Torke Fish | ಅಂಕೋಲಾದಲ್ಲಿ 8 ಸಾವಿರ ರೂಪಾಯಿಗೆ 120 ಕೆಜಿ ತೂಕದ ತೊರ್ಕೆ ಮೀನು ಖರೀದಿ - Vistara News

ಉತ್ತರ ಕನ್ನಡ

Torke Fish | ಅಂಕೋಲಾದಲ್ಲಿ 8 ಸಾವಿರ ರೂಪಾಯಿಗೆ 120 ಕೆಜಿ ತೂಕದ ತೊರ್ಕೆ ಮೀನು ಖರೀದಿ

Torke Fish | ಮಾರುಕಟ್ಟೆಗೆ ಮಾರಾಟಕ್ಕೆ ಬಂದ ಸುಮಾರು 120 ಕೆಜಿ ತೂಕ, 4.5 ಅಡಿ ಗಾತ್ರದ, 5 ಅಡಿ ಉದ್ದದ ಬಾಲ ಹೊಂದಿದ ತೊರ್ಕೆ ಮೀನನ್ನು ಗ್ರಾಹಕರೊಬ್ಬರು 8 ಸಾವಿರಕ್ಕೆ ಖರೀದಿಸಿದ್ದಾರೆ.

VISTARANEWS.COM


on

Torke Fish ankola
ಅಂಕೋಲಾ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬಂದ ಭಾರಿ ಗಾತ್ರದ ತೊರ್ಕೆ ಮೀನು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಭಾರಿ ಗಾತ್ರದ ತೊರ್ಕೆ ಮೀನು (Torke Fish) ಅಂಕೋಲಾ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬಂದಿರುವುದು ಮತ್ಸ್ಯಪ್ರಿಯರ ಬಾಯಲ್ಲಿ ನೀರೂರಿಸುವಂತೆ ಮಾಡಿತ್ತು. ಆದರೆ, ಅದು ಭರ್ಜರಿ ದರಕ್ಕೇ ಮಾರಾಟವಾಗುವ ಮೂಲಕ ಎಲ್ಲರ ಗಮನ ಸೆಳೆಯಿತು.

ಬೆಳಂಬಾರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ತೊರ್ಕೆ ಮೀನು ಸಿಕ್ಕಿದ್ದು, ಮಾರುಕಟ್ಟೆಗೆ ತರಲಾಗಿದೆ. 4.5 ಅಡಿ ಗಾತ್ರದ, 5 ಅಡಿ ಉದ್ದದ ಬಾಲ ಹೊಂದಿರುವ ಈ ಮೀನು ಸುಮಾರು 120 ಕೆಜಿ ತೂಕವನ್ನು ಹೊಂದಿದೆ. ಈ ಮೀನನ್ನು ನೋಡಲು ಗ್ರಾಹಕರು ಮುಗಿಬಿದ್ದಿದ್ದರು. ಇದರ ದರ 10 ಸಾವಿರ ರೂಪಾಯಿ ಎಂದಾಗ ಗ್ರಾಹಕರು ಕೊಳ್ಳಲು ಹಿಂಜರಿದರು. ಕೊನೆಗೂ ಮಾತುಕತೆ ಮೂಲಕ ಹೊಂದಾಣಿಕೆ ಮಾಡಿ ಗ್ರಾಹಕರೊಬ್ಬರು 8 ಸಾವಿರಕ್ಕೆ ಖರೀದಿಸಿದರು.

ಇದನ್ನೂ ಓದಿ | ಮಹಿಳೆ ಯಾರದೇ ಆಸ್ತಿಯಲ್ಲ: ಸುಪ್ರೀಂ ಕೋರ್ಟ್‌

ಅತಿ ರುಚಿ ಮೀನುಗಳಲ್ಲಿ ಒಂದಾಗಿರುವ ತೊರ್ಕೆ ಮೀನಿನ ಸಂತತಿ ಇತ್ತೀಚೆಗೆ ಜಲಮಾಲಿನ್ಯದಿಂದಾಗಿ ಕ್ಷೀಣಿಸುತ್ತಿದೆ. ಬೆಳಂಬಾರ ಭಾಗದ ಸಮುದ್ರ ಪ್ರದೇಶದಲ್ಲಿ ಹೇರಳವಾಗಿ ನೆಲೆ ಕಂಡುಕೊಂಡಿದ್ದ ಈ ಮೀನು, ಇತ್ತೀಚೆಗೆ ಅಪರೂಪವಾಗುತ್ತಿದೆ ಎನ್ನುತ್ತಾರೆ ಮೀನು ಮಾರುವ ಮಹಿಳೆಯರು.

ಇದನ್ನೂ ಓದಿ | MV Ganga Vilas | ವಿಶ್ವದ ಅತಿ ಉದ್ದದ ರಿವರ್‌ ಕ್ರೂಸ್‌ನಲ್ಲಿ ಹೋಗಬೇಕಾ? ಮುಂದಿನ ವರ್ಷದ ಮಾರ್ಚ್‌ವರೆಗೂ ಕಾಯಬೇಕು!

ಜಿಲ್ಲೆಯ ಅರಬ್ಬಿ ಸಮುದ್ರ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಎರಡು ವಿಧದ ತೊರ್ಕೆ ಮೀನುಗಳು ಸಾಮಾನ್ಯವಾಗಿ ಸಿಗುತ್ತವೆ. ಚುಕ್ಕಿ ಮಾದರಿಯ ಮೇಲ್ಮೈ ಹೊಂದಿರುವ ತೊರ್ಕೆ ಮೀನಾಗಿದ್ದು. ಇದನ್ನು ಸ್ಥಳೀಯವಾಗಿ ಕೊಂಕಣಿಯಲ್ಲಿ ‘ವಾಘಳೆ’ ಎಂದು ಕರೆಯಲಾಗುತ್ತದೆ. ಇನ್ನೊಂದು ಆಕಳ ಮೂಗಿನ ರೀತಿಯ ಆಕಾರ ಹೊಂದಿರುವ ಕಪ್ಪು ಬಣ್ಣದ ಮೇಲ್ಮೈ ಹೊಂದಿರುವ ತೊರ್ಕೆಯನ್ನು ‘ಶಾವಣೆ ವಾಘಳೆ’ ಎಂದು ಕರೆಯಲಾಗುತ್ತದೆ.

ಶಾರ್ಕ್ ಜಾತಿಗೆ ಸೇರಿರುವ ತೊರ್ಕೆ ಮೀನು ಹಿಂದೂ ಮಹಾಸಾಗರದಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಸುಮಾರು ಎರಡು ಮೀಟರ್‌ನಷ್ಟು ಉದ್ದ ಬೆಳೆಯುವ ಇವುಗಳ ಬಾಲ ಉದ್ದವಾಗಿದ್ದು, ತುದಿಯಲ್ಲಿ ಎರಡು ಮುಳ್ಳುಗಳನ್ನು ಹೊಂದಿರುತ್ತದೆ. ಗರಿಷ್ಠ 16 ವರ್ಷಗಳ ಕಾಲ ಬದುಕುವ ಈ ಮೀನುಗಳ ಸಂತತಿ ಅಳಿವಿನ ಅಂಚಿನಲ್ಲಿರುವ ಪ್ರಭೇದಗಳ ಸಾಲಿನಲ್ಲಿ ಗುರುತಿಸಿಕೊಂಡಿವೆ.

ಇದನ್ನೂ ಓದಿ | Shri Ram-Janaki Yatra | ರಾಮ ಜನ್ಮಸ್ಥಾನದಿಂದ ಸೀತೆ ಹುಟ್ಟಿದ ಊರಿಗೆ ಶ್ರೀ ರಾಮ-ಜಾನಕಿ ಯಾತ್ರೆ: ಫೆ.17ರಿಂದ ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು

Continue Reading

ಕರ್ನಾಟಕ

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Self Harming: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದದ ಮನೆಯಲ್ಲೇ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಕಾರವಾರ: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್‌ ಗಲ್ಲಿಯಲ್ಲಿ ನಡೆದಿದೆ.

ಬೆಳಗಾವಿಯ ಲೋಂಡಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ 5ನೇ ತರಗತಿಗೆ ವಿದ್ಯಾರ್ಥಿ ಹೋಗಬೇಕಿದ್ದ. ಇನ್ನೆರಡು ದಿನಗಳಲ್ಲಿ ಶಾಲೆ ಆರಂಭವಾಗಲಿತ್ತು. ಆದರೆ, ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಿದ್ದ ವಿದ್ಯಾರ್ಥಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಗೋವಾದಲ್ಲಿ ಕೆಲಸಕ್ಕೆ ಹೋಗಿದ್ದು, ತಂದೆ ಮಲಗಿದ್ದ ವೇಳೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಮೇಘಾಂಜಲಿ ಕಲ್ಯಾಣ ಮಂಟಪ ಸಮೀಪದ ಕನಕದಾಸ ವೃತ್ತದಲ್ಲಿ ನಡೆದಿದೆ. ಉಮೇಶ್( 51) ಮೃತ ದುರ್ದೈವಿ.

ತಂದೆ-ಮಗ ಬೈಕ್‌ನಲ್ಲಿ ಅರಳುಮಲ್ಲಿಗೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದರು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಕೊನೆಯುಸಿರೆದಿದ್ದಾರೆ. ಅದೃಷ್ಟವಶಾತ್ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ನಾಪತ್ತೆಯಾಗಿದ್ದ ಯುವ ಶವವಾಗಿ ಪತ್ತೆ

ತುಮಕೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯಿರುವ ಲಕ್ಷ್ಮೀಪುರದಲ್ಲಿ ನಡೆದಿದೆ. ಪ್ರದೀಪ್ (30) ಮೃತ ದುರ್ದೈವಿ.

ಲಕ್ಷ್ಮೀಪುರ ಬಳಿಯಿರುವ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಹುಲಿಯೂರುದುರ್ಗ ಬಳಿಯ ಮೂದನಹಳ್ಳಿ ಗ್ರಾಮದ ಪ್ರದೀಪ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಕುಡಿತದ ದಾಸನಾಗಿದ್ದರಿಂದ ಆಗಾಗ ಪತ್ನಿ ಹಾಗೂ ತಾಯಿ ಜೊತೆ ಗಲಾಟೆ ಮಾಡುತ್ತಿದ್ದ. ಈತನ ಕಿರುಕುಳಕ್ಕೆ ಬೇಸತ್ತು ಒಂದು ತಿಂಗಳ ಹಿಂದೆ ಪತ್ನಿ ಹಾಗೂ ತಾಯಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ಹೀಗಾಗಿ ಪ್ರದೀಪ್ ಮನೆಯಲ್ಲಿ ಒಬ್ಬನೇ ಇದ್ದ.

ಕಳೆದ ಮೂರು ದಿನಗಳ ಹಿಂದೆ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದ ಪ್ರದೀಪ್‌, ಬುಧವಾರ ಸಂಜೆ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮೃತದೇಹ ನೋಡಿ ಹುಲಿಯೂರುದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಪತ್ತೆಯಾದ ಜಾಗದಲ್ಲಿ ಮದ್ಯದ ಬಾಟಲ್ ಹಾಗೂ ಚಾಕು ಪತ್ತೆಯಾಗಿದೆ. ಪ್ರದೀಪ್ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

Lok Sabha Election 2024: ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ತಮಗೆ ನಿಗದಿಪಡಿಸಿದ ಅವಧಿಗೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಿ, ತಮ್ಮ ಟೇಬಲ್ ಬಳಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಪ್ರತಿ ಹಂತದ ಮತ ಎಣಿಕೆಯ ವಿವರಗಳನ್ನು ಕೇಂದ್ರದಲ್ಲಿ ಹಾಜರಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದಂತೆ ತಿಳಿಸುವುದರ ಮೂಲಕ ಸಕಾಲದಲ್ಲಿ ನಿಖರ ಫಲಿತಾಂಶ ನೀಡಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

VISTARANEWS.COM


on

Uttara Kannada DC Gangubai Manakar spoke in Vote counting training program at Kumta
Koo

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಗೆ (Lok Sabha Election 2024) ಸಂಬಂಧಿಸಿದಂತೆ ಜೂ. 4ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ಮತ ಎಣಿಕೆ ಸಂದರ್ಭದಲ್ಲಿ ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಕುಮಟಾದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಆಯೋಜಿಸಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆಯ ಅತ್ಯಂತ ಪ್ರಮುಖ ಮತ್ತು ಅಂತಿಮ ಹಂತವಾದ ಮತ ಎಣಿಕೆ ಕಾರ್ಯವು ಇಡೀ ಚುನಾವಣೆ ಪ್ರಕ್ರಿಯೆಯ ಮಹತ್ವದ ಘಟ್ಟವಾಗಿದೆ, ಮತ ಎಣಿಕೆ ಸಿಬ್ಬಂದಿ ಯಾವುದೇ ಗೊಂದಲ, ಆತುರ, ಒತ್ತಡಗಳಿಗೆ ಒಳಗಾಗದೇ, ನಿಖರವಾದ ಫಲಿತಾಂಶವನ್ನು ನೀಡಲು ಅನುಕೂಲವಾಗುವಂತೆ ಅತ್ಯಂತ ಜವಾಬ್ದಾರಿಯುತವಾಗಿ ಮತ ಎಣಿಕೆ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಕೂಡಾ, ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು, ಸಿಬ್ಬಂದಿ ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು. ಎಣಿಕೆಯ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಮತಗಳನ್ನು ಸ್ಪಷ್ಟವಾಗಿ ಕ್ರೋಡಿಕರಿಸಿ, ಅಭ್ಯಥಿಗಳು ಮತ್ತು ಅವರ ಏಜೆಂಟರುಗಳಿಂದ ಯಾವುದೇ ಆಕ್ಷೇಪಣೆಗಳು ಬಾರದಂತೆ ಎಚ್ಚರವಹಿಸುವಂತೆ ಹಾಗೂ ಯಾವುದೇ ರೀತಿಯ ಗೊಂದಲಗಳು ಕಂಡುಬಂದಲ್ಲಿ ತಕ್ಷಣ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಮತ ಎಣಿಕೆ ಕಾರ್ಯದ ಕುರಿತಂತೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಎಲ್ಲಾ ಸಿಬ್ಬಂದಿ ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಇವಿಎಂಗಳಲ್ಲಿನ ಮತ ಎಣಿಕೆ ಮತ್ತು ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಯ ಕುರಿತಂತೆ ಯಾವುದೇ ಗೊಂದಲಗಳಿದ್ದಲ್ಲಿ ತರಬೇತಿ ಸಮಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.

Continue Reading

ಮಳೆ

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Karnataka Weather: ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ (Rain News) ಹಾಗೂ ಅಲ್ಲಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ (Karnataka Weather) ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ರಾಜ್ಯದಾದ್ಯಂತ 2-3 ° C ರಷ್ಟು ಕ್ರಮೇಣ ಕುಸಿಯುತ್ತದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಲೆ ಮಾರುತಗಳು ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.

Continue Reading
Advertisement
Assault Case in Shivamogga
ಕ್ರೈಂ2 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್3 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್8 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 20249 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ11 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ20 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್32 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ52 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌