Thunderstorm squall likely to occur in several districts including Bengaluru till April 3Weather Report: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಏ.3ರವರೆಗೆ ಗುಡುಗುಸಹಿತ ಮಳೆ ಸಾಧ್ಯತೆ - Vistara News

ಕರ್ನಾಟಕ

Weather Report: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಏ.3ರವರೆಗೆ ಗುಡುಗುಸಹಿತ ಮಳೆ ಸಾಧ್ಯತೆ

Weather Report: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Thunderstorm squall likely to occur in several districts including Bengaluru till April 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 48 ಗಂಟೆಗಳ ಕಾಲ (ಏ.3ರವರೆಗೆ) ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Report) ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ, ರಾತ್ರಿಯ ವೇಳೆಗೆ ಹಗುರ ಮಳೆ, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತವೆ.

ಇದನ್ನೂ ಓದಿ | Travel Tips: ರಾತ್ರಿಯಾಕಾಶದ ನಕ್ಷತ್ರಪುಂಜಗಳನ್ನು ನೋಡಬೇಕೆಂದರೆ ನೀವು ಇಲ್ಲಿಗೆ ಪ್ರವಾಸ ಮಾಡಿ!

ಶುಕ್ರವಾರ ಮಾ.31ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕೋಲಾರ ಜಿಲ್ಲೆಯ ರಾಯಲ್ಪಾಡು ಭಾಗದಲ್ಲಿ 7 ಸೆಂ.ಮೀ. ಮಳೆಯಾಗಿದ್ದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 3 ಸೆಂ.ಮೀ ಮಳೆಯಾಗಿತ್ತು. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 38.0 ಡಿ.ಸೆ. ಕಲಬುರಗಿಯಲ್ಲಿ ದಾಖಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Lok Sabha Election 2024: ಗೋಕಾಕ ಶಾಸಕರೇ, ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರವನ್ನು ಕೆಡವಲು ಮುಂದಾದರೆ ಇಡೀ‌ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Minister Lakshmi hebbalkar spoke in Prajadhwani 02 Lok Sabha election campaign programme at Gokak
Koo

ಗೋಕಾಕ್: ಹಿಂದುಳಿದ ಸಮುದಾಯದ ಸಿದ್ದರಾಮಯ್ಯ (CM Siddaramaiah) ಅವರನ್ನು ಕಾಂಗ್ರೆಸ್ ಪಕ್ಷ (Congress Party) 2ನೇ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಪೂರ್ಣ ಬಹುಮತದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೆಡವಲು ಅಷ್ಟು ಸುಲಭ ಅಲ್ಲ. ಗೋಕಾಕ್ ಶಾಸಕರೇ, ಪದೇ ಪದೇ ಲೋಕಸಭಾ ಚುನಾವಣೆ ನಂತರ ಸರ್ಕಾರ ಬೀಳಿಸುವುದಾಗಿ ಹೇಳುತ್ತಿದ್ದೀರಿ, ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lok Sabha Election 2024) ಪ್ರಶ್ನಿಸಿದರು.

ಗೋಕಾಕ್‌ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸರ್ಕಾರವನ್ನು ಕೆಡವಲು ಮುಂದಾದರೆ ಇಡೀ‌ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷ ಎಂದರೆ ಬದ್ದತೆ, ಎಲ್ಲಾ ಧರ್ಮ, ಜಾತಿ ಸಮುದಾಯದವರಿಗೆ ಮಣೆ ಹಾಕಿದೆ. ಭಾರತದ ಸಂಸ್ಕೃತಿಯನ್ನು ಉಳಿಸುತ್ತಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಎಲ್ಲಾ ವರ್ಗದವರಿಗೂ ಅಧಿಕಾರ ನೀಡುವ ಪಕ್ಷ ಎಂದು ಹೇಳಿದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಐದು ಗ್ಯಾರಂಟಿಗಳನ್ನು ಬಡವರ ಮನೆಗೆ ತಲುಪಿಸುತ್ತಿದ್ದೇವೆ. ಹಿಂದುಳಿದ ವರ್ಗಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆ ಅಪಾರ. ದೇವರಾಜ ಅರಸು ಬಳಿಕ ಅತಿಹೆಚ್ಚು ಬಡವರ ಪರ ಕೆಲಸ ಮಾಡಿದವರು ನಮ್ಮ ಸಿಎಂ ಸಿದ್ದರಾಮಯ್ಯನವರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇಡೀ‌ ದೇಶದ ಇತಿಹಾಸದಲ್ಲಿ ಕುರುಬ ಸಮುದಾಯದ‌ ವ್ಯಕ್ತಿಯನ್ನು ಎರಡನೇ ಬಾರಿಗೆ ಸಿಎಂ ಮಾಡಿದ್ದು ಕಾಂಗ್ರೆಸ್ ಪಕ್ಷ. ಅದರೆ, ಇದ್ದ ಒಬ್ಬ ಕುರುಬ ಸಮಾಜದ ನಾಯಕನನ್ನು ಬಿಜೆಪಿಯಿಂದ ಹೊರಹಾಕಲಾಗಿದೆ ಎಂದು ಟೀಕಿಸಿದರು.

ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬೆಳಗಾವಿ ಬಗ್ಗೆ ತಾತ್ಸರ ಮನೋಭಾವ ಹೊಂದಿರುವ ವ್ಯಕ್ತಿ. ಜಿಲ್ಲೆಯ ಜನರ ಕಷ್ಟ ಕಾಲದಲ್ಲಿ ಬರದ ಮೋದಿ ಚುನಾವಣೆ ವೇಳೆ ಮತ ಕೇಳಲು ಬರುತ್ತಾರೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯೇ ಎಂದು ಸಚಿವೆ‌ ಪ್ರಶ್ನಿಸಿದರು.‌

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕಾಂಗ್ರೆಸ್ ಅಭ್ಯರ್ಥಿ ಎಂಜಿನಿಯರಿಂಗ್ ಪದವೀಧರ, ಸುಸಂಸ್ಕೃತ ವ್ಯಕ್ತಿ. ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್‌ ಹೆಬ್ಬಾಳಕರ್ ಬೆಂಬಲವಾಗಿ ನಿಂತಿದ್ದಾನೆ. ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ. ತಾಯಿಯಾಗಿ ಮಗನ ಪರ ಸೆರಗೊಡ್ಡಿ ಮತಕೇಳುವೆ ಎಂದರು.

ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಮೀಸಲಾತಿಗೆ ಕಂಟಕ. ಒಂದು ಅವಕಾಶವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಡಿ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬಂದಿದ್ದಾರೆ. ಹುಬ್ಬಳ್ಳಿ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ, ನಾವೇಗೆ ಅವರನ್ನು ಪುರಸ್ಕರಿಸೋದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಡಾ. ಎಂ.ಸಿ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್ ಸವದಿ, ಶಾಸಕರಾದ ಬಿ.ಕೆ.ಸಂಗಮೇಶ್, ಪುಟ್ಟ ರಂಗಶೆಟ್ಟಿ, ರಾಜು ಸೇಠ್, ನಯನಾ ಮೋಟಮ್ಮ, ಕೇರಳ ಶಾಸಕ ರೋಜಿ ಜಾನ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಭೋವಿ ನಿಗಮದ ಅಧ್ಯಕ್ಷ ಪ್ರವೀಣ್ ಕುಮಾರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಮುಖಂಡರಾದ ಡಾ.ಮಹಾಂತೇಶ್ ಕಡಾಡಿ, ಮೋಹನ್ ಲಿಂಬಿಕಾಯಿ, ಅಶೋಕ್ ಪೂಜಾರಿ, ಸಿದ್ದಲಿಂಗ ದಳವಾಯಿ, ಅರವಿಂದ ದಳವಾಯಿ, ಚಂದ್ರಶೇಖರ್ ಕೊಣ್ಣೂರ, ಲಕ್ಕಣ್ಣ ಸವಸುದ್ದಿ, ಪ್ರೇಮಾ ಚಿಕ್ಕೋಡಿ, ಬಸವನಗೌಡ ಹೊಳಿಯಾಚೆ, ಪ್ರಕಾಶ್ ಢಾಗೆ, ಜಾರಿಕ್ ನದಾಫ್, ಗಂಗಾಧರ ಬಡಕುಂದ್ರಿ, ಭೀಮಪ್ಪ ಹಂದಿಗುಂದ್, ರಮೇಶ್ ಉಟಗಿ, ಸುರೇಶ್ ಅರಳಿ, ಲಗಮಣ್ಣ ಕಳಸನ್ನವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಬಳ್ಳಾರಿ

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಹೊಸಪೇಟೆ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha constituency Congress candidate eTukaram election campaign in Hosapete
Koo

ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್‌. ರಾಜ್ಯದ ಕಾಂಗ್ರೆಸ್‌ ಸರ್ಕಾರ (State Congress Government) ನೀಡಿದ ಪಂಚ ಗ್ಯಾರಂಟಿಗಳಿಂದ ಕೋಟ್ಯಾಂತರ ಜನರಿಗೆ ಅನುಕೂಲವಾಗಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ (Lok Sabha Election 2024) ತಿಳಿಸಿದರು.

ಹೊಸಪೇಟೆ ಪಟ್ಟಣದಲ್ಲಿ ಬಹಿರಂಗ ಪ್ರಚಾರ ಸಭೆ ಹಾಗೂ ರೋಡ್ ಶೋ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ದೇಶದ ಭವಿಷ್ಯ ನಮ್ಮೆಲ್ಲರ ಭವಿಷ್ಯ. ಆದ್ದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಬೇಕಿದೆ. ಇಲ್ಲಿನ ತುಂಗಾಭದ್ರಾ ಜಲಾಶಯದಿಂದ ಕೋಟ್ಯಂತರ ರೈತರು ಮತ್ತು ಅವರ ಅವಲಂಬಿತರಿಗೆ ಅನುಕೂಲವಾಗಿದೆ. ವಿಜಯನಗರ ಉಕ್ಕು ಕಾರ್ಖಾನೆಯಿಂದ ಅಸಂಖ್ಯಾತ ಉದ್ಯೋಗ ಸಿಕ್ಕಿದೆ. ದೊಡ್ಡ ದೊಡ್ಡ ಉದ್ಯಮಗಳು, ವಿದ್ಯುತ್‌ ಉತ್ಪಾದನಾ ಕೇಂದ್ರಗಳನ್ನು ನೀಡಿದ್ದು ಕಾಂಗ್ರೆಸ್‌. ಆದ್ದರಿಂದ ಕಾಂಗ್ರೆಸ್‌ ಬೆಂಬಲಿಸಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಈ ಸಂದರ್ಭದಲ್ಲಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ವೆಂಕಟೇಶ್ ಗೌಡ, ಶಾಸಕ ಗವಿಯಪ್ಪ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಮಿತಿ ಅಧ್ಯಕ್ಷ ಸಿರಾಜ್ ಶೇಖ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ಆರಂಭಿಸಿರುವ ಎಸ್‌ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣಗೆ ನೋಟಿಸ್‌ ನೀಡಿದ್ದಾರೆ.

VISTARANEWS.COM


on

Hassan Pen Drive case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading

ಕರ್ನಾಟಕ

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Sharavathi Project: ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆ ಟೆಂಡರ್ ಪ್ರಕ್ರಿಯೆ ರದ್ದು ಕೋರಿ ಎಲ್ & ಟಿ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇತ್ತೀಚೆಗೆ ಹೈಕೋರ್ಟ್‌ ವಜಾ ಮಾಡಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಂಪನಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ವಿಚಾರಣೆ ಬಳಿಕ ಅಲ್ಲಿಯೂ ಅರ್ಜಿ ವಜಾಗೊಂಡಿದೆ.

VISTARANEWS.COM


on

Sharavathi Project
Koo

ನವದೆಹಲಿ/ಬೆಂಗಳೂರು: ಕರ್ನಾಟಕದ ಪ್ರತಿಷ್ಠಿತ ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್‌ (Sharavathi Project) ಟೆಂಡರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಎಲ್ & ಟಿ (L&T) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಸುದೀರ್ಘ ವಿಚಾರಣೆಯ ನಂತರ ಎಸ್‌ಎಲ್‌ಪಿಯನ್ನು ವಜಾಗೊಳಿಸಿತು.

ರಾಜ್ಯವು ಸಾಕಷ್ಟು ಸಮಯವನ್ನು ನೀಡಿದೆ ಮತ್ತು ಇನ್ನೂ ಎಲ್ ಆ್ಯಂಡ್‌ ಟಿ ಬಿಡ್ ಸಲ್ಲಿಸಲು ಸಾಧ್ಯವಾಗಲಿಲ್ಲ. ಎಲ್ & ಟಿ ಭಾಗವಹಿಸಲು ಅರ್ಹತೆ ಹೊಂದಿಲ್ಲ. ಎಲೆಕ್ಟ್ರೋ-ಮೆಕ್ಯಾನಿಕಲ್ ಮತ್ತು ಹೈಡ್ರೋ-ಮೆಕ್ಯಾನಿಕಲ್ ಕೆಲಸಗಳಲ್ಲಿ ಅನುಭವದ ಕೊರತೆಯಿದೆ ಎಂದು ಪ್ರಕರಣದಲ್ಲಿ ವಿವರಿಸಲಾಗಿತ್ತು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಆದೇಶವನ್ನು ಎಲ್ & ಟಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಉಚ್ಚ ನ್ಯಾಯಾಲಯವು ಎಲ್ & ಟಿ ಅರ್ಜಿಯಲ್ಲಿ ವಾಣಿಜ್ಯ ಹಿತಾಸಕ್ತಿ ಹೊಂದಿದೆ ಎಂದು ತಿಳಿಸಿ ಸಲ್ಲಿಕೆಯಾದ ಮೇಲ್ಮನವಿಯನ್ನು ವಜಾಗೊಳಿಸಿತ್ತು.

ಪ್ರಸ್ತುತ ಕೆಪಿಸಿಎಲ್ ಕೈಗೊಂಡಿರುವ ನಡೆಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ (Sharavathi Pumped Storage power Project) ಟೆಂಡರ್‌ನ್ನು ಎಂಇಐಎಲ್ ಕಡಿಮೆ ದರ ನಮೂದಿಸುವ ಮೂಲಕ ತನ್ನದಾಗಿಸಿಕೊಂಡಿದೆ.

8 ಸಾವಿರ ಕೋಟಿ ರೂ. ಯೋಜನೆ ಟೆಂಡರ್‌ ಊರ್ಜಿತ

ರಾಜ್ಯದ ವಿದ್ಯುತ್ ಸಮಸ್ಯೆ ನೀಗಲು ಸರ್ಕಾರವು 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲು ಮುಂದಾಗಿರುವ ‘ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಗೆ ಸಂಬಂಧಿಸಿರುವ ಟೆಂಡರ್ ಪ್ರಕ್ರಿಯೆಯನ್ನು ಏ.25ರಂದು ಹೈಕೋರ್ಟ್ ಊರ್ಜಿತಗೊಳಿಸಿತ್ತು.

ಯೋಜನೆಗೆ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಎಲ್ & ಟಿ ಕಂಪನಿಯು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಅರ್ಜಿ ವಿಚಾರಣೆ ನಡೆಸಿ‌, ಮೇಲ್ಮನವಿ ವಜಾಗೊಳಿಸಿದ್ದರು.

ಟೆಂಡರ್‌ಗೆ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ಕೇವಲ 21 ದಿನ ನೀಡಲಾಗಿದೆ. ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎ) ಕೆಲ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ರೂಪಿಸಿದೆ ಎಂದು ಅರ್ಜಿದಾರರು ವಾದ ಮಂಡಿಸಿದ್ದರು. ಅಲ್ಲದೆ, 5 ವರ್ಷ ಯೋಜನಾ ಅವಧಿಯ 8,000 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗೆ ಕೇವಲ 21 ದಿನಗಳ ಟೆಂಡ‌ರ್ ಕೊನೆಗೊಳಿಸಲಾಗಿದೆ. ನೀತಿಸಂಹಿತೆಯಿಂದ ಪಾರಾಗಲು ತರಾತುರಿಯಲ್ಲಿ ಟೆಂಡರ್ ಕರೆಯಲಾಗಿದೆ. ತಮಗೆ ಟೆಂಡ‌ರ್ ಸಲ್ಲಿಕೆಗೆ 90 ದಿನ ಬೇಕಿತ್ತು. ಹೀಗಾಗಿ ಟೆಂಡರ್ ಅನೂರ್ಜಿತಗೊಳಿಸಬೇಕು ಎಂದು ಎಲ್ & ಟಿ ಕೋರಿತ್ತು.

ಇದನ್ನೂ ಓದಿ | Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

30 ದಿನಗಳ ಟೆಂಡರ್ ಅವಧಿಯನ್ನು ಕಡಿತಗೊಳಿಸಲು ಪ್ರಾಧಿಕಾರಕ್ಕೆ ಅಧಿಕಾರವಿದೆ. ಈಗಾಗಲೇ ಬಿಡ್ ತೆರೆಯಲಾಗಿದ್ದು, ಲೆಟರ್ ಆಫ್ ಅವಾರ್ಡ್ ಕೂಡ ನೀಡಲಾಗಿದೆ. ಪ್ರಕ್ರಿಯೆಗೆ ತಡೆ ನೀಡಬಾರದು ಎಂದು ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು. ಹೀಗಾಗಿ ಟೆಂಡ‌ರ್ ಪ್ರಕ್ರಿಯೆಯನ್ನು ಹೈಕೋರ್ಟ್ ಊರ್ಜಿತಗೊಳಿಸುವ ಮೂಲಕ ಸರ್ಕಾರದ ಆದೇಶ ಎತ್ತಿ ಹಿಡಿದು, ಮೇಲ್ಮನವಿಯನ್ನು ವಜಾಗೊಳಿಸಿತ್ತು. ಪ್ರಸ್ತುತ ಟೆಂಡರ್ ಅನ್ನು ಕಡಿಮೆ ದರ ನಮೂದಿಸಿದ್ದ ಮೇಘ ಎಂಜಿನಿಯರಿಂಗ್ ಆ್ಯಂಡ್‌ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಪಡೆದುಕೊಂಡಿದೆ.

Continue Reading
Advertisement
Divorce Celebration
ವೈರಲ್ ನ್ಯೂಸ್1 min ago

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

RBI Guideline
ವಾಣಿಜ್ಯ3 mins ago

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

IPL 2024
ಪ್ರಮುಖ ಸುದ್ದಿ9 mins ago

IPL 2024 : ಬುದ್ಧಿ ಹೇಳಿದರೂ ಕೇಳದ ಕೆಕೆಆರ್​ ಬೌಲರ್​ ರಾಣಾಗೆ ಮತ್ತೆ ದಂಡ ; ಒಂದು ಪಂದ್ಯದಿಂದ ಸಸ್ಪೆಂಡ್​​

Minister Lakshmi hebbalkar spoke in Prajadhwani 02 Lok Sabha election campaign programme at Gokak
ಕರ್ನಾಟಕ13 mins ago

Lok Sabha Election: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Ballari Lok Sabha constituency Congress candidate eTukaram election campaign in Hosapete
ಬಳ್ಳಾರಿ16 mins ago

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Hassan Pen Drive case
ಪ್ರಮುಖ ಸುದ್ದಿ40 mins ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ43 mins ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್1 hour ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ1 hour ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Reliance launched a new campaign for Campa-Cola
ದೇಶ1 hour ago

Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ15 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌