Site icon Vistara News

Shivamogga News: ತಹಸೀಲ್ದಾರ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ; 7 ಜನರ ವಿರುದ್ಧ FIR

Tahsildar visited encroached government land in Kasaba Hobali Madasuru village of Sagara Taluk

ಸಾಗರ: ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ (ಟ್ರಂಚ್‌) ನಿರ್ಮಿಸಲು ಹೋಗಿದ್ದ ತಹಸೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ (Life threatening) ಹಾಕಿ, ಸರ್ಕಾರಿ ಕರ್ತವ್ಯಕ್ಕೆ (government duty) ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಏಳು ಜನರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

ಘಟನೆಯ ಹಿನ್ನಲೆ

ತಾಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಸೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ. ಸ್ಥಳದಲ್ಲಿ ಬೀಟೆ, ನಂದಿ, ಹೊನ್ನೆ ಇತ್ಯಾದಿ ಕಾಡು ಜಾತಿ ಮರಗಳನ್ನು ಕಡಿದಿರುವುದು ಗಮನಕ್ಕೆ ಬಂದಿದೆ. ತಕ್ಷಣ ತಹಸೀಲ್ದಾರ್ ಅವರು ವಲಯ ಅರಣ್ಯಾಧಿಕಾರಿ ಅರವಿಂದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಇದನ್ನೂ ಓದಿ: Gruhajyoti scheme : ಉಚಿತ ವಿದ್ಯುತ್‌ಗೆ ನೀವಿನ್ನೂ ಅರ್ಜಿ ಹಾಕಿಲ್ಲವೇ? ಜುಲೈ 27 ಲಾಸ್ಟ್‌ ಡೇಟ್‌!

ಜಂಟಿ ಸರ್ವೇ ನಡೆಸಿದಾಗ ಸರ್ಕಾರಿ ಜಾಗದಲ್ಲಿ ಮರ ಕಡಿದು, ಒತ್ತುವರಿ ಮಾಡುವ ಪ್ರಯತ್ನ ನಡೆಸಿದ್ದು ಕಂಡು ಬಂದಿತ್ತು. ಸ್ಥಳದಲ್ಲಿದ್ದ ಗ್ರಾಮಸ್ಥರು ಸರ್ಕಾರಿ ಜಮೀನು ಒತ್ತುವರಿಯಾಗದಂತೆ ಟ್ರಂಚ್ ಹೊಡೆಯಲು ಮನವಿ ಮಾಡಿ, ಟ್ರಂಚ್ ಹೊಡೆಯಲು ಜೆಸಿಬಿಯನ್ನು ಗ್ರಾಮಸ್ಥರು ನೀಡುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರ ಮನವಿ ಮೇರೆಗೆ ಟ್ರಂಚ್ ಹೊಡೆಯಲು ಬಂದ ಜೆಸಿಬಿ ಚಾಲಕರಿಗೆ ಒತ್ತುವರಿದಾರರು ಬೆದರಿಕೆ ಹಾಕಿ ವಾಪಸ್ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಂತರ ಗ್ರಾಮಸ್ಥರು ಬೇರೆ ಕಡೆಯಿಂದ ಜೆ.ಸಿ.ಬಿ.ಯನ್ನು ತೆಗೆದುಕೊಂಡು ಬಂದು ತಹಸೀಲ್ದಾರ್ ಸಮ್ಮುಖದಲ್ಲಿ ಟ್ರಂಚ್ ಹೊಡೆಯಲು ಪ್ರಯತ್ನ ನಡೆಸಿದಾಗ ಒತ್ತುವರಿದಾರರು ಜೆಸಿಬಿ ಚಾಲಕರನ್ನು ಬೆದರಿಸಿ, ಜೆಸಿಬಿ ಎದುರು ಬಂದು ನಮ್ಮನ್ನು ಸಾಯಿಸಿ ಎಂದು ಸರ್ಕಾರಿ ಕೆಲಸಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ತಹಸೀಲ್ದಾರ್ ಮತ್ತು ವಲಯ ಅರಣ್ಯಾಧಿಕಾರಿಗಳು ಒತ್ತುವರಿದಾರರಿಗೆ ಅಲ್ಲಿಂದ ತೆರಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Rain News: ಮಳೆಗೆ ಹಿಮಾಚಲ ಪ್ರದೇಶದಲ್ಲಿ 81 ಸಾವು; ಯಮುನೆ ಅಪಾಯಕಾರಿ, ಕೇಜ್ರಿವಾಲ್ ತುರ್ತು ಸಭೆ

ಆದರೆ ಒತ್ತುವರಿದಾರರು ಕೆಲವರು ಮಾರಕಾಸ್ತ್ರಗಳಿಂದ ತಹಸೀಲ್ದಾರ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ. ಈ ಕುರಿತು ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಗ್ರಾಮಾಂತರ ಠಾಣೆಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಕೊಲೆ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ದೂರು ನೀಡಿದ್ದರು.

ಇದನ್ನೂ ಓದಿ: IND vs WI: ನೂತನ ಮೈಲಿಗಲ್ಲಿನ ಸನಿಹದಲ್ಲಿ ಆರ್​.ಅಶ್ವಿನ್​

ತಹಸೀಲ್ದಾರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಹುಚ್ಚಪ್ಪ, ಆನಂದ್, ಗಂಗಾಧರ, ದೇವರಾಜ್, ವೀರೇಂದ್ರ, ಉಮೇಶ್, ಲಂಕೇಶ್ ಎಂಬುವವರ ವಿರುದ್ದ ಸಿ.ಆರ್. ನಂ. 161/2023 ಕಲಂ 353, 307, 506, 504, 149 ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಏಳು ಜನರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Exit mobile version