ಕಾರವಾರ: ಅಂಕೋಲಾ ತಾಲೂಕಿನ ವಿಭೂತಿ ಫಾಲ್ಸ್‌ಗೆ ಪ್ರವಾಸಕ್ಕೆಂದು (Tourist Dies) ಬಂದಿದ್ದ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಆಂಧ್ರಪ್ರದೇಶ ಮೂಲದ ಶ್ಯಾಮ್ ಮೃತ. ಈತ ಹೊಸ ವರ್ಷಾಚರಣೆಗೆಂದು 15 ಸ್ನೇಹಿತರೊಂದಿಗೆ ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ. ವಿಭೂತಿ ಫಾಲ್ಸ್‌ನಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿ ಕೂಡಲೇ ಆತನನ್ನು ಮೇಲಕ್ಕೆ ಎಳೆದುಕೊಂಡು ಬಂದಿದ್ದು, ಸಿಪಿಆರ್ ನೀಡಿ ಬದುಕಿಸಲು ಪ್ರಯತ್ನಿಸಿದ್ದಾರೆ. ಕೂಡಲೇ ಆತನನ್ನು ವಾಹನವೊಂದರ ಮೂಲಕ ಅಂಕೋಲಾ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Karwar News | ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನಿಂದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ; ವಿಡಿಯೊ ವೈರಲ್