ಬೆಂಗಳೂರು: ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮೊಬೈಲ್ ರಾಬರಿಗೆ ಬಂದ (Theft Case) ದುಷ್ಕರ್ಮಿಗಳು ಎಂಟು ಜನರಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಂಡೆ ಬಳಿ ಫೆ.26ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೆಣ್ಣೂರು ಬಂಡೆ ರಸ್ತೆಯಲ್ಲಿ ಮಳಿಯಪ್ಪ ಎಂಬಾತ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಸುಲಿಗೆಕೋರರು ಮಳಿಯಪ್ಪನನ್ನು ಅಡ್ಡಗಟ್ಟಿದ್ದಾರೆ. ಬಳಿಕ ಮೊಬೈಲ್ ಕೊಡುವಂತೆ ಧಮ್ಕಿ ಹಾಕಿದ್ದಾರೆ. ಇದನ್ನು ವಿರೋಧಿಸಿದಾಗ ಮಳಿಯಪ್ಪ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ.
ಇತ್ತ ಗಲಾಟೆ ಆಗುವುದನ್ನು ಗಮನಿಸಿದ ಮಳಿಯಪ್ಪ ಸಂಬಂಧಿಗಳು ದೌಡಾಯಿಸಿದ್ದಾರೆ. ಈ ವೇಳೆ ನಾಲ್ವರು ಸುಲಿಗೆಕೋರರು ಎಂಟು ಜನರ ಮೇಲೆ ಚಾಕುವಿನಿಂದ ದಾಳಿ ನಡೆಸಿ ಪರಾರಿ ಆಗಿದ್ದಾರೆ. ಘಟನೆಯಲ್ಲಿ ಸತೀಶ್, ಅಜಿತ್, ಕುಮಾರ್, ಪೂವರಸನ್, ಅರವಿಂದ ಹಾಗೂ ನಂದಗೋಪಾಲ್ ಎಂಬುವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: Bengaluru Fire Case: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡ ಅಂಗಡಿ ಮಾಲೀಕ
ಘಟನೆ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಏಳು ಜನರನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ