ಯಾದಗಿರಿ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದ ಮಾರಾಮಾರಿಯಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಸೈದಾಪುರ ಪಟ್ಟಣದ ಸರ್ಕಾರಿ ಕೈಗಾರಿಕಾ ಉಪಕರಣಾಗಾರ ಕಾಲೇಜಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಒಂದು ಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ (Students Clash) ನಡೆಸಿರುವ ಆರೋಪ ಕೇಳಿಬಂದಿದೆ.
ಬಸವರಾಜ, ಮಹೇಶ್ ಮತ್ತು ಚಂದ್ರಕಾಂತ್ ಗಾಯಾಳುಗಳು. ಇವರನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಎರಡು ಕೋಮಿನ ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆದಿತ್ತು. ಎರಡು ಗುಂಪಿನ ವಿದ್ಯಾರ್ಥಿಗಳನ್ನು ಕರೆಸಿ ಕಾಲೇಜಿನ ಪ್ರಾಂಶುಪಾಲರು ಬುದ್ಧಿವಾದ ಹೇಳಿದ್ದರು. ಆದೆ, ಗುರುವಾರ ಮತ್ತೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಪುನಃ ಗಲಾಟೆ ನಡೆದಿದೆ. ಈ ವೇಳೆ ಮೂವರು ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಇದನ್ನೂ ಓದಿ | Physical Assault: ಪ್ರೇಮ ನಿವೇದನೆ ಒಪ್ಪದ 12 ವರ್ಷದ ಬಾಲಕಿಗೆ 10 ಬಾರಿ ಚಾಕು ಇರಿದು ಕೊಂದ ದುಷ್ಟ