Site icon Vistara News

2nd PU result | ಶನಿವಾರ 11 ಗಂಟೆಗೆ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd PU result) ನಾಳೆ (ಶನಿವಾರ) ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಬೆಳಗ್ಗೆ 11 ಗಂಟೆಗೆ ಪಿಯು ಬೋರ್ಡ್‌ನಲ್ಲಿ ಫಲಿತಾಂಶ ಘೋಷಣೆ ಮಾಡಲಿದ್ದಾರೆ. ಏಪ್ರಿಲ್‌-ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು ಇವರ ಭವಿಷ್ಯ ನಾಳೆ ನಿರ್ಧಾರವಾಗಲಿದೆ.

ಇದನ್ನೂ ಓದಿ |ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು ಸುದ್ದಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಸ್ಪಷ್ಟನೆ

ರಾಜ್ಯಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಯ ಮೌಲ್ಯಮಾಪನ ಕಾರ್ಯವೂ ಮೇ ಕಡೆ ವಾರದಂದು ಆರಂಭವಾಗಿ ಮೌಲ್ಯಮಾಪನ ಕಾರ್ಯವೆಲ್ಲ ಮುಗಿದಿತ್ತು. ಜೂನ್‌ ನಾಲ್ಕನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಹೇಳಿದ್ದ ಶಿಕ್ಷಣ ಸಚಿವರು ನಾಳೆಯೇ ಪ್ರಕಟಿಸುವುದಾಗಿ ಟ್ವೀಟ್‌ ಮಾಡಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪಿಯು ಬೋರ್ಡ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ www.puc.kar.nic.in ಹಾಗೂ karresults.nic.in ಮೂಲಕ ಲಭ್ಯವಾಗಲಿದೆ. ಜತೆಗೆ SATs ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಅವರ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಸಂದೇಶ ಬರಲಿದೆ.

ಕೋವಿಡ್‌ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ರದ್ದು

ರಾಜ್ಯದಲ್ಲಿ ಸಾಂಕ್ರಾಮಿಕ ಕೊರೊನಾ ಸೋಂಕು ಹರಡುವಿಕೆ ಕಾರಣದಿಂದಾಗಿ ಕಳೆದ ವರ್ಷ ಮೇ 24ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದರ ಬದಲಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿತ್ತು. ಈ ಅಂಕಗಳು ತೃಪ್ತಿ ಇಲ್ಲದೇ ಪರೀಕ್ಷೆ ತಿರಸ್ಕಿರಿಸಿದ ವಿದ್ಯಾರ್ಥಿಗಳಿಗೆ ಕೋವಿಡ್‌ ತೀವ್ರತೆ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ | ಬಿ.ಸಿ. ನಾಗೇಶ್ ಮನೆ ಮೇಲೆ NSUI ದಾಳಿಗೆ ಆಲದ ಮರ Club Houseನಲ್ಲಿ ನಡೆದಿತ್ತಂತೆ ಸಂಚು

Exit mobile version