ್ದಂತೆ ಚಾಲಕ ಮನು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಗಿರಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಪವನ್‌ನನ್ನು ಬಂಧಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Lok Sabha Election 2024: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಲಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಅಂತಿಮ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

VISTARANEWS.COM


on

Ballari DC Prashanth Kumar Mishra visit to Vote counting centre Review of final preparations
Koo

ಬಳ್ಳಾರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 (Lok Sabha Election 2024) ರ ಮತ ಎಣಿಕೆ ಕಾರ್ಯವು ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಲಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಅಂತಿಮ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಜೂ.04 ರಂದು ಬೆಳಿಗ್ಗೆ 08 ಗಂಟೆಗೆ ಮತ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟ್ರಾಂಗ್ ರೂಂ ಗಳನ್ನು ತೆರೆಯುವುದು, ಪೋಸ್ಟಲ್ ಬ್ಯಾಲೆಟ್‍ಗಳ ಎಣಿಕೆಗೆ ಸಿದ್ಧ ಮಾಡಿಕೊಳ್ಳುವುದು, ಮತ ಎಣಿಕಾ ಕಾರ್ಯ ನೆರವೇರಿಸುವ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಮತ್ತು ಏಜೆಂಟರುಗಳ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

ಇದನ್ನೂ ಓದಿ: Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

ಈಗಾಗಲೆ ಮತ ಎಣಿಕಾ ಕೊಠಡಿಗಳನ್ನು ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್‍ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮತಗಳ ಎಣಿಕಾ ಕಾರ್ಯ ಅತ್ಯಂತ ಸುಗಮ ಹಾಗೂ ಸುವ್ಯವಸ್ಥೆಯಿಂದ ಜರುಗಬೇಕು, ಈ ಬಗ್ಗೆ ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಎಣಿಕಾ ಕೇಂದ್ರ ಕಟ್ಟಡದಲ್ಲಿ ಅಂದು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಸೇರುವುದರಿಂದ ಉಪಹಾರ ಹಾಗೂ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿರಬೇಕು. ಕಟ್ಟಡದ ಪ್ರತಿ ಮಹಡಿಯಲ್ಲಿರುವ ಶೌಚಾಲಯಗಳನ್ನು ಸ್ವಚ್ಛವಾಗಿರಿಸಿ, ನಿಯಮಿತವಾಗಿ ಸ್ವಚ್ಛತೆಯ ನಿರ್ವಹಣೆಗೆ ಸ್ವಚ್ಛತಾ ಸಿಬ್ಬಂದಿ ನಿಯೋಜಿಸಬೇಕು, ಎಣಿಕಾ ಕೇಂದ್ರ ಪ್ರವೇಶಿಸಲು ಅಧಿಕೃತವಾಗಿ ಪಡೆದಿರುವ ಪ್ರವೇಶ ಅನುಮತಿ ಪತ್ರ (ಪಾಸ್) ಹೊಂದಿದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ವಿವಿಧ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Shira News: ಶಿರಾ ನಗರದ ಸಂತೆಪೇಟೆಯ ಗೋದಾಮುವೊಂದರ ಮೇಲೆ ಶಿರಾ ನಗರಸಭೆ ಆಯುಕ್ತ ರುದ್ರೇಶ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಿಢೀರ್‌ ದಾಳಿ ನಡೆಸಿ, ಸುಮಾರು 100 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್‌ ಅನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

100 kg of banned plastic seized by municipal council in Shira
Koo

ಶಿರಾ: ನಗರದ ಸಂತೆಪೇಟೆಯ ಗೋದಾಮುವೊಂದರ ಮೇಲೆ ಶಿರಾ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ನಿಷೇಧಿತ ಪ್ಲಾಸ್ಟಿಕ್‌ (Banned Plastic) ಅನ್ನು ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ (Shira News) ಜರುಗಿದೆ.

ಗೋದಾಮುವೊಂದರಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನಗರಸಭೆ ಆಯುಕ್ತ ರುದ್ರೇಶ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಿಢೀರ್‌ ದಾಳಿ ನಡೆಸಿ, ಸುಮಾರು 100 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್‌ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ರುದ್ರೇಶ್ ಮಾತನಾಡಿ, ಪಟ್ಟಣ, ನಗರ ವ್ಯಾಪ್ತಿಗೆ ಬರುವ ಎಲ್ಲ ಅಂಗಡಿ-ಮುಂಗಟ್ಟು ವ್ಯಾಪಾರಿಗಳಿಗೆ, ಹೋಟೆಲ್‌ ಮಾಲೀಕರಿಗೆ, ರಸ್ತೆ ಬದಿ ವ್ಯಾಪಾರಿಗಳು ಸೇರಿದಂತೆ ಜವಳಿ ಅಂಗಡಿ ಮಾಲೀಕರಿಗೂ ಕೂಡಾ ನಿಷೇಧಿತ ಪ್ಲಾಸ್ಟಿಕ್‌ ಕವರ್‌ ಬಳಸದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.

ಈಗಾಗಲೇ ನಗರಸಭೆ ವತಿಯಿಂದ ಹಲವಾರು ಬಾರಿ ಪಟ್ಟಣದ ವ್ಯಾಪಾರಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಾಡದಂತೆ ಎಚ್ಚರಿಕೆ ನೀಡುವುದರ ಜತೆಗೆ ದ್ವನಿವರ್ಧಕಗಳಲ್ಲಿ ಕೂಡ ಪ್ರಚಾರ ಮಾಡಲಾಗಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ವ್ಯಾಪಾರಿಗಳಿಗೆ ಕಾನೂನು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಯಾರೇ ಆದರೂ ಅಕ್ರಮವಾಗಿ ನಿಷೇಧಿತ ಪ್ಲಾಸ್ಟಿಕ್‌ ಅನ್ನು ಮಾರಾಟ ಮಾಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದರ ಜತೆಗೆ ಅವರ ಅಂಗಡಿ ಪರವಾನಿಗೆಯನ್ನು ರದ್ದುಗೊಳಿಸಲಾಗವುದು ಮತ್ತು ಅವರಿಗೆ ನ್ಯಾಯಾಲಯದ ಮುಖಾಂತರ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

ಈ ಸಂದರ್ಭದಲ್ಲಿ ನಗರಸಭೆ ಪರಿಸರ ಎಂಜಿನಿಯರ್‌ ಪಲ್ಲವಿ, ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್ ಹ್ಯಾನ್ಸೆನ್‌ಗೆ ಸೆಲ್ಕೋ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

Selco India: ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು (Selco India) ಕೊಡಮಾಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಸೌರವಿದ್ಯುತ್ ಪ್ರವರ್ತಕ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಬೆಂಗಳೂರು ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ ಕುಮಾರ್‌, ಪ್ರಶಸ್ತಿ ಪ್ರದಾನ ಮಾಡಿದರು.

VISTARANEWS.COM


on

Selco India SELCO Suryamitra Annual Award to Richard Hansen of America
Koo

ಬೆಂಗಳೂರು: ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು (Selco India) ಕೊಡಮಾಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಸೌರವಿದ್ಯುತ್ ಪ್ರವರ್ತಕ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ ಕುಮಾರ್‌ ಅವರು, ರಿಚರ್ಡ್ ಹ್ಯಾನ್ಸೆನ್ ಅವರಿಗೆ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ: Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

ಕಾರ್ಯಕ್ರಮದಲ್ಲಿ ಸೆಲ್ಕೋ ಫೌಂಡೇಷನ್‌ನ ಸಹ ನಿರ್ದೇಶಕಿ ರಚಿತಾ ಮಿಶ್ರಾ, ಮುಖ್ಯ ಹಣಕಾಸು ಅಧಿಕಾರಿ ವಿ.ಕೆ. ಜೋಬಿ, ಕ್ರೆಡೆಲ್‌ನ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಸೆಲ್ಕೋ ಫೌಂಡೇಷನ್‌ನ ಸಿಇಒ ಡಾ. ಹರೀಶ್‌ ಹಂದೆ, ಸೆಲ್ಕೋ ಇಂಡಿಯಾದ ನಿರ್ದೇಶಕರಾದ ಎಲಿನಾ ಕ್ಯಾಸಲೋರಿ, ಥಾಮಸ್‌ ಪುಲ್ಲೆಂಕೇವ್‌, ಸಿಇಒ ಮೋಹನ್‌ ಭಾಸ್ಕರ್‌ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ತೀರಾ ನಿರ್ಲಜ್ಜೆಯ ಸರ್ಕಾರವಾಗಿದೆ. ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರು. ಭ್ರಷ್ಟಾಚಾರ ಹಗರಣ ಬಯಲಿಗೆ ಬಂದರೂ ಇದೂವರೆಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ ಎಂದು ಖಂಡಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಚಿವ ನಾಗೇಂದ್ರರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಮತ್ತು ಇದರಲ್ಲಿ ಸಿಎಂ ಸೇರಿದಂತೆ ಸಂಬಂಧಿಸಿದ ಎಲ್ಲರ ಮೇಲೂ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

VISTARANEWS.COM


on

union Minister Pralhad Joshi latest statement about Valmiki Corporation scam
Koo

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ (Valmiki Corporation scam) ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇದೊಂದು ಬಹುದೊಡ್ಡ ಭ್ರಷ್ಟಾಚಾರ ಹಗರಣವಾಗಿದ್ದು, ಇದರ ತನಿಖೆ ಸಿಬಿಐಗೇ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

ಸಚಿವ ನಾಗೇಂದ್ರರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಮತ್ತು ಇದರಲ್ಲಿ ಸಿಎಂ ಸೇರಿದಂತೆ ಸಂಬಂಧಿಸಿದ ಎಲ್ಲರ ಮೇಲೂ ತನಿಖೆ ಆಗಬೇಕು ಎಂದು ಜೋಶಿ ಆಗ್ರಹಿಸಿದರು.

ನಿರ್ಲಜ್ಜೆಯ ಸರ್ಕಾರ

ರಾಜ್ಯ ಕಾಂಗ್ರೆಸ್ ಸರ್ಕಾರ ತೀರಾ ನಿರ್ಲಜ್ಜೆಯ ಸರ್ಕಾರವಾಗಿದೆ. ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂ. ಭ್ರಷ್ಟಾಚಾರ ಹಗರಣ ಬಯಲಿಗೆ ಬಂದರೂ ಇದೂವರೆಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ ಎಂದು ಜೋಶಿ ಖಂಡಿಸಿದರು.

ಚುನಾವಣೆಗೆ ಬಳಸಲೆಂದೇ ಹಣ ಲೂಟಿ

ಚುನಾವಣೆಗೆ ಬಳಸಲೆಂದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ಲೂಟಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಸರ್ಕಾರಿ ದುಡ್ಡು ಲಪಟಾಯಿಸಿ ಚುನಾವಣೆ ನಡೆಸಲು ಷಡ್ಯಂತ್ರ ನಡೆಸಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.

ಯಾವ ಕಾರಣಕ್ಕಾಗಿ ನಿಗಮದ ಹಣವನ್ನು ಮತ್ತೊಂದು ಖಾತೆಗೆ ವರ್ಗಾಯಿಸಿದರು? ಎಂಬುದಕ್ಕೆ ಸರ್ಕಾರ ಇನ್ನೂ ಉತ್ತರಿಸಿಲ್ಲ ಎಂದು ಹರಿಹಾಯ್ದರು.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

ಇದೊಂದು ಬಹುದೊಡ್ಡ ಹಗರಣವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುವುದರಿಂದ ಪಾರದರ್ಶಕ ತನಿಖೆ ನಡೆಯುವುದು ಅನುಮಾನ. ಅಲ್ಲದೇ, ಯುನಿಯನ್ ಬ್ಯಾಂಕ್ ಕೆಲ ಅಧಿಕಾರಿಗಳೂ ಇದರಲ್ಲಿ ಇರುವುದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೇ ವಹಿಸಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

Continue Reading
Advertisement
Ballari DC Prashanth Kumar Mishra visit to Vote counting centre Review of final preparations
ಬಳ್ಳಾರಿ6 mins ago

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Exit poll 2024
ಪ್ರಮುಖ ಸುದ್ದಿ6 mins ago

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

100 kg of banned plastic seized by municipal council in Shira
ಕರ್ನಾಟಕ7 mins ago

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Selco India SELCO Suryamitra Annual Award to Richard Hansen of America
ಕರ್ನಾಟಕ8 mins ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್ ಹ್ಯಾನ್ಸೆನ್‌ಗೆ ಸೆಲ್ಕೋ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

union Minister Pralhad Joshi latest statement about Valmiki Corporation scam
ಕರ್ನಾಟಕ10 mins ago

Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Exit Poll 2024
Lok Sabha Election 202424 mins ago

Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

Exit Poll 2024
ದೇಶ53 mins ago

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Rahul Gandhi
ಕರ್ನಾಟಕ1 hour ago

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್1 hour ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌