ವಿಸ್ತಾರ TOP 10 NEWS : ಮಧ್ಯ ಕರ್ನಾಟಕದವರ ಒಲವು, ಮೂರು ರಾಜ್ಯಗಳ ಚುನಾವಣೆ ಗೆಲುವು ಸೇರಿದಂತೆ ದಿನದ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS : ಮಧ್ಯ ಕರ್ನಾಟಕದವರ ಒಲವು, ಮೂರು ರಾಜ್ಯಗಳ ಚುನಾವಣೆ ಗೆಲುವು ಸೇರಿದಂತೆ ದಿನದ ಪ್ರಮುಖ ಸುದ್ದಿಗಳಿವು

ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಡೀ ದಿನ ನಡೆದ ಬೆಳವಣಿಗೆಗಳ ಪ್ರಮುಖ ಸುದ್ದಿಗಳ ಗುಚ್ಛ ಇದು ವಿಸ್ತಾರ TOP 10 NEWS

VISTARANEWS.COM


on

To whom is the inclination of Central Karnataka? Top news of the day including three state for whom?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

1. Pulse of Karnataka: ಮಧ್ಯ ಕರ್ನಾಟಕ: ವಿಸ್ತಾರ-ಅಖಾಡಾ ಸಮೀಕ್ಷೆ: ಸಿಎಂ ಬೊಮ್ಮಾಯಿ ತವರು ಪ್ರದೇಶದಲ್ಲಿ ಯಾರು ಹೆಚ್ಚು ಫೇಮಸ್‌?
ಕರುನಾಡಿನಲ್ಲಿ ಇದೀಗ ಎಲೆಕ್ಷನ್ ಫೀವರ್. 2023ರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಜನ ಯಾವ ಪಕ್ಷದ ಕಡೆಗೆ ಒಲುವು ತೋರುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ..? ವಲಯವಾರು ಯಾವ ರಿಸಲ್ಟ್ ಬರಬಹುದು..? ಹೀಗೆ ಒಟ್ಟು 13 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತವನ್ನ ಅರಿಯುವ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜೊತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

2. ಮೂರು ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ
ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಗಳ ಪೈಕಿ ತ್ರಿಪುರ ಮತ್ತು ನಾಗಾಲ್ಯಾಂಡ್ ಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಮೇಘಾಲಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಹೊರತಾದ ಎನ್ ಪಿ ಪಿ ಮೈತ್ರಿಕೂಟ ಅತಿ ಹೆಚ್ಚು ಸ್ಥಾನ ಗಳಿಸಿದ್ದರೂ ಸರಳ ಬಹುಮತ ಗಳಿಸಲು ವಿಫಲವಾಗಿದೆ. ಆದರೆ ಬಿಜೆಪಿ ಜತೆ ಸೇರಿ ಅದು ಸರ್ಕಾರ ರಚಿಸುವ ಸಾಧ್ಯತೆ ಇದೆ. ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಮಹಾರಾಷ್ಟ್ರದ ಕಸಬಾಪೇಟ್ ನ ತನ್ನ ಭದ್ರಕೋಟೆಯಲ್ಲೇ ಸೋತು ಹಿನ್ನಡೆ ಅನುಭವಿಸಿದೆ. ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

3. ಚುನಾವಣಾ ಆಯುಕ್ತರ ನೇಮಕಕ್ಕೆ ಮೂವರ ಸಮಿತಿ ಕಡ್ಡಾಯ: ಪಿಎಂ, ಸಿಜೆಐ, ಪ್ರತಿಪಕ್ಷ ನಾಯಕ
ಚುನಾವಣೆಯ ಹೊಸ್ತಿಲಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ, ಐತಿಹಾಸಿಕ ಎನಿಸುವ ತೀರ್ಪೊಂದನ್ನು ನೀಡಿದೆ. ಚುನಾವಣಾ ಆಯೋಗದ ಮಹತ್ವದ ಹುದ್ದೆಗಳ ನೇಮಕಾತಿಯನ್ನು ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಗೂ ಪ್ರತಿಪಕ್ಷ ನಾಯಕರಿರುವ ಸಮಿತಿ ಅಂತಿಮಗೊಳಿಸಬೇಕು ಎಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

4. ಅದಾನಿ-ಹಿಂಡೆನ್‌ಬರ್ಗ್‌ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ
ಅದಾನಿ-ಹಿಂಡೆನ್‌ಬರ್ಗ್‌ ವಿವಾದಕ್ಕೆ ಸಂಬಂಧಿಸಿ ತನಿಖೆ ನಡೆಸಲು (Adani vs Hindenburg) ಸುಪ್ರೀಂಕೋರ್ಟ್‌ ಗುರುವಾರ ಆದೇಶಿಸಿದೆ. ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ನೇಮಿಸಲಾಗಿದೆ. ಜತೆಗೆ ಈಗಿನ ವಿದ್ಯಮಾನಗಳ ಸ್ಥಿತಿಗತಿ ಬಗ್ಗೆ ಇನ್ನೆರಡು ತಿಂಗಳೊಳಗೆ ವರದಿ ನೀಡುವಂತೆ ಸೆಬಿಗೆ ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

5. ಮತ್ತೆ 5 ವರ್ಷ ಅವಕಾಶ ಕೊಟ್ಟರೆ ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ: ರಾಜನಾಥ್ ಸಿಂಗ್
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ. ಕರ್ನಾಟಕದಲ್ಲಿ ಮತ್ತೆ 5 ವರ್ಷ ಆಡಳಿತಕ್ಕೆ ಅವಕಾಶ ಕೊಟ್ಟರೆ ರಾಜ್ಯವನ್ನು ಅತ್ಯಂತ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ ಎಂದು ನಂದಗಢದಲ್ಲಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ (BJP Rathayatre) ಚಾಲನೆ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

6. ಬಿಜೆಪಿ ನಾಯಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ, ಕಾಂಗ್ರೆಸ್‌ ಕೈಗೆ ಮತ್ತೊಂದು ಕಮಿಷನ್‌ ಅಸ್ತ್ರ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಅವರು ಲೋಕಾಯುಕ್ತ ಬಲೆಗೆ (Lokayukta raid) ಬಿದ್ದಿದ್ದಾರೆ. ಚುನಾವಣೆಯ ಹೊತ್ತಿನಲ್ಲಿ ಮತ್ತು ಕಾಂಗ್ರೆಸ್‌ ಶೇ. 40 ಕಮಿಷನ್‌ ಆರೋಪ ಮಾಡುತ್ತಿರುವ ಸಮಯದಲ್ಲಿ ನಡೆದಿರುವ ದಾಳಿ ಮತ್ತು ಬಂಧನ ರಾಜಕೀಯ ಚರ್ಚೆಗೂ ಕಾರಣವಾಗಬಹುದಾದ ಬೆಳವಣಿಗೆಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

7. ವಿಶ್ವ ನಾಯಕರಲ್ಲೇ ಮೋದಿ ಹೆಚ್ಚು ಪ್ರೀತಿಪಾತ್ರರು, ಇಟಲಿ ಪ್ರಧಾನಿ ಮೆಲೋನಿ ಮೆಚ್ಚುಗೆ
ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನಲ್ಲೇ ಜನಪ್ರಿಯ ನಾಯಕ ಎಂಬುದಾಗಿ ಹತ್ತಾರು ಅಂತಾರಾಷ್ಟ್ರೀಯ ಸಮೀಕ್ಷೆಗಳಿಂದ ದೃಢಪಟ್ಟಿದೆ. ಇದರ ಬೆನ್ನಲ್ಲೇ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಕೂಡ ನರೇಂದ್ರ ಮೋದಿ (Giorgia Meloni On Modi) ಅವರನ್ನು ಹೊಗಳಿದ್ದಾರೆ. “ಜಾಗತಿಕ ನಾಯಕರಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಪ್ರೀತಿಪಾತ್ರರು” ಎಂದು ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.
ಪೂರಕ ಸುದ್ದಿ: ಇಟಲಿ ಪ್ರಧಾನಿ ಮೆಲಾನಿ ಹೊಗಳಿಕೆಗೆ ಪ್ರಧಾನಿ ಮೋದಿಯವರ ಮುಖಭಾವ ಹೀಗಿತ್ತು!; ವೈರಲ್​ ಆಯ್ತು ವಿಡಿಯೊ

8. ಜೆಎನ್‌ಯುನಲ್ಲಿ ಪ್ರತಿಭಟನೆ ಮಾಡಿದರೆ 20 ಸಾವಿರ ರೂ., ದುರ್ವರ್ತನೆಗೆ 50 ಸಾವಿರ ರೂ. ದಂಡ
ಸಂಶೋಧನೆ, ಅಧ್ಯಯನ ಹಾಗೂ ಅಂಕ ಸಾಧನೆಗಿಂತ ಪ್ರತಿಭಟನೆ, ಗಲಾಟೆ, ಸಾರ್ವಜನಿಕ ಆಸ್ತಿಗೆ ಧ್ವಂಸದಂತಹ ಪ್ರಕರಣಗಳಿಂದಲೇ ಸುದ್ದಿಯಲ್ಲಿರುವ ದೆಹಲಿಯ ಜೆಎನ್‌ಯುನಲ್ಲಿ ಹೊಸ ಕಠಿಣ (New JNU Rules) ನಿಯಮ ಜಾರಿಗೊಳಿಸಲಾಗಿದೆ. “ಜೆಎನ್‌ಯುನಲ್ಲಿ ಉಪವಾಸ ನಿರಶನ, ಧರಣಿ ಅಥವಾ ಪ್ರತಿಭಟನೆ ನಡೆಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ” ಎಂದು ವಿವಿ ಆಡಳಿತ ಮಂಡಳಿ ಅಧಿಸೂಚನೆ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

9. ಕಾರ್ಪೊರೇಟರ್‌ಗಳಿಲ್ಲದೆ ಸತತ 3ನೇ ಬಾರಿ ಬಜೆಟ್‌ ಮಂಡನೆ; 11,158 ಕೋಟಿ ರೂಪಾಯಿಯ ಬಿಗ್‌ ಬಜೆಟ್‌ನಲ್ಲಿ ಏನುಂಟು, ಏನಿಲ್ಲ?
ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯ (BBMP Budget 2023) ಮಂಡನೆಯನ್ನು ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಅವರು ನಗರದ ಟೌನ್ ಹಾಲ್‌ನಲ್ಲಿ ಗುರುವಾರ ಮಂಡಿಸಿದ್ದಾರೆ. ಕಳೆದ ಬಾರಿಗಿಂತ ಈ ವರ್ಷದ ಬಜೆಟ್‌ ಗಾತ್ರ ದೊಡ್ಡದಾಗಿದ್ದು, 11,158 ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆ ಮಾಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

10. ಅತ್ತಿಗೆ ಜತೆ ಸಂಬಂಧ ಹೊಂದಿಲ್ಲ ಎಂಬುದನ್ನು ಸಾಬೀತುಪಡಿಸಲು ಅಗ್ನಿಪ್ರವೇಶ ಮಾಡಿದ ವ್ಯಕ್ತಿ!
ಶತಮಾನಗಳ ಹಿಂದೆ ಶೀಲವತಿ ಎಂಬುದನ್ನು ಸಾಬೀತುಪಡಿಸಲು, ಪತಿ ತೀರಿಕೊಂಡ ಬಳಿಕ ಮಹಿಳೆಯರು ಅಗ್ನಿ ಪರೀಕ್ಷೆ ಎದುರಿಸುತ್ತಿದ್ದರು, ಅಗ್ನಿ ಪ್ರವೇಶ ಮಾಡುತ್ತಿದ್ದರು. ಶ್ರೀರಾಮನ ಪತ್ನಿ ಸೀತೆಯೂ ಅಗ್ನಿಪರೀಕ್ಷೆ ಎದುರಿಸಿದ್ದರು. ಆಧುನಿಕ ಕಾಲದಲ್ಲಿ ಇಂತಹ ಪದ್ಧತಿಗಳೆಲ್ಲ ಗೌಣವಾಗಿವೆ. ಆದರೆ, ತೆಲಂಗಾಣದಲ್ಲಿ ವ್ಯಕ್ತಿಯೊಬ್ಬ ತಾನು ಸಹೋದರನ ಹೆಂಡತಿ (ಅತ್ತಿಗೆ) ಜತೆ ಸಂಬಂಧ ಹೊಂದಿಲ್ಲ ಎಂಬುದನ್ನು ಸಾಬೀತುಪಡಿಸಲು ಅಗ್ನಿಪ್ರವೇಶ (Man Takes Agnipariksha) ಮಾಡಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

ಇನ್ನಷ್ಟು ಪ್ರಮುಖ ಸುದ್ದಿಗಳಿವು

  1. ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ
  2. Devine power : ದೇವೇಗೌಡರ ಆರೋಗ್ಯ, ಉಜ್ವಲ ರಾಜಕೀಯ ಭವಿಷ್ಯಕ್ಕಾಗಿ 11 ದಿನಗಳ ಮಹಾಯಾಗಕ್ಕೆ ಮೊರೆ ಹೋದ ಎಚ್‌ಡಿಕೆ
  3. ರೀ ಮಂತ್ರಿಗಳೇ ನಿಂತ್ಕೊಳ್ರಿ ಎಂದ ಡಿ.ಕೆ. ಸುರೇಶ್‌: ಡಾ. ಸಿ.ಎನ್‌. ಅಶ್ವತ್ಥನಾರಾಯಣ್‌ ಜತೆ ಮತ್ತೆ ಜಟಾಪಟಿ
  4. ಸದನದಲ್ಲಿ ನಾನಿಲ್ಲದಿರುವಾಗ ಸಿಎಂ ಆರೋಪ ಮಾಡಿದ್ದಾರೆ: ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ
  5. ಎಷ್ಟು ಪೌಡರ್‌ ಹಾಕಿದರೂ ಬಿಳಿ ಆಗಲ್ಲ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಗಂಡ
  6. ಐಷಾರಾಮಿ ತಾಣದಲ್ಲಿ ವ್ಲಾದಿಮಿರ್‌ ಪುಟಿನ್‌, ಗರ್ಲ್‌ಫ್ರೆಂಡ್ ರಹಸ್ಯ ವಾಸ, ಯಾರೀಕೆ ಗೆಳತಿ?
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

VISTARANEWS.COM


on

HD Revanna

ಹಾಸನ: ದಾವಣಗೆರೆ ದಂಗಲ್‌ ನಿಂದಾಗಿ ಕಾಂಗ್ರೆಸ್‌ ಪಕ್ಷದಿಂದ ಕಠಿಣ ಕ್ರಮದ ಭೀತಿಯಲ್ಲಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್‌ ವರಿಷ್ಠ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಜಮೀರ್‌ ಅವರಿಂದ ಈಗಾಗಲೇ ಸಾಕಷ್ಟು ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಎಂದು ಹೇಳಿ ಅವರನ್ನು ಮತ್ತೆ ಪಕ್ಷ ಬರಮಾಡಿಕೊಳ್ಳುವ ಪ್ರೇಮಯವೇ ಇಲ್ಲ, ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದರು. ಕೇವಲ ₹2೦೦೦ ಗ್ಯಾರಂಟಿ ಹಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಮಹಿಳೆಯರು ಈ ಸಣ್ಣ ಮೊತ್ತಕ್ಕೆ ಮರುಳಾಗಬಾರದು, ಇದರಿಂದ ಅವರ ಉದ್ಧಾರ ಅಸಾಧ್ಯ ಎಂದರು. ಇಂತಹ ಗ್ಯಾರೆಂಟಿಗಳಿಂದ ರಾಜ್ಯ ಸರ್ಕಾರಗಳಿಗೆ ಸಂಬಳ ಕೊಡಲಾಗದಂತ ದುಸ್ಥಿತಿ ಎದುರಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.


ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ವೇತನವನ್ನು ಇನ್ನು ಕೊಟ್ಟಿಲ್ಲ ಎನ್ನುವ ಮಾಹಿತಿ ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ರಾಜ್ಯಗಳ ಅಭಿವೃದ್ಧಿ ಸಂಪೂರ್ಣವಾಗಿ ಹಳಿತಪ್ಪಿದೆ ಇದೆಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಹೊಣೆ ಎಂದರು.


ಸರಿ ಸುಮಾರು 7.2600 ಲಕ್ಷ ಕೋಟಿಗೂ ಸಾಲವನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯದ ಪ್ರತಿಯೊಬ್ಬರ ತಲೆಯ ಮೇಲೆಯೂ ಕನಿಷ್ಠವೆಂದರೂ ಒಂದು ಲಕ್ಷ ರೂಪಾಯಿಗೂ ಅಧಿಕ ಸಾಲವಿದೆ. ಇಷ್ಟು ಸಾಲ ಮಾಡಿದರೆ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವೇ ಎಂದು ಸಚಿವ ಕುಮಾರಸ್ವಾಮಿ ಪ್ರಶ್ನಿಸಿದರು.


ಒಂದು ಕೈಯಲ್ಲಿ ಜನರಿಗೆ 2 ಸಾವಿರ ಕೊಡುತ್ತಾರೆ. ಇನ್ನೊಂದು ಕೈಯಲ್ಲಿ ತೆರಿಗೆ ಮೇಲೆ ತೆರಿಗೆ ವಿಧಿಸುತ್ತಾರೆ. ಬೆಲೆ ಏರಿಕೆಗಳ ಬಗ್ಗೆ ಹೇಳುವ ಹಾಗೆಯೇ ಇಲ್ಲ. ಇತ್ತೀಚೆಗೆ ವಿದ್ಯುತ್ ದರವನ್ನು ಹೆಚ್ಚಿಸಿದರು. ಹಾಗೆಯೇ ಮದ್ಯದ ದರವನ್ನು ಏರಿಸಿದರು. ಎಷ್ಟು ಸಾಧ್ಯವೊ ಅಷ್ಟು ಕಡೆ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಚಿವರು ಕಿಡಿಕಾರಿದರು.


ನನಗೆ ದೊರೆತ ಸಣ್ಣ ಅವಧಿಯಲ್ಲಿ ಇಷ್ಟೆಲ್ಲ ಕೆಲಸಗಳನ್ನು ಮಾಡಿದ್ದೇನೆ. ಸಾವಿರಾರು ಶಿಕ್ಷಕರನ್ನು ನೇರವಾಗಿ ಮತ್ತು ಪಾರದರ್ಶಕವಾಗಿ ನೇಮಕ ಮಾಡಿದ್ದೆ. ಆದರೆ ಈಗಿನ ಸರ್ಕಾರಕ್ಕೆ ಒಂದೇ ಒಂದು ನೇಮಕಾತಿ ಮಾಡುವ ಶಕ್ತಿಯು ಇಲ್ಲವಾಗಿದೆ ಎಂದು ಕೇಂದ್ರ ಸಚಿವರು ದೂರಿದರು.

Continue Reading

Latest

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

VISTARANEWS.COM


on

HD DeveGowda Wont celebrate 92nd birthday

ಬೆಂಗಳೂರು: ಬಸವ ವೇದಿಕೆವತಿಯಿಂದ ನೀಡಲಾಗುವುದ ಪ್ರಸಕ್ತ ಸಾಲಿನ ಬಸವಶ್ರೀ ಪ್ರಶಸ್ತಿ ಹಾಗೂ ವಚನ ಸಾಹಿತ್ಯ ಪ್ರಶಸ್ತಿಯನ್ನು ಕ್ರಮವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರನ್ನು ಆಯ್ಕೆ ಮಾಡಲಾಗಿದೆ.


ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ವಿಷಯ ತಿಳಿಸಿದ ವೇದಿಕೆಯ ಅಧ್ಯಕ್ಷ ಸಿ.ಸೋಮಶೇಖರ್‌, ಬಸವ ಶ್ರೀ ಪ್ರಶಸ್ತಿ ಬಸವಣ್ಣನವರ ಪುತ್ಥಳಿ, ಸ್ಮರಣಿಕೆಯನ್ನೊಳಗೊಂಡಿದೆ. ವಚನ ಸಾಹಿತ್ಯ ಪ್ರಶಸ್ತಿ ಹತ್ತು ಸಾವಿರ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ ಎಂದು ತಿಳಿಸಿದರು.


ಬರುವ ಏ.27 ರ ಸಂಜೆ 5:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಸಾನಿಧ್ಯ ವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ ಸಮಾರಂಭ ಉದ್ಘಾಟಿಸಲಿದ್ದೂ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ಸಚಿವ ಹೆಚ್.ಕೆ.ಪಾಟೀಲ್‌ ಪ್ರಶಸ್ತಿ ಪ್ರದಾನ ಮಾಡುವರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು ಎಂದು ಮಾಹಿತಿ ನೀಡಿದರು.

Continue Reading

Latest

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

VISTARANEWS.COM


on

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಂತರ ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸಲ್‌ ಬೆಲೆ ಹೇಚ್ಚಾಗಬಹುದು ಎಂಬ ಮಾಧ್ಯಮಗಳ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.


ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಮಾಡಿರುವ ಪೋಸ್ಟ್‌ ನಲ್ಲಿ ಸ್ಪಷ್ಟೀಕರಣ ನೀಡಿದೆ.


ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.


ಐದು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್‌ 29 ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಂತರ ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆ ಏರಿಕೆಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.


ಕೇಂದ್ರದ ಈ ಸ್ಪಷ್ಟನೆ ವಾಹನ ಸವಾರರೂ ಸೇರಿದಂತೆ ದೇಶದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

Continue Reading

Fact Check

ವಾಹನ ಸವಾರರಿಗೆ ಬಿಗ್ ರಿಲೀಫ್: ಪೆಟ್ರೋಲ್-ಡೀಸೆಲ್ ದರ ಏರಿಕೆ ವದಂತಿಗೆ ಕೇಂದ್ರ ಸರ್ಕಾರ ಬ್ರೇಕ್!

VISTARANEWS.COM


on

ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವದಂತಿಗಳಿಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ತೆರೆ ಎಳೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂಬ ವರದಿಗಳನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ದೃಢಪಡಿಸಿದೆ. ಇಂತಹ ಸುದ್ದಿಗಳು ಕೇವಲ ಜನರಲ್ಲಿ ಭಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಿದೆ.

ವಿಧಾನಸಭಾ ಚುನಾವಣೆಗಳು ಏಪ್ರಿಲ್ 29ಕ್ಕೆ ಕೊನೆಗೊಳ್ಳುತ್ತಿದ್ದಂತೆ ಇಂಧನ ದರ ಗಗನಕ್ಕೇರಲಿದೆ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 120 ಡಾಲರ್ ತಲುಪಿರುವುದು ಇದಕ್ಕೆ ಕಾರಣ ಎಂಬ ವರದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿದ್ದರೂ ಭಾರತದಲ್ಲಿ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟಿರುವ ಏಕೈಕ ದೇಶ ನಮ್ಮದಾಗಿದೆ ಎಂದು ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದಂತಹ ಕಠಿಣ ಪರಿಸ್ಥಿತಿಯಲ್ಲೂ ನಾಗರಿಕರನ್ನು ರಕ್ಷಿಸಲು ಸರ್ಕಾರ ಅಬಕಾರಿ ಸುಂಕವನ್ನು ಈಗಾಗಲೇ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿರುವುದನ್ನು ನೆನಪಿಸಿದೆ.

ದೇಶದ ಇಂಧನ ಭದ್ರತೆಯ ಬಗ್ಗೆಯೂ ಭರವಸೆ ನೀಡಿರುವ ಸರ್ಕಾರ, ಸದ್ಯ ಎಲ್ಲಾ ರಿಫೈನರಿಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಲಭ್ಯತೆಗೆ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದೆ. ಕಚ್ಚಾ ತೈಲ ಪೂರೈಕೆಯ ಮೇಲೆ ಸರ್ಕಾರ ನಿರಂತರ ನಿಗಾ ವಹಿಸಿದ್ದು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸುತ್ತಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಏರಿಕೆಯ ಭೀತಿಯಲ್ಲಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ.

Continue Reading
Advertisement
HD Revanna
Latest6 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest7 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest7 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest7 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest7 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest8 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest8 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest8 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest8 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

Latest8 hours ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌