Site icon Vistara News

Karnataka ELection: ಸಾವಿರಾರು ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರಲಿದ್ದಾರೆ: ಪದ್ಮರಾಜ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌

thousands of bjp leaders will join congress before karnataka election says DK shivakumar

#image_title

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ, ಅವರ ಪಕ್ಷದಲ್ಲಿ ಬಿರುಗಾಳಿ ಆರಂಭವಾಗಿದೆ. ಪರಿಣಾಮ ಸಾವಿರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಮೊದಲಿಗೆ ರಾಜಾಜಿನಗರ ಕ್ಷೇತ್ರದಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ಆರಂಭಿಸುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಭೈರತಿ ಸುರೇಶ್, ಮಾಜಿ ಮೇಯರ್ ಪದ್ಮಾವತಿ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿ ಮುಖಂಡ ಎಸ್‌. ಎಚ್‌. ಪದ್ಮರಾಜ್‌ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಮಾತನಾಡಿದರು.

ಇಂದು ಬಿಜೆಪಿಯಿಂದ ಪದ್ಮರಾಜ್, ಉಮೇಶ್ ಸೇರಿದಂತೆ ಸುಮಾರು 450 ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ. ಈ ಎಲ್ಲರನ್ನು ಪಕ್ಷದ ಪರವಾಗಿ ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಕ್ಷೇತ್ರ ನನಗೆ ಬಹಳ ಹತ್ತಿರವಾಗಿದೆ.

ನಾನು ಓದಿದ ಕಾಲೇಜು ಇದೇ ಕ್ಷೇತ್ರದಲ್ಲಿದೆ. ಈ ಕ್ಷೇತ್ರದಲ್ಲಿ ನಾನು ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದೆ. ಇಂದು ಬಿಜೆಪಿಯಿಂದ ಹಾಗೂ ಜೆಡಿಎಸ್ ಕಾಂಗ್ರೆಸ್ ಸೇರುತ್ತಿದ್ದು, ಮುಂದಿನ ದಿನಗಳಲ್ಲಿ ನಾನು ಹೆಸರು ಪ್ರಸ್ತಾಪಿಸುತ್ತೇನೆ. ರಾಜ್ಯದಲ್ಲಿ ಬದಲಾವಣೆ ಗಾಳಿ ಆರಂಭವಾಗಿದೆ. ಮಾಧ್ಯಮಗಳಲ್ಲಿ ಕೆಲವರ ಹೆಸರನ್ನು ಹೇಳಿ ಅವರನ್ನು ಸಂಪರ್ಕಿಸಲಾಗಿದೆ ಎಂಬ ಸುದ್ದಿ ಸೃಷ್ಟಿ ಮಾಡಲಾಗುತ್ತಿದೆ. ನೀವು ಯಾವುದೇ ಸುದ್ದಿ ಸೃಷ್ಟಿ ಮಾಡಬೇಡಿ. ಸಮಯ ಬಂದಾಗ ನಾನೇ ನಿಮಗೆ ಎಲ್ಲವನ್ನೂ ತಿಳಿಸುವೆ ಎಂದಿದ್ದಾರೆ.

ಇದನ್ನೂ ಓದಿ: Karnataka Election: ಸೀರೆ, ಕುಕ್ಕರ್‌ ಆಯ್ತು ಈಗ ಛತ್ರಿ ಹಿಡಿದ ಮುಖಂಡರು; ರಾಜಾಜಿನಗರದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಮತ ಗಾಳ

Exit mobile version