Site icon Vistara News

ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೂ ಅರಣ್ಯವಾಸಿಗಳಿಗೆ ತೊಂದರೆಯಿಲ್ಲ: ಸಿಎಂ ಬೊಮ್ಮಾಯಿ ಅಭಯ

there-will-be-no-problem-for-the-forest-dwellers-until-the-supreme-court-verdict-cm-bommai-assures

ಕಾರವಾರ: ಸುಪ್ರೀಂ ಕೋರ್ಟ್‌ ತೀರ್ಪು ಆಗಮಿಸುವವರೆಗೂ ಅರಣ್ಯವಾಸಿಗಳಿಗೆ ಯಾವುದೇ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿರಸಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ,

ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೆ ಉತ್ತರಕನ್ನಡ ಜಿಲ್ಲೆಯೇ ಸೂಕ್ತ ಎಂಬ ಅಭಿಪ್ರಾಯವಿದೆ.

ಪ್ರವಾಹ ಪರಿಹಾರ ಸೇರಿ ಯಾವುದೇ ಯೋಜನೆ ಜಾರಿಗೆ ಮೊದಲನೆಯದಾಗಿ ಅರಣ್ಯವಾಸಿಗಳ ಸಮಸ್ಯೆ ಎದುರಾಗುತ್ತಿದೆ. ತಲೆತಲಾಂತರದಿಂದ ಇವರು ಅರಣ್ಯದಲ್ಲಿ ಜೀವನ ನಡೆಸುತ್ತಿದ್ದಾರೆ. ಅದಕ್ಕಾಗಿಯೇ, ಮೂರು ತಲೆಮಾರುಗಳ ಬದಲಿಗೆ ಒಂದು ತಲೆಮಾರಿನ ಮಾಹಿತಿ ಪಡೆದು ಹಕ್ಕುಪತ್ರ ನೀಡಲು ಚಿಂತನೆ ನಡೆಸಲಾಗಿದೆ.

ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೆ ಅರಣ್ಯವಾಸಿಗಳಿಗೆ ತೊಂದರೆ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಶಿವರಾಮ ಹೆಬ್ಬಾರ್, ಕೋಟ ಶ್ರೀನಿವಾಸ್ ಪೂಜಾರಿ, ಸಿ.ಸಿ. ಪಾಟೀಲ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಸುನೀಲ್ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತಾರಾಮ ಸಿದ್ದಿ ಉಪಸ್ಥಿತರಿದ್ದರು.

ಇದನ್ನೂ ಓದಿ | Karwar News | ಅರಣ್ಯವಾಸಿಗಳ ಸಮಸ್ಯೆ ಬಗ್ಗೆ ನಾಳೆ ಸಿಎಂಗೆ ಮೊರೆ; ಹತ್ತು ಬೇಡಿಕೆ ಇಡಲು ನಿರ್ಧಾರ

Exit mobile version