Site icon Vistara News

Car Accident: ಬೆಳಗಾವಿಯಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ; ಮೂವರ ದುರ್ಮರಣ, ಮೂವರ ಸ್ಥಿತಿ ಗಂಭೀರ

Car Accident

ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ದುರಂತ (Car Accident) ಸಂಭವಿಸಿದ್ದು, ಮಹಿಳೆ, ಮಗು ಸೇರಿ ಮೂವರು ಕೊನೆಯುಸಿರೆಳೆದಿದ್ದಾರೆ.

ಮುತ್ತು ಸತ್ಯಪ್ಪ ನಾಯ್ಕ (8) ಗೋಪಾಲ ಸತ್ಯಪ್ಪ ನಾಯ್ಕ(45) ಸುಮಿತ್ರಾ ಸಂಗಳಾ (51) ಮೃತರು. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಇದನ್ನು ಓದಿ | Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

ದುಬೈನಲ್ಲಿ ನಡೆದ ಅಪಘಾತದಲ್ಲಿ ಉಳ್ಳಾಲದ ಯುವತಿ ಸಾವು

ಉಳ್ಳಾಲ: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿಯ ಕೆಂಪುಮಣ್ಣು ಯುವತಿ ಮೃತಪಟ್ಟಿದ್ದಾರೆ. ಮಂಗಳೂರು ತಾಪಂ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ (28) ಎಂಬ ಮೃತ ಯುವತಿ.

ಯುವತಿ ಪ್ರತಿದಿನ ಕಂಪೆನಿಯ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನೆಲೆ ತಮ್ಮದೇ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡ‌ರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್ಪೋಟ್ ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ | Road Accident : ಟಂಟಂ ಪಲ್ಟಿಯಾಗಿ ವೃದ್ಧೆ ಸಾವು; ಐವರು ಗಂಭೀರ ಗಾಯ

ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ಪೋಷಕರು ಸದ್ಯ ಪುತ್ರಿಯ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

Exit mobile version