ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ಚುರುಕುಗೊಂಡಿದೆ. ಕಲಬುರಗಿ ಅಶೋಕ್ ನಗರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿ ವಾರ್ಡನ್ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಬಂಧಿಸಿದೆ. ಅಭ್ಯರ್ಥಿಗಳಿಗೆ ಬ್ಲೂಟೂಥ್ ಮೂಲಕ ಉತ್ತರ ಹೇಳಿಕೊಟ್ಟಿದ್ದ ಆರೋಪದಲ್ಲಿ ಮೂವರ ಸೆರೆಯಾಗಿದೆ.
ಎಫ್‌ಡಿಎ ಚಂದ್ರಕಾಂತ್, ಬಾಲಕರ ವಸತಿ ನಿಲಯದ ವಾರ್ಡನ್ ಬಸವರಾಜ್, ವಿದ್ಯಾರ್ಥಿ ಶಶಿಧರ್ ಬಂಧಿತ ಆರೋಪಿಗಳು. ಇವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಅಕ್ರಮದಲ್ಲಿ ಇನ್ನೂ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ | Fire Accidents : ಹೋಟೆಲ್‌ನಲ್ಲಿ ಗ್ಯಾಸ್ ಲೀಕ್; ಬೆಂಕಿಗೆ ಬೆಂದು ಹೋದ್ರು ಅಡುಗೆ ಭಟ್ಟರು
2021ರ ಜ. 21 ರಂದು ಕರ್ನಾಟಕ ಪೊಲೀಸ್ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. ಅದೇ ವರ್ಷ ಅಕ್ಟೋಬರ್ 3 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿಯ ಲಿಖಿತ ಪರೀಕ್ಷೆ ನಡೆಸಲಾಯಿತು. ಆದರೆ ನೇಮಕಾತಿಯಲ್ಲಿ ಭಾರಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಸೇರಿ ಹಲವರ ಬಂಧನವಾಗಿತ್ತು. ನಂತರ ಪಿಎಸ್ಐ ಮರು ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ನ.10ರಂದು ಆದೇಶ ನೀಡಿತ್ತು. ಹೀಗಾಗಿ ಜ. 23ರಂದು ಪಿಎಸ್ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆ ನಡೆದಿತ್ತು.