ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿ 15 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಮೊಹಮ್ಮದ್ ಹಫೀಝ್ (35), ಅಮೀರ್ (34), ಜಾಕೀರ್ ಹುಸೇನ್(28) ಬಂಧಿತ ಆರೋಪಿಗಳು. ಮೊಹಮ್ಮದ್ ಹಫೀಝ್, ಕೊಲೆ, ದರೋಡೆ, ಕಳ್ಳತನ ಸೇರಿ ಎಂಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳನ್ನು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Road accident : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್; 35 ವಿದ್ಯಾರ್ಥಿಗಳಿಗೆ ಶಾಕ್, ಇಬ್ಬರು ಗಂಭೀರ
ಎಂಡಿಎಂಎ ಮಾರಾಟ ಜಾಲದ ಹಿಂದೆ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದೆ. ಹೀಗಾಗಿ ಡ್ರಗ್ ಪೆಡ್ಲರ್ಸ್ ಪತ್ತೆಗೆ ಸಿಸಿಬಿ ಮುಂದಾಗಿದೆ.
ಟಿಟಿ ವಾಹನ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ
ಹಾಸನ: ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Road Accident) ಜಿಲ್ಲೆಯ ಬೇಲೂರು ತಾಲೂಕು ಹಳೇಬೀಡು ಹೋಬಳಿಯ ಕಲ್ಲಹಳ್ಳಿ ಅರಣ್ಯದ ಬಳಿ ನಡೆದಿದೆ.
ಶರತ್ (20) ಮೃತ ಯುವಕ, ವೀರೇಶ್ (20) ಗಾಯಾಳು. ಹೀರೋ ಸ್ಪ್ಲೆಂಡರ್ ಬೈಕ್‌ನಲ್ಲಿ ಬೇಲೂರಿನಿಂದ ಹಳೇಬೀಡು ಕಡೆಗೆ ಬರುತ್ತಿದ್ದ ಸುರಪುರ ಗ್ರಾಮದ ಶರತ್ ಮತ್ತು ವೀರೇಶ್ ಇದ್ದ ಬೈಕ್, ಹಳೇಬೀಡಿನಿಂದ ಬೇಲೂರು ಕಡೆಗೆ ಬರುತ್ತಿದ್ದ ಟಿಟಿ ವಾಹನ ಮುಖಮುಖಿ ಡಿಕ್ಕಿಯಾಗಿವೆ. ಹೀಗಾಗಿ ಸ್ಥಳದಲ್ಲೇ ಶರತ್ ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ವೀರೇಶ್‌ನನ್ನು ಹಾಸನದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಟಿಟಿ ವಾಹನ ಚಾಲಕನನ್ನು ಹಳೇಬೀಡು ಪೊಲೀಸರು ವಶಕ್ಕೆ ಪಡೆದ್ದಾರೆ.
ಇದನ್ನೂ ಓದಿ | Contaminated Water: ಚಿತ್ರದುರ್ಗ ಕಲುಷಿತ ನೀರು ದುರಂತದಲ್ಲಿ ಸಾವಿನ ಸಂಖ್ಯೆ 3ಕ್ಕೇರಿಕೆ; ತನಿಖೆಗೆ ಸಿಎಂ ಆದೇಶ
ಫಾರೆಸ್ಟ್ ವಾಚರ್ ನೇಣಿಗೆ ಶರಣು
ಹಾಸನ: ಅರಣ್ಯ ವೀಕ್ಷಕರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಸುರೇಶ್ (50) ಆತ್ಮಹತ್ಯೆ ಮಾಡಿಕೊಂಡವರು. ಅರಣ್ಯ ಇಲಾಖೆಯ ಹಾನುಬಾಳು ವೃತ್ತ ವ್ಯಾಪ್ತಿಯಲ್ಲಿ ಫಾರೆಸ್ಟ್ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸುರೇಶ್, ತಾಲೂಕು ಅರಣ್ಯ ಇಲಾಖೆ ಕಚೇರಿಯ ಸಮೀಪವೇ ಮನೆ ಮಾಡಿಕೊಂಡು ವಾಸವಿದ್ದರು. ಕೌಟುಂಬಿಕ ಕಲಹದಿಂದ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.