Ticket to lovebirds: ಸಾರಿಗೆ ಬಸ್ಸಲ್ಲಿ ಅಜ್ಜಿ-ಮೊಮ್ಮಗಳಿಗೆ ಉಚಿತ ಪ್ರಯಾಣ; 4 ಲವ್ ಬರ್ಡ್ಸ್‌ಗೆ 444 ರೂ. ಟಿಕೆಟ್! - Vistara News

ಕರ್ನಾಟಕ

Ticket to lovebirds: ಸಾರಿಗೆ ಬಸ್ಸಲ್ಲಿ ಅಜ್ಜಿ-ಮೊಮ್ಮಗಳಿಗೆ ಉಚಿತ ಪ್ರಯಾಣ; 4 ಲವ್ ಬರ್ಡ್ಸ್‌ಗೆ 444 ರೂ. ಟಿಕೆಟ್!

Ticket to lovebirds: ಬೆಂಗಳೂರಿನಿಂದ ಮೈಸೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ಅಜ್ಜಿ-ಮೊಮ್ಮಗಳಿಗೆ ಉಚಿತ ಟಿಕೆಟ್‌ ಸಿಕ್ಕಿದ್ದರೆ, ಅವರ ಜತೆಗಿದ್ದ 4 ಲವ್‌ ಬರ್ಡ್ಸ್‌ಗೆ ಬರೋಬ್ಬರಿ 444 ರೂ. ಟಿಕೆಟ್‌ ನೀಡಲಾಗಿದೆ.

VISTARANEWS.COM


on

ticket to Love birds
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆಯಿಂದ (Shakti scheme) ಕೋಟ್ಯಂತರ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಯೋಜನೆ ಆರಂಭವಾದ ಮೇಲೆ ಸದ್ದಿಲ್ಲದೆ ಸಾರಿಗೆ ನಿಗಮಗಳು ಟಿಕೆಟ್‌ ದರ ಏರಿಕೆ ಮಾಡುತ್ತಿವೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಈ ನಡುವೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಿದ ಅಜ್ಜಿ-ಮೊಮ್ಮಗಳಿಗೆ ಉಚಿತ ಟಿಕೆಟ್‌ ಸಿಕ್ಕಿದ್ದರೆ, ಅವರ ಜತೆಗಿದ್ದ 4 ಲವ್‌ ಬರ್ಡ್ಸ್‌ಗೆ ಬರೋಬ್ಬರಿ 444 ರೂ. ಟಿಕೆಟ್‌ (Ticket to lovebirds) ನೀಡಿರುವುದು ಕಂಡುಬಂದಿದೆ.

ಪಂಜರದಲ್ಲಿ ನಾಲ್ಕು ಲವ್ ಬರ್ಡ್‌ಗಳನ್ನು ತೆಗೆದುಕೊಂಡು ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ್ದ ಅಜ್ಜಿ-ಮೊಮ್ಮಗಳು, ಆಧಾರ್‌ ಕಾರ್ಡ್‌ ತೋರಿಸಿದ್ದರಿಂದ ಅವರಿಗೆ ಕಂಡಕ್ಟರ್‌ ಉಚಿತ ಪ್ರಯಾಣದ ಟಿಕೆಟ್‌ ನೀಡಿದ್ದಾರೆ. ಆದರೆ, 4 ಪುಟ್ಟ ಹಕ್ಕಿಗಳಿಗೆ 444 ರೂಪಾಯಿ ಟಿಕೆಟ್ ನೀಡಲಾಗಿದೆ. ಹಕ್ಕಿಗಳನ್ನು ಮಕ್ಕಳೆಂದು ಪರಿಗಣಿಸಿ ಪ್ರತಿ ಹಕ್ಕಿಗೆ 111 ರೂ.ಗಳಂತೆ ಒಟ್ಟು 444 ರೂ. ಮೌಲ್ಯದ ಟಿಕೆಟ್‌ ಕೊಡಲಾಗಿದೆ. ಸದ್ಯ ಈ ಟಿಕೆಟ್‌ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ | Holi 2024 : ಹೋಳಿ ಸಂಭ್ರಮದ ವೇಳೆ ಚಲಿಸುವ ಸ್ಕೂಟರ್​ನಲ್ಲಿ ಹೆಣ್ಣು ಮಕ್ಕಳ ಪೋಲಿಯಾಟ; ಇಲ್ಲಿದೆ ವಿಡಿಯೊ

Arun Yogiraj: ಇನ್ನೊಂದು ʼಬಾಲಕ ರಾಮʼ ಮೂರ್ತಿಯೊಂದಿಗೆ ಕಾಣಿಸಿಕೊಂಡ ಶಿಲ್ಪಿ ಅರುಣ್‌ ಯೋಗಿರಾಜ್‌, ಏನಿದರ ವಿಶೇಷ?

balak ram ayodhya arun yogiraj

ಬೆಂಗಳೂರು: ಅಯೋಧ್ಯೆ ರಾಮಮಂದಿರಕ್ಕಾಗಿ (Ayodhya Ram Mandir) ರಾಮಲಲ್ಲಾ (Ram Lalla) ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು ʼಬಾಲಕ ರಾಮʼ ದೇವರ (Balak ram) ಚಿಕಣಿ ರೂಪವನ್ನು ಕೂಡ ರಚಿಸಿದ್ದಾರೆ. ಈ ವಿಷಯವನ್ನು ಅವರು ಎಕ್ಸ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ (Arun Yogiraj) ತಾವು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ʻಚಿಕ್ಕ ರಾಮಲಲ್ಲಾ ಮೂರ್ತಿ’ಯನ್ನು ಕೆತ್ತಿರುವುದಾಗಿ ಹಂಚಿಕೊಂಡಿದ್ದಾರೆ. “ರಾಮ ಲಲ್ಲಾನ ಮುಖ್ಯ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮ್ ಲಲ್ಲಾ ಮೂರ್ತಿಯನ್ನು ಕಲ್ಲಿನಲ್ಲಿ ಕೆತ್ತಿದ್ದೇನೆ” ಎಂದು ಯೋಗಿರಾಜ್ ಎಕ್ಸ್‌ನಲ್ಲಿ ಪ್ರಕಟಿಸಿದ್ದು, ಕೈಯಲ್ಲಿ ಅವರು ಈ ವಿಗ್ರಹವನ್ನು ಹಿಡಿದಿರುವ ಪೋಸ್ಟ್‌ ವೈರಲ್ ಆಗಿದೆ.

ಈ ಸಣ್ಣ ವಿಗ್ರಹವು ಮೂಲ ವಿಗ್ರಹದ ಕಪ್ಪು ಕಲ್ಲಿಗಿಂತ ಭಿನ್ನವಾದ, ತುಸು ಬಿಳುಪಾದ ಕಲ್ಲಿನಲ್ಲಿ ಕೆತ್ತಲ್ಪಟ್ಟಿದೆ. ಆದರೆ ʼಬಾಲಕ ರಾಮ’ನ ಶಿಲ್ಪದ ಪಡಿಯಚ್ಚಿನಂತಿದೆ. ಮೂಲ ಮೂರ್ತಿಯ ಎಲ್ಲ ಲಕ್ಷಣಗಳು ಇದರಲ್ಲೂ ಇವೆ. ಆದರೆ ಇದನ್ನು ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದು.

ಕಳೆದ ತಿಂಗಳು ಅಯೋಧ್ಯೆಯ ದೇವಾಲಯದ ಗರ್ಭಗುಡಿಯೊಳಗೆ ಎಂಟು ಅಡಿ ಎತ್ತರದ ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ಇರಿಸಲಾಗಿರುವ ಬಾಲಕ ರಾಮ ವಿಗ್ರಹದ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಅರುಣ್‌ ಯೋಗಿರಾಜ್‌ ಹಂಚಿಕೊಂಡಿದ್ದರು. “ನಾನು ಅಯೋಧ್ಯೆಯ ರಾಮ ಲಲ್ಲಾನ ದಿವ್ಯ ಕಣ್ಣುಗಳನ್ನು (ನೇತ್ರೋನ್ಮೀಲನ) ಕೆತ್ತಿದ ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆ” ಎಂದು ಅವುಗಳ ಚಿತ್ರವನ್ನು ಹಂಚಿಕೊಳ್ಳುವಾಗ ಯೋಗಿರಾಜ್ ಬರೆದಿದ್ದರು,

ಅರುಣ್‌ ಯೋಗಿರಾಜ್ ಮೈಸೂರಿನವರು ಹಾಗೂ ತಮ್ಮ ಕುಟುಂಬದಲ್ಲಿ ಐದನೇ ತಲೆಮಾರಿನ ಶಿಲ್ಪಿ. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂಬಿಎ ಪದವಿ ಪಡೆದಿದ್ದು, ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ವಿಭಾಗದಲ್ಲಿ ಆರು ತಿಂಗಳ ಕಾಲ ಕೆಲಸ ಮಾಡಿ ಬಳಿಕ ಶಿಲ್ಪರಚನೆಗೆ ಮರಳಿದ್ದರು.

ಯೋಗಿರಾಜ್ ಅವರು ಈ ಹಿಂದೆ ಕೇದಾರನಾಥದಲ್ಲಿ ಪ್ರತಿಷ್ಠಾಪಿಸಲಾಗಿರುವ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ವಿಗ್ರಹ, ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಕೆತ್ತಿದ್ದರು. ಮೈಸೂರು ಜಿಲ್ಲೆಯ ಚುಂಚನಕಟ್ಟೆಯಲ್ಲಿ 21 ಅಡಿ ಎತ್ತರದ ಹನುಮಾನ್ ಪ್ರತಿಮೆ, 15 ಅಡಿ ಎತ್ತರದ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ, ಮೈಸೂರಿನಲ್ಲಿ ಸ್ವಾಮಿ ರಾಮಕೃಷ್ಣ ಪರಮಹಂಸರ ಬಿಳಿ ಅಮೃತಶಿಲಾ ಪ್ರತಿಮೆ, ಆರು ಅಡಿ ಎತ್ತರದ ಏಕಶಿಲಾ ನಂದಿ, ಆರು ಅಡಿ ಎತ್ತರದ ಬನಶಂಕರಿ ದೇವಿ ಹಾಗೂ ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರ 4.5 ಅಡಿ ಎತ್ತರದ ಬಿಳಿ ಅಮೃತ ಶಿಲಾ ಪ್ರತಿಮೆ ಅವರು ಕೆತ್ತಿದ ವಿಗ್ರಹಗಳಲ್ಲಿ ಕೆಲವು.

ಇದನ್ನೂ ಓದಿ: Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

ಮೈಸೂರು ವಿಶ್ವವಿದ್ಯಾನಿಲಯದ ಭೂ ವಿಜ್ಞಾನ ವಿಭಾಗದ ಯುಜಿಸಿ- ಎಮೆರಿಟಸ್ ಪ್ರಾಧ್ಯಾಪಕರ ಪ್ರಕಾರ, ಈಗ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯನ್ನು ಅಲಂಕರಿಸಿರುವ, ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹದ ಮೂಲ ಶಿಲೆ ಮುನ್ನೂರು ಕೋಟಿ ವರ್ಷಗಳ ಹಿಂದಿನದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Lok Sabha Election 2024: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Vijayapur MLA Basanagowda Patil Yatnal latest statement in Dharwad
Koo

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ (Pralhad Joshi) ಯಾವತ್ತೂ ಲಿಂಗಾಯತ ಪರ ಗಟ್ಟಿ ನಿಂತಿದ್ದಾರೆ. ಅಪಪ್ರಚಾರಕ್ಕೆಲ್ಲ ಕಿವಿಗೊಡಬೇಡಿ ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲಿಂಗಾಯತ-ವೀರಶೈವ ಸಮುದಾಯಕ್ಕೆ ಕರೆ (Lok Sabha Election 2024) ನೀಡಿದರು.

ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಹಿಂದೆ ರಾಮಕೃಷ್ಣ ಹೆಗಡೆ, ಅನಂತ ಕುಮಾರ್ ಈಗ ಪ್ರಲ್ಹಾದ್‌ ಜೋಶಿ ಅವರು ಲಿಂಗಾಯತರ ಪರ ಗಟ್ಟಿಯಾಗಿ ನಿಂತವರಾಗಿದ್ದಾರೆ. ಕೆಲವರು ಏನೇನೋ ಅಪಪ್ರಚಾರ ಮಾಡುತ್ತಾರೆ. ಅಂಥದ್ದಕ್ಕೆ ಲಿಂಗಾಯತ, ವೀರಶೈವ ಸಮಾಜದವರು ಕಿವಿಗೊಡಬಾರದು ಎಂದು ಹೇಳಿದರು.

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬೊಮ್ಮಾಯಿ ಅವರ ಅವಧಿಯಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವೇಳೆ ಕೇಂದ್ರದ ಮಟ್ಟದಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಹ ಪ್ರಯತ್ನ ನಡೆಸಿದರು. ಅದರ ಪರಿಣಾಮ ಕೊನೆಗೆ 2ಡಿ ಸೃಷ್ಟಿಸಿ ಅವಕಾಶ ಕಲ್ಪಿಸಲು ಕೇಂದ್ರದ ವರಿಷ್ಠರು ಸಮ್ಮತಿಸಿದ್ದರು ಎಂದು ಯತ್ನಾಳ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ,ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದರು.

ಸಿಎಂ ಭೇಟಿಗೂ ಸಿಗಲಿಲ್ಲ

ಪ್ರವರ್ಗ 2ಡಿ ಬಗ್ಗೆ ಮಾತನಾಡಲು ಸಿಎಂ ಭೇಟಿಗೆ ಸಮಯ ಕೇಳಿದರೆ ಕೊನೆಗೂ ಕೊಡಲಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸಿಎಂ ಲಿಂಗಾಯತ ವಿರೋಧಿ ಆಗಿದ್ದಾರೆ. ಅವಕಾಶ ಸಿಗಲ್ಲ ಬಿಡಿ ಎಂದು ಆ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ನನಗೆ ಹೇಳಿದ್ರು ಎಂದೂ ಇದೇ ವೇಳೆ ತಿಳಿಸಿದರು.

ಕಿತ್ತೂರು ಚೆನ್ನಮ್ಮ ಪ್ರತಿಮೆ ಮುಂದೆ ಆಣೆ ಮಾಡುವೆ

ಸಿಎಂ ಸಿದ್ದರಾಮಯ್ಯ ಮತ್ತು ತಮ್ಮ ಪಕ್ಷ ಲಿಂಗಾಯತ ವಿರೋಧಿ ಎಂಬುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಬಗ್ಗೆ ಬೇಕಿದ್ದರೆ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ಎಂದೂ ಯತ್ನಾಳ್ ಸವಾಲು ಹಾಕಿದರು.

ಪಂಚಮಸಾಲಿ ಸಿಎಂ ನಿರ್ಣಯ

ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮಾಜದ ನಾಯಕರನ್ನು ಸಿಎಂ ಮಾಡುವ ನಿರ್ಣಯ ಆಗುತ್ತದೆ. ಆ ಕಾಲ ಬರುತ್ತದೆ ಸ್ವಲ್ಪ ಕಾಯಿರಿ ಎಂದು ಯತ್ನಾಳ್ ಸೂಚ್ಯವಾಗಿ ಹೇಳಿದರು.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ಬಿಜೆಪಿ ಸರ್ಕಾರ ಇದ್ದಾಗ ಯಾರಿಗೂ ಅನ್ಯಾಯ ಆಗದಂತೆ ವರ್ಗೀಕರಣ ಮಾಡಿತ್ತು. 2ಡಿ ಸೃಷ್ಟಿಸಿ ಅದರಲ್ಲಿ ವೀರಶೈವ, ಪಂಚಮಸಾಲಿ ಲಿಂಗಾಯತ ಎಂದು ಸ್ಪಷ್ಟವಾಗಿ ಬರೆದಿದೆ. ಶೇ.7ರಷ್ಟು ಮೀಸಲಾತಿ ಕಲ್ಪಿಸಿದ್ದಾಗಿ ಅವರು ತಿಳಿಸಿದರು.

ಮುಸ್ಲಿಂರಿಗೆ 2ಎ, 2ಬಿ ಅಲ್ಲದೇ, ಪ್ರವರ್ಗ 1 ರಲ್ಲಿ ಶೇ.10 ರಷ್ಟು ಮೀಸಲಾತಿ ಇತ್ತು. ಆದರೆ, ಪಂಚಮಸಾಲಿ, ಒಕ್ಕಲಿಗ, ಜಂಗಮ, ಬಣಜಿಗರಲ್ಲಿಯೂ ಬಡವರಿದ್ದಾರೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ಬೊಮ್ಮಾಯಿ ಸಿಎಂ ಆಗಿದ್ದಾಗ ಮೀಸಲಾತಿ ಹಂಚಿಕೆ ಮಾಡಲಾಗಿತ್ತು ಎಂದರು.

ಇದನ್ನೂ ಓದಿ: Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

ಈಗ ಸಿಎಂ ಸಿದ್ದರಾಮಯ್ಯ ಒಬಿಸಿ, ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ಕೊಡಲು ಹೊರಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

Continue Reading

ಕರ್ನಾಟಕ

Drought Relief: ಕಡಿಮೆ ಬರ ಪರಿಹಾರ; ಕೇಂದ್ರದ ವಿರುದ್ಧ ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ!

Drought Relief: ಕೇಂದ್ರ ಸರ್ಕಾರ ಅತಿ ಕಡಿಮೆ ಬರ ಪರಿಹಾರ ನೀಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಭಾನುವಾರ ಬೆಳಗ್ಗೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

VISTARANEWS.COM


on

Drought Relief
Koo

ಬೆಂಗಳೂರು: ಕರ್ನಾಟಕ ಸರ್ಕಾರವು ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋದ ಬಳಿಕ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ (Karnataka) 3,454 ಕೋಟಿ ರೂ. ಬರ ಪರಿಹಾರ (Drought Relief) ನೀಡಿದೆ. ಇದರ ಬೆನ್ನಲ್ಲೇ, ಕಡಿಮೆ ಪರಿಹಾರ ನೀಡಲಾಗಿದೆ ಎಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರವು ಮತ್ತೊಂದು ಪ್ರತಿಭಟನೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹೌದು, ಕೇಳಿದಷ್ಟು ಬರ ಪರಿಹಾರ ನೀಡಿಲ್ಲ ಎಂದು ಭಾನುವಾರ (ಏಪ್ರಿಲ್‌ 28) ಬೆಳಗ್ಗೆ 9.30ಕ್ಕೆ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಲೋಕಸಭೆ ಚುನಾವಣೆ, ಭಾನುವಾರ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಕೈಗೊಳ್ಳುತ್ತಿದ್ದು, ಇದರ ಮಧ್ಯೆಯೇ ಪ್ರತಿಭಟನೆ ನಡೆಸುವ ಮೂಲಕ ತಂತ್ರ ಹೆಣೆಯಲು ಕಾಂಗ್ರೆಸ್‌ ಮುಂದಾಗಿದೆ. “ರಾಜ್ಯ ಸರ್ಕಾರವು 18,172 ಕೋಟಿ ರೂ. ಬರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ. ಇಷ್ಟೂ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ಕೇಳಿದಷ್ಟು ಬರ ಪರಿಹಾರ ನೀಡಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಾಗಾಗಿ, ಪೂರ್ಣ ಪ್ರಮಾಣದ ಪರಿಹಾರದ ಮೊತ್ತ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ ಮೊರೆಹೋದ ಬಳಿಕವೇ ಕೇಂದ್ರವು ರಾಜ್ಯಕ್ಕೆ ಬರ ಪರಿಹಾರ ನೀಡಿದೆ. ಇದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸಿಕ್ಕ ಮುನ್ನಡೆಯಾಗಿದೆ. ಹಾಗಾಗಿ, ಇದನ್ನೇ ಚುನಾವಣೆ ದಾಳವಾಗಿಸುವುದು ಕೂಡ ಕಾಂಗ್ರೆಸ್‌ ತಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿಗೆ ಧನ್ಯವಾದ ಎಂದ ಕರ್ನಾಟಕ ಬಿಜೆಪಿ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ, “ಬರ ಪರಿಹಾರ ಮಾಡಿದ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದೆ.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Continue Reading

Lok Sabha Election 2024

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

Lok Sabha Election 2024: ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ್ದನ್ನು ಚಿತ್ರೀಕರಣ ಮಾಡಲಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದದಲ್ಲಿ ಶುಕ್ರವಾರ (ಏ.26) ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆಗಿದೆ.

VISTARANEWS.COM


on

By

Lok sabha election 2024
Koo

ಚಿಕ್ಕಬಳ್ಳಾಪುರ: ಮತದಾನ ಮಾಡುವಾಗ ಮತಗಟ್ಟೆಯೊಳಗೆ ಮೊಬೈಲ್‌ ನಿಷೇಧವಿದೆ.ಆದರೂ ಕೆಲ ಪುಂಡರು ನಿನ್ನೆ ಶುಕ್ರವಾರ ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಮತದಾನ ಮಾಡಿದ್ದನ್ನು ಚಿತ್ರೀಕರಣ ಮಾಡಿ, ನಂತರ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದದಲ್ಲಿ ಶುಕ್ರವಾರ (ಏ.26) ಘಟನೆ ನಡೆದಿದ್ದು, ಚುನಾವಣಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶಗಳು ಕೇಳಿ ಬಂದಿವೆ.

ಮತಗಟ್ಟೆ ಒಳಗೆ ಮೊಬೈಲ್ ನಿಷೇಧ ಇದ್ರೂ ಪುಂಡರು ಮತದಾನದ ವಿಡಿಯೊ‌ ಮಾಡಿದ್ದಾರೆ. ಒಂದಲ್ಲ ಎರಡಲ್ಲ ಹತ್ತಾರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಗುಪ್ತ ಮತದಾನದ ಪಾವಿತ್ರತೆ ಹಾಳುಗೆಡವಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಚುನಾವಣಾ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಪುಂಡರು ಭಯವಿಲ್ಲದೆ ವಿಡಿಯೊ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ವೈರಲ್‌ ಆಗಿರುವ ವಿಡಿಯೊದಲ್ಲಿ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯರಿಗೆ ವೋಟ್‌ ಹಾಕಿರುವುದನ್ನು ಚಿತ್ರೀಕರಿಸಲಾಗಿದೆ. ಇವಿಎಂ ಮಿಷನ್‌ನಲ್ಲಿ ಕಾಂಗ್ರೆಸ್‌ ಬಟನ್‌ ಒತ್ತಿ ನಂತರ ಬ್ಯಾಲೆಟ್‌ ಪೇಪರ್‌ ತೋರಿಸಿದ್ದಾರೆ.

ಇದನ್ನೂ ಓದಿ: Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಮುಕ್ತಾಯಗೊಂಡಿದೆ. ಆದರೆ, ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯಾ ಎಂಬುವವರ ಮೇಲೆ ಹಲ್ಲೆಯಾದ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಏಕೆ ಗಲಾಟೆ?

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಹೃದಯಾಘಾತಕ್ಕೆ ಮೂವರು ಸಾವು

ತುಮಕೂರು/ ಕೊಡಗು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನಕ್ಕೆ (First phase of polling) ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರು ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ತುಮಕೂರಿನಲ್ಲಿ ಮತ ಚಲಾಯಿಸಿ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತ್ತೊಂದು ಕಡೆ ಕೊಡಗಿನ ವಿರಾಜಪೇಟೆಯಲ್ಲಿಯೂ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ.

ತುಮಕೂರಲ್ಲಿ ಹೃದಯಾಘಾತಕ್ಕೆ ವ್ಯಕ್ತಿ ಬಲಿ

ತುಮಕೂರು ನಗರದ ಎಸ್.ಎಸ್.ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಿದ್ದ ರಮೇಶ್ (54) ಎಂಬುವವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Lok Sabha Election 2024 Two die of heart attack in Tumakuru and Kodagu

ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದ ರಮೇಶ್ ಅವರು ಶುಕ್ರವಾರ ಬೆಳಗ್ಗೆ ನಗರದ ಎಸ್.ಎಸ್. ಪುರಂನಲ್ಲಿರುವ ಎಸ್‌ವಿಕೆ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 149ರಲ್ಲಿ ಪತ್ನಿಯ ಜತೆ ಹೋಗಿ ಮತ ಚಲಾಯಿಸಿ ಬಂದಿದ್ದರು. ಮನೆಗೆ ಬಂದವರಿಗೆ ತೀವ್ರ ಎದೆ ನೋವು ಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೊಡಗಿನಲ್ಲಿ ಮತದಾನಕ್ಕೆ ನಿಂತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ವೀರಾಜಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ಮತಗಟ್ಟೆ ಸಮೀಪ ಮತ ಹಾಕಲು ಸರತಿ ಸಾಲಿನಲ್ಲಿ ನಿಂತಿದ್ದ ಪದಾರ್ಥಿ ಮನೋಹರ (58) ಎಂಬುವವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

Lok Sabha Election 2024 Two die of heart attack in Tumakuru and Kodagu
ಪದಾರ್ಥಿ ಮನೋಹರ

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

Lok Sabha Election 2024 : ಮತದಾನದ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟಿಗೆ ಜೆಡಿಎಸ್‌ ಕಾರ್ಯಕರ್ತರ ಬೆರಳುಗಳು ಕಟ್‌ ಆಗಿವೆ.

VISTARANEWS.COM


on

By

Lok sabha election 2024
Koo

ಚಿಕ್ಕಬಳ್ಳಾಪುರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ನಿನ್ನೆ ಶುಕ್ರವಾರ ಸಂಜೆ ಮತದಾನದ ವೇಳೆ ಮಾರಾಮಾರಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮತದಾನ ಮುಕ್ತಾಯ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಜೆಡಿಎಸ್‌ಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರ ಜಗಳದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ ಎಂಬುವವರ ಬೆರಳುಗಳು ಕಟ್ ಆಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ನರೇಂದ್ರ ಮಂಜುನಾಥ, ಗಣೇಶ, ಮಹೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಸದ್ಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಆಸ್ಪತ್ರೆಗೆ ಜೆಕೆ ಕೃಷ್ಣಾರೆಡ್ಡಿ ಭೇಟಿ

ಜೆಡಿಎಸ್ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಶನಿವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದರು. ಗಂಭೀರ ಗಾಯಗೊಂಡಿದ್ದ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು.

ಇದನ್ನೂ ಓದಿ: Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಮುಕ್ತಾಯಗೊಂಡಿದೆ. ಆದರೆ, ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯಾ ಎಂಬುವವರ ಮೇಲೆ ಹಲ್ಲೆಯಾದ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಏಕೆ ಗಲಾಟೆ?

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Cotton Saree Fashion Roopa Malali, Chandrayaan - 3 ISRO Deputy Project Director
ಫ್ಯಾಷನ್10 mins ago

Cotton Saree Fashion: ಕಾಟನ್ ಸೀರೆ ಫ್ಯಾಷನ್ ಕುರಿತು ಚಂದ್ರಯಾನ 3 ಖ್ಯಾತಿಯ ಇಸ್ರೋ ರೂಪಾ ವ್ಯಾಖ್ಯಾನ ಹೀಗಿದೆ!

Job Alert
ಉದ್ಯೋಗ16 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

English Speaking Practice
ತಂತ್ರಜ್ಞಾನ24 mins ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ25 mins ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ27 mins ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ29 mins ago

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

Ramayana Movie Ranbir Kapoor, Sai Pallavi's first look leaked
ಸಿನಿಮಾ30 mins ago

Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

Drought Relief
ಕರ್ನಾಟಕ35 mins ago

Drought Relief: ಕಡಿಮೆ ಬರ ಪರಿಹಾರ; ಕೇಂದ್ರದ ವಿರುದ್ಧ ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ!

Lok sabha election 2024
Lok Sabha Election 202435 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

car accident USA
ದೇಶ1 hour ago

Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202435 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ5 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ12 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌