ಮಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ (Road Accident) ಸುಳ್ಯ ಸಮೀಪದ ಅಡ್ಕಾರು ಎಂಬಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು.
ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾಗಿದೆ. ಈ ವೇಳೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿಯಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Bengaluru News : ಸಿಎಂ ಸೇರಿ ಕೈ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ಮೇಲೆ ಕೇಸ್!
ರಾಯಚೂರಿನಲ್ಲಿ ವೈದ್ಯನ ಮೇಲೆ ಗುಂಡಿನ ದಾಳಿ
ರಾಯಚೂರು: ಅಪರಿಚಿತ ವ್ಯಕ್ತಿಗಳಿಂದ ವೈದ್ಯನ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ರಾಯಚೂರು ಹೊರವಲಯದ ಸಾಥ್ ಮೈಲ್ ಬಳಿ ನಡೆದಿದೆ. ಡಾ.ಜಯಪ್ರಕಾಶ್ ಪಾಟೀಲ್ ಬೆಟ್ಟದೂರು ಎಂಬುವವರು ರಾಯಚೂರಿನಿಂದ ಮಾನ್ವಿ ಕಡೆ ಕಾರಿನಲ್ಲಿ ಹೊರಟಿದ್ದಾಗ ಗುಂಡಿನ ದಾಳಿ ನಡೆಸಲಾಗಿದೆ.
ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಕಾರಿನ ಬಾನೆಟ್‌ಗೆ ಗುಂಡು ತಗುಲಿದ್ದರಿಂದ ವೈದ್ಯ ಪ್ರಾಣಾಯಾಮದಿಂದ ಪಾರಾಗಿದ್ದಾರೆ. ಈ ಸಂಬಂಧ ರಾಯಚೂರು ಗ್ರಾಮೀಣ ಠಾಣೆಗೆ ವೈದ್ಯ ಡಾ. ಜಯಪ್ರಕಾಶ್ ಬೆಟ್ಟದೂರು ದೂರು ನೀಡಿದ್ದಾರೆ. ಸದ್ಯ ದಾಳಿಗೊಳಗಾದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ 3 ತಿಂಗಳ ಹಿಂದೆ ನಡೆದಿತ್ತಾ ದಾಳಿಗೆ ಸಂಚು
ಕಳೆದ ಮೂರು ತಿಂಗಳ ಹಿಂದೆಯೇ ವೈದ್ಯ ಡಾ. ಜಯಪ್ರಕಾಶ್ ಬೆಟ್ಟದೂರು ಅವರ ಮೇಲೆ ದಾಳಿಗೆ ಸಂಚು ನಡೆದಿತ್ತು ಎನ್ನಲಾಗಿದೆ. ಈ ಬಗ್ಗೆ 3 ತಿಂಗಳ ಹಿಂದೆ ವೈದ್ಯರು ದೂರು ನೀಡಿದ್ದಾರೆ. ಆದರೆ, ಹಂತಕರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರೆ ಎಂಬ ಪ್ರಶ್ನೆಗಳು ಮೂಡಿವೆ. ಹಣ ವಿಚಾರಕ್ಕೆ ವೈದ್ಯನ ಮೇಲೆ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.