there can be innocent killings if Muslims decided to protest about sc st reservation says HD KumaraswamySC ST Reservation: ಮುಸ್ಲಿಮರು ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು: ಬಿಜೆಪಿ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ - Vistara News

ಕರ್ನಾಟಕ

SC ST Reservation: ಮುಸ್ಲಿಮರು ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು: ಬಿಜೆಪಿ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

ಸ್ವೇಚ್ಛಾಚಾರದಿಂದ ಇಷ್ಟ ಬಂದಂತೆ ಬಿಜೆಪಿ ಸರ್ಕಾರ ತೀರ್ಮಾನ ಮಾಡಿದೆ. ಮುಸ್ಲಿಂ ಸಮುದಾಯದ ನಡವಳಿಕೆಯನ್ನು ನಾನು ಶ್ಲಾಘಿಸುತ್ತೇನೆ ಎಂದು ಮೀಸಲಾತಿ ಪ್ರತಿಭಟನೆಯ ( SC ST Reservation) ಕುರಿತು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಗೆ ಸಿಗುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿದ್ದಕ್ಕೆ ಆಕ್ರೋಶಗೊಂಡು ಮುಸ್ಲಿಂ ಸಮುದಾಯದವರು ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು. ಇದಕ್ಕೆ ಯಾರು ಹೊಣೆಯಾಗುತ್ತಿದ್ದರು? ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಮೀಸಲಾತಿ ಸಂಬಂಧ ಬಂಜಾರ ಸಮುದಾಯ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೀಸಲಾತಿ ವ್ಯವಸ್ಥೆ ಹೇಗಿರಬೇಕು ಎಂದು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಒಂದಷ್ಟು ನಿಯಮಾವಳಿ ರೂಪಿಸಿದ್ದಾರೆ. ಆದರೆ ಈ ರೀತಿ ಮತ ಪಡೆಯುವ ಸಲುವಾಗಿ ಜಾತಿ ಜಾತಿಗಳ ನಡುವೆ ಸಂಘರ್ಷ ತಂದಿಡಬಾರದು. ಎರಡೂ ರಾಷ್ಟ್ರೀಯ ಪಕ್ಷಗಳು ಇಂತಹ ಕೆಲಸ ಮಾಡುತ್ತಿವೆ.

ಇದನ್ನೂ ಓದಿ: SC ST Reservation: ಎಲ್ಲಿಂದ ತೆಗೆದು ಮುಸ್ಲಿಂ ಮೀಸಲಾತಿ ನೀಡುತ್ತೀರ? ಒಬಿಸಿ ವಿರೋಧಿ ಕಾಂಗ್ರೆಸ್‌: ಸಂಸದ ತೇಜಸ್ವಿ ಸೂರ್ಯ ಆರೋಪ

ಸ್ವೇಚ್ಛಾಚಾರದಿಂದ ಇಷ್ಟ ಬಂದಂತೆ ಬಿಜೆಪಿ ಸರ್ಕಾರ ತೀರ್ಮಾನ ಮಾಡಿದೆ. ಮುಸ್ಲಿಂ ಸಮುದಾಯದ ನಡವಳಿಕೆಯನ್ನು ನಾನು ಶ್ಲಾಘಿಸುತ್ತೇನೆ. ಬಂಜಾರ ಸಮುದಾಯದಲ್ಲಿ ಆತಂಕ ಉಂಟಾಗಿ ಗಲಾಟೆ ಆಗಿದೆ. ಶೇ> 4 ಮೀಸಲಾತಿ ಕಿತ್ತು ಹಾಕಿದ್ದಕ್ಕೆ ಮುಸ್ಲಿಂ ಸಮುದಾಯ ಬೇಸರವಾಗಿ ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು. ಅದನ್ನು ಯಾರು ತಡೆಯುತ್ತಿದ್ದರು? ಹೊಣೆ ಯಾರು?

ಸಮಾಜದಲ್ಲಿ ಸಂಘರ್ಷ ಆಗಬೇಕು ಎನ್ನುವುದು ಬಿಜೆಪಿ ಗುರಿ. ಮುಸ್ಲಿಂ ಸಮುದಾಯ ನಿಮ್ಮ ಹಕ್ಕು ಪಡೆಯಲು ಹೋರಾಟ ಮಾಡಿ ಎಂದು ಮನವಿ ಮಾಡಿದರು. ಈಗಿನ ಮೀಸಲಾತಿ ಬದಲಾವಣೆ ಕುರಿತು ಜೆಡಿಎಸ್‌ ಬೆಂಬಲ ಇಲ್ಲ. ಸ್ವಾತಂತ್ರ್ಯ ಲಭಿಸಿ 75 ವರ್ಷದ ನಂತರವೂ ಸಮಾಜಗಳು ಹೇಗಿವೆ ಎನ್ನುವುದನ್ನು ಆಲೋಚಿಸಿ ನಿರ್ಧಾರ ಮಾಡಬೇಕು. ಮೀಸಲಾತಿಗಾಗಿ ಜನರು ಹೊಡೆದಾಡುತ್ತಿರುವುದು ಸರ್ಕಾರಿ ನೌಕರರಿಗಾಗಿ. ಆದರೆ ಈ ಸರ್ಕಾರದಲ್ಲಿ 80 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಲಂಚ ನಡೆಯುತ್ತಿದೆ. ನಮ್ಮ ಸರ್ಕಾರ ಬಂದರೆ ಈಗಿನ ಬಿಜೆಪಿ ಸರ್ಕಾರದ ಮೀಸಲಾತಿಯನ್ನು ಕಿತ್ತೊಗೆಯುವ ಜತೆಗೆ ಇಡೀ ನೇಮಕ ವ್ಯವಸ್ಥೆಯನ್ನೇ ಬದಲಾವಣೆ ಮಾಡುತ್ತೇನೆ. ಶುದ್ಧ ಮಾಡುತ್ತೇನೆ ಎನ್ನುತ್ತಲೇ ವ್ಯವಸ್ಥೆಯನ್ನು ಹದಗೆಡಿಸಿದ್ದಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Operation Hasta: ಅಫಜಲಪುರ ಮಾಜಿ ಶಾಸಕ, ಸಚಿವ ಮಾಲೀಕಯ್ಯ ಗುತ್ತೇದಾರ್‌, ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

VISTARANEWS.COM


on

Operation Hasta
Koo

ಬೆಂಗಳೂರು: ಅಫಜಲಪುರ ಮಾಜಿ ಶಾಸಕ, ಸಚಿವ ಮಾಲೀಕಯ್ಯ ಗುತ್ತೇದಾರ್‌, ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಬೆಂಬಲಿಗರು ಶುಕ್ರವಾರ ಕಾಂಗ್ರೆಸ್‌ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ (Operation Hasta) ಸೇರಿದ್ದಾರೆ.

ಮಾಜಿ ಸಚಿವ ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಉಂಟಾದ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಕಾಂಗ್ರೆಸ್‌ಗೆ ಮರಳಿದ್ದಾರೆ. ಹಾಗೆಯೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಪಕ್ಷದಿಂದ ದೂರ ಉಳಿದಿದ್ದ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ಇದೀಗ ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ.

ಬಿಜೆಪಿ ಬಗ್ಗೆ ಮಾಲೀಕಯ್ಯ ಗುತ್ತೇದಾರ್ ಅಸಮಾಧಾನ ಯಾಕೆ?

ಸಹೋದರ ನಿತಿನ್ ಗುತ್ತೇದಾರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ನಡುವಿನ ಸಂಬಂಧ ಮೊದಲಿನಿಂದಲೂ ಎಣ್ಣೆ ಶೀಗೇಕಾಯಿ ಆಗಿತ್ತು. ಒಬ್ಬರು ಒಂದು ಪಕ್ಷದಲ್ಲಿದ್ದರೆ ಮತ್ತೊಬ್ಬರು ಆ ಪಕ್ಷವನ್ನು ತೊರೆಯುತ್ತಾರೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಿತಿನ್‌ ಗುತ್ತೇದಾರ್‌ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಇದರಿಂದ ಮಾಲೀಕಯ್ಯ ಗುತ್ತೇದಾರ್‌ ಸೋಲು ಕಾಣಬೇಕಾಯಿತು. ಈಗ ಈಚೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿತಿನ್‌ ಗುತ್ತೇದಾರ್‌ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇದು ಮಾಲೀಕಯ್ಯ ಅವರ ಕಣ್ಣನ್ನು ಕೆಂಪಗಾಗಿಸಿತ್ತು.

ಇದನ್ನೂ ಓದಿ: Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

ನಿತಿನ್‌ ಬಿಜೆಪಿ ಸೇರ್ಪಡೆ ಸಂಬಂಧ ಮಾಲೀಕಯ್ಯ ಗುತ್ತೇದಾರ್‌ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2018ರ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಗೆಲ್ಲಬೇಕಿತ್ತು. ನಿತಿನ್‌ ಮತ್ತು ಕೆಲವು ಬಿಜೆಪಿ ಮುಖಂಡರು ನನಗೆ ಮೋಸ ಮಾಡಿದರು. 2023ರಲ್ಲಿ ನಿತಿನ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ನನ್ನನ್ನು ಸೋಲಿಸಿದ್ದಾನೆ. ಈಗ ಆತನಿಂದ ಕೋಟಿ ಕೋಟಿ ಹಣ ಪಡೆದು ಅವನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್‌ ಗಂಭೀರ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

Continue Reading

ಬಳ್ಳಾರಿ

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.

VISTARANEWS.COM


on

Ballari Lok Sabha constituency Congress candidate e Tukaram Election campaign
Koo

ಸಂಡೂರು: ಬಡವರ ಬಾಳು ಬಂಗಾರ ಮಾಡಿದ ಸರ್ಕಾರ ಅದು ಕಾಂಗ್ರೆಸ್‌ ಸರ್ಕಾರ (Congress Government). ಆರ್ಟಿಕಲ್‌ 371 (ಜೆ) ನಿಂದಾಗಿ ಬಡವರ ಮಕ್ಕಳು ಓದುವಂತಾಗಿದೆ. ಉದ್ಯೋಗ ಪಡೆಯುವಂತಾಗಿದೆ, ಇದನ್ನು ಜಾರಿ ಮಾಡಿದ್ದು ಕಾಂಗ್ರೆಸ್‌ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ (Lok Sabha Election 2024) ತಿಳಿಸಿದರು.

ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಅಂತಾಪುರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಅನುದಾನ ನೀಡಲಾಗಿದೆ. ನೀರು, ವಿದ್ಯುತ್‌, ರಸ್ತೆ ಹೀಗೆ ಬೇಕಾದ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ. ಅಭಿವೃದ್ಧಿ ನಿರಂತರವಾಗಿದೆ ಎಂದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ, ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಮುಖಂಡರಾದ ಏಕಾಂಬರಪ್ಪ, ಲಕ್ಷ್ಮಣ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Actor Darshan: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದಾಗ ಅವಘಡ ನಡೆದಿದೆ.

VISTARANEWS.COM


on

Actor Darshan
Koo

ಮಂಡ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ನಟ ದರ್ಶನ್ (Actor Darshan) ಅವರು ಶುಕ್ರವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ, ಪ್ರಚಾರದ ವೇಳೆ ನಟ ದರ್ಶನ್ ಇದ್ದ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವುದು ಕಂಡುಬಂದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ.

ಈ ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಅವರು ಚುನಾವಣಾ ಪ್ರಚಾರ ಮೊಟಕುಗೊಳಿಸಿ, ಬೆಂಗಳೂರಿಗೆ ತೆರಳಿದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ | letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Fraud Case in Bengaluru

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

Fraud Case in bengaluru

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೇಪಾಳ್ಯ ಸೇರಿದಂತೆ ವಿವಿಧೆಡೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಶುಕ್ರವಾರ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚಿಸಿದರು. ಯಲಹಂಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಬಿಜೆಪಿಗೆ ಭರ್ಜರಿ ಮತಗಳ ಲೀಡ್ ಸಿಗಲಿದೆ ಎಂದರು.

VISTARANEWS.COM


on

Chikkaballapur Lok Sabha Constituency NDA candidate Dr K Sudhakar election campaign
Koo

ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ. ಕೆ.ಸುಧಾಕರ್, ಯಲಹಂಕ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರೊಂದಿಗೆ ಶುಕ್ರವಾರ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು, ಮತಯಾಚನೆ ಮಾಡಿದರು.

ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೇಪಾಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಚುನಾವಣಾ ಪ್ರಚಾರ ಮತ್ತು ಸಭೆ ನಡೆಸಿ, ಮತಯಾಚನೆ ಮಾಡಿದರು.

ಇದನ್ನೂ ಓದಿ: Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

ಈ ವೇಳೆ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್‌, ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಂದಾದ ಬಳಿಕ ಕಾಂಗ್ರೆಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ಕಳೆದ ಬಾರಿ 2019ರಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜಿಪಿಗೆ 45,000 ಮತಗಳ ಲೀಡ್ ದೊರೆತಿತ್ತು, ಈ ಬಾರಿ ಎನ್‌ಡಿಎಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Narendra Modi
ದೇಶ8 mins ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ28 mins ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ30 mins ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ53 mins ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 202453 mins ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ1 hour ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ1 hour ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ1 hour ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ2 hours ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ2 hours ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ8 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ19 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌