ಚಿತ್ರದುರ್ಗ : ರಾಜ್ಯ ಮಟ್ಟದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ನಾಳೆ (ಶನಿವಾರ) ಮಧ್ಯಾಹ್ನ ನಡೆಯಲಿದೆ. ಈ ಸಮಾವೇಶವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಉದ್ಘಾಟನೆ ಮಾಡಲಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಸಲುವಾಗಿ ಈ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಕಡೆಯಿಂದಲೂ ಬಿಜೆಪಿ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಹ ಭಾಗಿಯಾಗಲಿದ್ದಾರೆ.
ಇದನ್ನು ಓದಿ| Worldwide BJP: 13 ದೇಶದ ರಾಯಭಾರಿಗಳ ಜತೆ ಸಭೆ ನಡೆಸಿದ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ
ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಜನರನ್ನು ತಲುಪುವ ಸಲುವಾಗಿ ಬಿಜೆಪಿ ಈ ಕಾರ್ಯತಂತ್ರ ರೂಪಿಸಿದ್ದು, ಈ ಸಮಾವೇಶವನ್ನು ಹಮ್ಮಿಕೊಂಡಿದೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಅನೇಕ ಸಚಿವರು. ಶಾಸಕರು ಆಗಮಿಸುತ್ತಿದ್ದಾರೆ. ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರ ಸಭೆ ಸದಸ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಎಲ್ಲ ಬಿಜೆಪಿ ಜನಪ್ರತಿನಿಧಿಗಳು ಹಾಗೂ 10 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.