Site icon Vistara News

ತುಮಕೂರು ಹಾಸ್ಟೆಲ್‌ಗಳಲ್ಲಿ ಅಕ್ಕಿ ದಾಸ್ತಾನಿದೆ: ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟನೆ

Shivaraj Tangadagi

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ‌ ಅಕ್ಕಿ ಕೊರತೆ ಇಲ್ಲ. ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.‌

ಇದನ್ನೂ ಓದಿ | Congress Guarantee: ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಸರ್ಕಾರ! ಗ್ಯಾರಂಟಿಯಿಂದ ಖಾಲಿಯಾಯ್ತಾ ಬೊಕ್ಕಸ?

ಇನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಪ್ರಧಾನ‌ ಕಾರ್ಯದರ್ಶಿ ಅವರೊಂದಿಗೂ ಕೂಡ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಅವರು ಕೂಡ ಅಕ್ಕಿ‌ ಮತ್ತು ಗೋಧಿ ಪೂರೈಕೆಯಲ್ಲಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿ ನಿಲಯಗಳಿಗೆ ಪ್ರಥಮ ಆದ್ಯತೆಯಲ್ಲಿ‌ ಆಹಾರ ಸರಬರಾಜು ಪೂರೈಕೆ ಮಾಡುವಂತೆ‌ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ, ಈ ಕುರಿತು ಯಾವುದೇ ತೊಂದರೆಯಾಗದಂತೆ ಕ್ರಮವಹಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ | Rahul Gandhi : ಮೋದಿಯನ್ನು ಟೀಕಿಸಲು ಐಶ್ವರ್ಯಾ, ಅಭಿಷೇಕ್ ಬಚ್ಚನ್​ ಎಳೆದು ತಂದ ರಾಹುಲ್ ಗಾಂಧಿ

Exit mobile version