Toll Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ನಾಳೆಯಿಂದ ಈ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ! - Vistara News

ಕರ್ನಾಟಕ

Toll Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ನಾಳೆಯಿಂದ ಈ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

Toll Hike: ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008-ನಿಯಮ 5ರ ಪ್ರಕಾರ ಬಳಕೆದಾರರ ಶುಲ್ಕ ದರದ ವಾರ್ಷಿಕ ಪರಿಷ್ಕರಣೆಯಂತೆ ಮತ್ತೆ ಟೋಲ್ ದರ ಹೆಚ್ಚಳ ಮಾಡಲಾಗಿದೆ.

VISTARANEWS.COM


on

Bangalore mysore Expressway
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಹಣಕಾಸು ವರ್ಷದ ಆರಂಭದಲ್ಲೇ ರಾಜ್ಯದ ವಾಹನ ಸವಾರರಿಗೆ ಮತ್ತೆ ಟೋಲ್‌ ಬರೆ ಬಿದ್ದಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸೇರಿ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ (Toll Hike) ಏರಿಸಲಾಗಿದ್ದು, ಏಪ್ರಿಲ್‌ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಯಾವ ಮಾರ್ಗದಲ್ಲಿ ಎಷ್ಟು ಸುಂಕ ಹೆಚ್ಚಳ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ಟೋಲ್‌ ದರ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣಕ್ಕೆ ದರ ಹೆಚ್ಚಳವನ್ನು ಕೈ ಬಿಟ್ಟಿತ್ತು. ಆ ಬಳಿಕ ಜೂನ್‌ನಲ್ಲಿ ಏಕಾಏಕಿ ಶೇ.22ರಷ್ಟು ದರ ಹೆಚ್ಚಳ ಮಾಡಲಾಗಿತ್ತು. ಇದೀಗ 9 ತಿಂಗಳ ನಂತರ ಮತ್ತೆ ಟೋಲ್‌ ದರ ಏರಿಕೆ ಆಗಿದೆ.

ಯಾವ ವಾಹನಕ್ಕೆ ಎಷ್ಟು ಶುಲ್ಕ?

ವಾಹನಒನ್‌ ಸೈಡ್‌ರಿಟರ್ನ್‌ ಜರ್ನಿತಿಂಗಳ ಪಾಸ್‌(ಒನ್‌ಸೈಡ್‌)
ಕಾರು, ಜೀಪು, ವ್ಯಾನ್‌₹ 170₹ 255₹ 5,715
ಲಘು ವಾಹನ, ಮಿನಿ ಬಸ್‌2754159,230
2 ಆಕ್ಸೆಲ್‌ ಟ್ರಕ್‌/ಬಸ್‌58057019,345
3 ಆಕ್ಸೆಲ್‌ ವಾಣಿಜ್ಯ ವಾಹನ63595021,100
ಭಾರಿ ವಾಹನ (4-6 ಆಕ್ಸೆಲ್‌)‌9101,36530,335
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)1,1101,66036,930
ವಾಹನಹಳೆ ದರಹೊಸ ದರ ಹೆಚ್ಚಳ
ಕಾರು, ಜೀಪು, ವ್ಯಾನ್‌13517035
ಲಘು ವಾಹನ, ಮಿನಿ ಬಸ್‌22027555
2 ಆಕ್ಸೆಲ್‌ ಟ್ರಕ್‌/ಬಸ್‌460580120
3 ಆಕ್ಸೆಲ್‌ ವಾಣಿಜ್ಯ ವಾಹನ500635135
ಭಾರಿ ವಾಹನ (4-6 ಆಕ್ಸೆಲ್‌)720910190
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)8801,110880

ನಿಡಘಟ್ಟ, ಕಣಮಿಣಿಕ ಹಾಗೂ ಶೇಷಗಿರಿಹಳ್ಳಿ ಟೋಲ್‌ ಪ್ಲಾಜಾವರೆಗಿನ 56 ಕಿ.ಮೀ ಉದ್ದದ ಹೆದ್ದಾರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕರವು ಮಾಹಿತಿ ನೀಡಿದೆ. ಎಲ್ಲಾ ತರಹದ ವಾಹನಗಳು 24 ಗಂಟೆಯೊಳಗೆ ಹಿಂದಿರುಗಿ ಬಂದಲ್ಲಿ ಪಾವತಿಸಬೇಕಾದ ಟೋಲ್‌ನಲ್ಲಿ ಶೇ. 25ರಷ್ಟು ರಿಯಾಯಿತಿ ಸಿಗಲಿದೆ. ಅದೇ ರೀತಿ, ಎಲ್ಲಾ ವಾಹನಗಳು ಟೋಲ್‌ ಪಾವತಿ ದಿನದಿಂದ ಒಂದು ತಿಂಗಳೊಳಗೆ 50 ಬಾರಿ ಹೈವೇಯಲ್ಲಿ ಸಂಚರಿಸಿದ್ದರೆ ಶೇ. 35ರಷ್ಟು ರಿಯಾಯಿತಿ ಸಿಗಲಿದೆ. ಯಾವುದೇ ವಾಹನಗಳು ಅನುಮತಿಗಿಂತ ಹೆಚ್ಚಿನ ಸರಕು ಹೊಂದಿದ್ದರೆ ನಿಗದಿತ ಶುಲ್ಕಕ್ಕಿಂತ ಹತ್ತು ಪಟ್ಟು ಶುಲ್ಕ ಪಾವತಿಸಬೇಕಾಗುತ್ತದೆ.

ಬಂಟ್ವಾಳ

ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಟು ಕೇರಳ-ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್ ಗೇಟ್‌ಗಳಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ. ಬ್ರಹ್ಮರಕೂಟ್ಟು ಟೋಲ್ ನಲ್ಲಿ ಕಾರು, ಜೀಪು, ವ್ಯಾನ್ ದ್ವಿಮುಖ ಸಂಚಾರದ ಶುಲ್ಕದಲ್ಲಿ 5 ರೂ. ಏರಿಕೆ ಕಂಡಿದ್ದು, ಪರಿಷ್ಕೃತ ದರ 50 ರೂ. ಆಗಿರಲಿದೆ. ತಲಪಾಡಿಯಲ್ಲಿ 80 ರೂ, ಹೆಜಮಾಡಿಯಲ್ಲಿ 75, ಸಾಸ್ತಾನ ಗುಂಡ್ಮಿ 90 ರೂ. ಪರಿಷ್ಕೃತ ದರವಾಗಿದೆ.

ಇದನ್ನೂ ಓದಿ | Money Guide: ಎನ್‌ಪಿಎಸ್‌ನಿಂದ ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ವರೆಗೆ; ನಾಳೆಯಿಂದಲೇ ಬದಲಾಗುತ್ತವೆ ಈ ಎಲ್ಲ ನಿಯಮಗಳು

ಚೆನ್ನೈ-ಬೆಂಗಳೂರು ಹೆದ್ದಾರಿ

ಚೆನ್ನೈ ಹೊರವಲಯದಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ ಎಐ) ಸಿದ್ಧತೆ ನಡೆಸುತ್ತಿರುವುದರಿಂದ ಚೆನ್ನೈ ಮತ್ತು ಬೆಂಗಳೂರು ನಡುವಿನ ರಸ್ತೆ ಪ್ರಯಾಣವು ಹೆಚ್ಚು ದುಬಾರಿಯಾಗಲಿದೆ. ಪ್ರತಿ ಟ್ರಿಪ್‌ಗೆ 5 ರಿಂದ 20 ರವರೆಗೆ ಟೋಲ್ ಶುಲ್ಕ ಹೆಚ್ಚಳವು ಏಪ್ರಿಲ್ 1 ರಿಂದ ಜಾರಿಗೆ ಬರುವ ನಿರೀಕ್ಷೆಯಿದೆ. ಬೆಂಗಳೂರು ಮತ್ತು ತಮಿಳುನಾಡಿನ ದಕ್ಷಿಣ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರಯಾಣಿಕರು ಏಪ್ರಿಲ್ 1 ರಿಂದ ವೆಚ್ಚಗಳಲ್ಲಿ ಗಣನೀಯ ಏರಿಕೆಯನ್ನು ಎದುರಿಸಬೇಕಾಗುತ್ತದೆ. ತಮಿಳುನಾಡಿನಾದ್ಯಂತ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಮಾರ್ಗಗಳಲ್ಲಿರುವ ಹಲವಾರು ಟೋಲ್ ಪ್ರಾಜಾಗಳಲ್ಲಿ ದರ ಹೆಚ್ಚಳವು 150 ರೂ.ಗೆ ತಲುಪಲಿದೆ.

ಲಕ್ಕಸಂದ್ರ ಮೆಟ್ರೋ ಕಾಮಗಾರಿ; ನಾಳೆಯಿಂದ ಇನ್ನೊಂದು ವರ್ಷ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್‌ !

Namma Metro

ಬೆಂಗಳೂರು: ನಾಳೆ (ಏಪ್ರಿಲ್‌ 1) ಯಿಂದಲೇ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಮುಂದಿನ ಒಂದು ವರ್ಷದವರೆಗೆ ವಾಹನಗಳ ಓಡಾಟ ಬಂದ್‌ ಆಗಲಿದೆ. ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯನ್ನು ನಮ್ಮ ಮೆಟ್ರೋ (Namma Metro) ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧ (Traffic restrictions) ಮಾಡಲಾಗುತ್ತಿದೆ. ಏಪ್ರಿಲ್‌ 1 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುತ್ತದೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಪ್ರಕಟಣೆ (BMRTC) ಹೊರಡಿಸಿದೆ.

ಕಾಮಗಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ಸಂಚಾರ ನಿರ್ಬಂಧವಾಗಿರುವ ಕಾರಣಕ್ಕೆ ಪರ್ಯಾಯ ಮಾರ್ಗ ಬಳಸುವಂತೆ ಬಿಎಂಆರ್‌ಸಿಎಲ್‌ ವಿನಂತಿ ಮಾಡಿದೆ. ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್‌ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್‌ ಕಡೆಗೆ ಹೋಗಬೇಕಾದರೆ ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್‌ ಲಿಂಕ್‌ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ ತಲುಪಿ ಎಡಕ್ಕೆ ತಿರುಗಿಕೊಳ್ಳಬೇಕು.

ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್‌ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು.

ಇದನ್ನೂ ಓದಿ: Acid Attack : ಆಸ್ತಿ ವಿಚಾರಕ್ಕೆ ಯುವಕನಿಗೆ ಆ್ಯಸಿಡ್‌ ಎರಚಿದ ಸಂಬಂಧಿಕರು; ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಫೈಟಿಂಗ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest8 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest9 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ9 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest9 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest11 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest14 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest1 day ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ1 day ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌