ಮೈಸೂರು: ಟಿಪ್ಪು ಪ್ರತಿಮೆ ಸ್ಥಾಪಿಸುವುದಾಗಿ ಘೋಷಿಸಿದ ಇಲ್ಲಿನ ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಸಂಬಂಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದ ನಿವಾಸಿ ರಘು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ವೀರ್ ಸೇಠ್ ಗೆ ಜೀವ ಬೆದರಿಕೆ ಒಡ್ಡಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಟಿಪ್ಪು ಸುಲ್ತಾನ್ ಪ್ರತಿಮೆ ಅನಾವರಣ ಮಾಡುವ ಬಗ್ಗೆ ತನ್ವೀರ್ ಸೇಠ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿರುವ ವ್ಯಕ್ತಿ ಕೂಡಲೇ ಹಿಂದೂ ಸಮಾಜದ ಮುಂದೆ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾನೆ. ಇಲ್ಲದಿದ್ದಲ್ಲಿ 6 ಅಡಿ 3 ಅಡಿ ಫಿಕ್ಸ್ ಎಂದು ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹಾಗೂ ಅಲ್ಪಸಂಖ್ಯಾತರ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡಿರುವ ರಘು ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಮೈಸೂರು ಬೀಡಿ ಮಜ್ದೂರ್ ಅಸೋಸಿಯೇಷನ್ ನ ಕಾರ್ಯದರ್ಶಿ ಕೆ.ಸಿ.ಶೌಕತ್ ಪಾಷ ಅವರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ | ಟಿಪ್ಪು ವಿವಾದ | ಟಿಪ್ಪು ಪ್ರತಿಮೆ, ಜಯಂತಿ ಎರಡಕ್ಕೂ ಇಸ್ಲಾಂನಲ್ಲಿ ಅವಕಾಶವಿಲ್ಲ, ಬೇಡವೂ ಬೇಡ ಎಂದ ಇಬ್ರಾಹಿಂ