Site icon Vistara News

Thief Case | ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳ ಬೆಕ್ಕಿನಂತೆ ಬಂದರು; ಸಾರ್ವಜನಿಕರ ಕೈಯಲ್ಲಿ ಸಿಕ್ಕಿಬಿದ್ದರು

ಬೆಂಗಳೂರು: ಕಳ್ಳತನ (Thief Case) ಮಾಡಲು ಬಂದವರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ರಾಜ್ಯದ ಗಡಿ ತಮಿಳುನಾಡಿನ ಹೊಸೂರಿನಲ್ಲಿ ಮನೆ ಬಾಗಿಲು ಒಡೆದು ಕಳ್ಳತನಕ್ಕೆ ಮುಂದಾಗಿದ್ದವರು ಈಗ ಕಂಬಿ ಎಣಿಸುತ್ತಿದ್ದಾರೆ.

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಶಿವಕುಮಾರ್ ಎಂಬುವವರು ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲ ಊರಿಗೆ ತೆರಳಿದ್ದರು. ಈ ವೇಳೆ ಹೊಂಚು ಹಾಕಿದ ಕಳ್ಳರು ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿದ್ದರು. ಸಿಕ್ಕ ಸಿಕ್ಕ ವಸ್ತುಗಳನ್ನು ಬಾಚಿಕೊಂಡು ಪರಾರಿ ಆಗಲು ಮುಂದಾಗಿದ್ದರು. ಆದರೆ ಕಳ್ಳರ ನಾಸೀಬು ಕೆಟ್ಟಿತ್ತು.

ಮನೆಯಲ್ಲಿ ಶಬ್ದ ಆಗುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಮನೆಯನ್ನು ಸುತ್ತುವರಿದರು. ಈ ವೇಳೆ ಮನೆಯ ಬೀಗ ಒಡೆದಿರುವುದನ್ನು ಗಮನಿಸಿ, ಕೂಡಲೇ ಇದು ಕಳ್ಳರ ಕಿತಾಪತಿ ಎಂದು ತಿಳಿಯುತ್ತಿದ್ದಂತೆ ಮನೆಯ ಗೇಟ್ ಹಾಕಿ ಕಳ್ಳರನ್ನು ಕೂಡಿ ಹಾಕಿದ್ದಾರೆ.

ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಕಳ್ಳರು

ಅಕ್ಕಪಕ್ಕದ ಮನೆಯವರ ಸಮಯ ಪ್ರಜ್ಞೆಯಿಂದ ಕಳ್ಳರು ಸಿಕ್ಕಿಬಿದ್ದಿದ್ದು, ಕೂಡಲೇ ಸಾರ್ವಜನಿಕರು ಮತ್ತಿಗೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವರುಣ್, ಸಂತೋಷ್ ಮತ್ತು ಯಾರಫ್ ಎಂಬ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಪೊಲೀಸರಿಗೆ ಒಪ್ಪಿಸುವ ಮುನ್ನ ಕಳ್ಳರನ್ನು ಅರೆ ಬೆತ್ತಲೆಗೊಳಿಸಿ ಸಾರ್ವಜನಿಕರು ಛೀಮಾರಿ ಹಾಕಿದ್ದಾರೆ. ಮತ್ತಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಬೈಕ್‌ ಸವಾರರ ಮೇಲೆ ಹರಿದ ಲಾರಿ, ಇಬ್ಬರು ಸಾವು

Exit mobile version