Site icon Vistara News

KPTCL exam scam | ಪ್ರಕರಣದಲ್ಲಿ ಮತ್ತೆ ಮೂವರ ಬಂಧನ; ಬೆಳಗಾವಿ ಪೊಲೀಸರ ಕಾರ್ಯಾಚರಣೆ

KPTCL exam scam

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ (KPTCL exam scam) ಮತ್ತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ಇದರಿಂದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಹುಕ್ಕೇರಿ ತಾಲೂಕಿನ ಜೂನಿಯರ್ ಲೈನ್‌ಮನ್ ಗಿರೀಶ ಬನಾಜ್, ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ ಹಾಗೂ ಮೂಡಲಗಿ ‌ತಾಲೂಕಿನ ಅರಭಾವಿ ಗ್ರಾಮದ ಶಿವಾನಂದ ದುಂಡಪ್ಪ ಹಳ್ಳೂರ ಬಂಧಿತರು.

ಲೈನ್‌ಮನ್ ಗಿರೀಶ ಬನಾಜ್ ವಿರುದ್ಧ ಪ್ರಶ್ನೆಪತ್ರಿಕೆಗೆ ಉತ್ತರ ತಯಾರಿಸಿ ಅಭ್ಯರ್ಥಿಗಳಿಗೆ ಹೇಳಲು ಸಹಕರಿಸುತ್ತಿದ್ದ ಆರೋಪವಿದೆ. ಬೀರಪ್ಪ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಬೀರಪ್ಪ ಲಕ್ಷ್ಮಣ ಹಣಗಂಡಿ ಸ್ಮಾರ್ಟ್‌ ವಾಚ್ ಖರೀದಿ ಮಾಡಿ ಅಭ್ಯರ್ಥಿಗಳಿಗೆ ಕೊಟ್ಟಿದ್ದ. ಮತ್ತೊಬ್ಬ ಆರೋಪಿ ಶಿವಾನಂದ ದುಂಡಪ್ಪ ಹಳ್ಳೂರ ವಿರುದ್ಧ ಎಲೆಕ್ಟ್ರಾನಿಕ್ ಡಿವೈಸ್ ತೆಗೆದುಕೊಂದು ಪರೀಕ್ಷೆ ಬರೆಯಲು ಹೋದ ಆರೋಪವಿದೆ. ಹೀಗಾಗಿ ಈ ಮೂವರನ್ನು ಪೊಲೀಸರು ಬಂಧಿಸಿದ್ದು, ಶಿವಾನಂದನಿಂದ 5 ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಪರಿಕರ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಶ್ರೀಗಳಿಗೆ 9 ದಿನ ನ್ಯಾಯಾಂಗ ಬಂಧನ, ಜೈಲಿಗೆ ಶಿಫ್ಟ್‌

Exit mobile version