Site icon Vistara News

Police Raid: ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

ತುಮಕೂರು: ಜಿಲ್ಲೆಯ ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ (Police Raid) ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ಪೇದೆ ಸೆರೆ ಹಿಡಿದಿದ್ದಾರೆ.

ಕಳ್ಳ ಮಂಜ ಮತ್ತು ಪೊಲೀಸ್‌ ಪೇದೆ ದೊಡ್ಡಲಿಂಗಯ್ಯ

ಸಿಗ್ನಲ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಕಳ್ಳನನ್ನು ಪೇದೆ ಅಡ್ಡಗಟ್ಟಿದ್ದಾರೆ. ಆದರೂ ಅವರನ್ನು ಎಳೆದುಕೊಂಡು ಕಳ್ಳ ಮುಂದೆ ಸಾಗಿದ್ದಾನೆ. ಪಟ್ಟು ಬಿಡದ ಪೊಲೀಸ್‌, ಕಳ್ಳನನ್ನು ಬೆನ್ನಟ್ಟಿ ಕಾಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಬಳಿಕ ಅಲ್ಲಿದ್ದ ಟ್ರಾಫಿಕ್‌ ಪೊಲೀಸರು ಕಳ್ಳನನ್ನು ಹಿಡಿಯಲು ನೆರವಾಗಿದ್ದಾರೆ. ನಂತರ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಕಳ್ಳನಿಗೆ ಹಿಗ್ಗಾಮುಗ್ಗಾ ಬಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

https://vistaranews.com/wp-content/uploads/2024/08/WhatsApp-Video-2024-08-07-at-8.15.12-PM.mp4

ಖತರ್ನಾಕ್ ಕಳ್ಳನಿಗೆ ಚಿನ್ನದ ಸರ ಹಾಕಿರುವ ವೃದ್ಧೆಯರೇ ಟಾರ್ಗೆಟ್. ವೃದ್ಧೆಯರನ್ನೇ ಟಾರ್ಗೆಟ್ ಮಾಡಿ, ಪಿಂಚಣಿ, ಸರ್ಕಾರದ ಸವಲತ್ತು ಕೊಡಿಸುತ್ತೇನೆಂದು ನಂಬಿಸಿ, ಚಿನ್ನದ ಸರ ಕದ್ದು ಖತರ್ನಾಕ್ ಮಂಜ ಪರಾರಿಯಾಗುತ್ತಿದ್ದ. ಈತನ ವಿರುದ್ಧ ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಹೆಬ್ಬೂರು ಪೊಲೀಸ್ ಠಾಣೆ ಸೇರಿ ಸುಮಾರು 10ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದವು.

https://vistaranews.com/wp-content/uploads/2024/08/WhatsApp-Video-2024-08-07-at-8.15.12-PM-1.mp4

ಸುಮಾರು 1 ತಿಂಗಳಿಂದ ಪೊಲೀಸರ ಕೈಗೆ ಸಿಗದೇ ಕಣ್ತಪ್ಪಿಸಿ ಓಡಾಡುತ್ತಿದ್ದ 420 ಮಂಜ, ಬೆಂಗಳೂರಿನ ಮತ್ತಿಕೆರೆ ಕಡೆಯಿಂದ ಸದಾಶಿವನಗರ ಪೊಲೀಸ್ ಠಾಣೆ ಕಡೆಗೆ, ಬಿಳಿ ಬಣ್ಣದ ಹೋಂಡಾ ಆ್ಯಕ್ಟಿವಾ ಸ್ಕೂಟರ್‌ನಲ್ಲಿ ಬರುತ್ತಿರುವ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದರು. ಸದಾಶಿವನಗರ ಠಾಣೆ ಸಿಗ್ನಲ್ ಬಳಿ 420 ಮಂಜನನ್ನು ಹಿಡಿಯಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ದೊಡ್ಡಲಿಂಗಯ್ಯ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನ ಹಿಡಿದಿದ್ದಾರೆ.

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

couple's fight

ಸದ್ಯ ಖತರ್ನಾಕ್ ಕಳ್ಳ 420 ಮಂಜನನ್ನು ಬಂಧಿಸಿ ಕೊರಟಗೆರೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ತನಿಖೆ ಮುಂದುವರಿದಿದೆ.

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

couple's fight

ಕೋಲಾರ: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು (Couple’s fight), ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೌದು, ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ.

ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ ಅದೇನಾಯಿತೋ ಗೊತ್ತಿಲ್ಲ, ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಧು ಕೊನೆಯುಸಿರೆಳೆದಿದ್ದಾಳೆ.

ಇದನ್ನೂ ಓದಿ | Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ವರ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version