ನವದೆಹಲಿ: ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಚಲಿಸುವ, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಿಗೆ (Vande Bharat Trains) ಕಳೆದ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಲಭ್ಯವಾಗಲಿದೆ. ಅಷ್ಟೇ ಅಲ್ಲ, ಶೀಘ್ರದಲ್ಲಿಯೇ ದಕ್ಷಿಣ ಭಾರತಕ್ಕೆ ಬೆಂಗಳೂರು ಮಾರ್ಗ ಸೇರಿ ಮೂರು ರೈಲುಗಳ ಸೇವೆ ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೆಲಂಗಾಣದ ಕಾಚಿಗುಡಾದಿಂದ ಬೆಂಗಳೂರು, ತೆಲಂಗಾಣದ ಸಿಕಂದರಾಬಾದ್‌ನಿಂದ ಆಂಧ್ರಪ್ರದೇಶದ ತಿರುಪತಿ ಹಾಗೂ ಮಹಾರಾಷ್ಟ್ರದ ಪುಣೆ ಮಾರ್ಗಕ್ಕೆ ಹೊಸ ವಂದೇ ಭಾರತ್ ರೈಲುಗಳ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳಿಂದ ತಿಳಿದುಬಂದಿದೆ.
ಗಂಟೆಗೆ ಗರಿಷ್ಠ 130 ಕಿ.ಮೀ ವೇಗದಲ್ಲಿ ಓಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ದೇಶದ ಪ್ರಮುಖ ನಗರಗಳಲ್ಲಿ ಚಾಲನೆ ನೀಡಲಾಗಿದೆ. 2023 ಮುಗಿಯುವಷ್ಟರಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ 75 ವಂದೇ ಭಾರತ್ ರೈಲುಗಳ ಸಂಚಾರ ಹಾಗೂ ಮುಂದಿನ ಮೂರು ವರ್ಷದಲ್ಲಿ ಇವುಗಳ ಸಂಖ್ಯೆಯನ್ನು 400ಕ್ಕೆ ಏರಿಕೆ ಮಾಡುವುದು ಗುರಿಯಾಗಿದೆ.
ಇದನ್ನೂ ಓದಿ | Modi in Bengaluru | ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ, ಭಾರಿ ಸಂಭ್ರಮ