ಬೆಂಗಳೂರು: ಮುಂದಿನ 48 ಗಂಟೆಗಳ ಕಾಲ (ಏ.3ರವರೆಗೆ) ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Report) ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ, ರಾತ್ರಿಯ ವೇಳೆಗೆ ಹಗುರ ಮಳೆ, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಇದನ್ನೂ ಓದಿ | Travel Tips: ರಾತ್ರಿಯಾಕಾಶದ ನಕ್ಷತ್ರಪುಂಜಗಳನ್ನು ನೋಡಬೇಕೆಂದರೆ ನೀವು ಇಲ್ಲಿಗೆ ಪ್ರವಾಸ ಮಾಡಿ!
ಶುಕ್ರವಾರ ಮಾ.31ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕೋಲಾರ ಜಿಲ್ಲೆಯ ರಾಯಲ್ಪಾಡು ಭಾಗದಲ್ಲಿ 7 ಸೆಂ.ಮೀ. ಮಳೆಯಾಗಿದ್ದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 3 ಸೆಂ.ಮೀ ಮಳೆಯಾಗಿತ್ತು. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 38.0 ಡಿ.ಸೆ. ಕಲಬುರಗಿಯಲ್ಲಿ ದಾಖಲಾಗಿತ್ತು.