ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಮಂಗಳವಾರ ಗುಡುಗು ಸಹಿತ ಮಳೆಯಾಗುವ (Weather Report) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Election 2023: ಕೊಪ್ಪಳದಲ್ಲಿ ಕರಡಿ ಸೊಸೆಗೆ ಬಿಜೆಪಿ ಟಿಕೆಟ್; ಬಂಡಾಯವೆದ್ದ ಸಿ.ವಿ. ಚಂದ್ರಶೇಖರ್
ಇನ್ನು ಬೆಂಗಳೂರಿಗೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ. ಒಳನಾಡಿನ ಭಾಗದಲ್ಲೂ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Election 2023: ರೇವಣ್ಣ ಸೇರಿದಂತೆ ಜೆಡಿಎಸ್ ನಾಯಕರಿಂದ ನಾಮಪತ್ರ ಸಲ್ಲಿಕೆ
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ 3 ಸೆಂ.ಮೀ ಹಾಗೂ ಮಹಾಗಾವ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶವಾದ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.