Site icon Vistara News

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

Tourist boat capsizes

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Kundapur News

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Exit mobile version