ಬೆಂಗಳೂರು: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ಗೆ ಕರೆ ನೀಡಲಾಗಿದೆ.
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷಾ ಫಲಿತಾಂಶ ವಿಳಂಬ, ಶುಲ್ಕ ಏರಿಕೆ, ವಿದ್ಯಾರ್ಥಿ ವೇತನ ಹಾಗೂ ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ಪರಿಶಿಷ್ಟರಿಗೆ ಸೀಮಿತಗೊಳಿಸಿರುವುದು ಇತ್ಯಾದಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ.17ರಂದು ರಾಜ್ಯಮಟ್ಟದಲ್ಲಿ ಕಾಲೇಜ್ ಬಂದ್ಗೆ ಎನ್ಎಸ್ಯುಐ ಕರೆ ನೀಡಿದೆ. ರಾಜ್ಯದ ಸರಕಾರಿ, ಅನುದಾನಿತ ಹಾಗೂ ಸಂಯೋಜಿತ ಕಾಲೇಜುಗಳ ಬಂದ್ಗೆ ಕರೆ ಕೊಡಲಾಗಿದೆ. ಬಂದ್ ಇಂದು ಬೆಳಗ್ಗೆ 9.30ರಿಂದ ಆರಂಭವಾಗಲಿದೆ.
ಇದನ್ನೂ ಓದಿ | ಕೋಲಾರ ಬಂದ್, ಬಸ್ಸುಗಳಿಲ್ಲದೆ ಜನ ಪರದಾಟ