ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿಂದು ಚಾಲಕರು ಟ್ರ್ಯಾಕ್ಟರ್ ರ‍್ಯಾಲಿ ನಡೆಸಿ (Tractor ban) ಸರ್ಕಾರದ ಆದೇಶಕ್ಕೆ ಕಿಡಿಕಾರಿದ್ದಾರೆ. ಬೆಂಗಳೂರು ರಸ್ತೆಯಲ್ಲಿ ಟ್ರ್ಯಾಕ್ಟರ್ ನಿಷೇಧಿಸಿದ ಆದೇಶವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ರಸ್ತೆಯಲ್ಲಿ ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ್ ಪಡುಕೋಟಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ಮಾಲೀಕರು, ಚಾಲಕರು, ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರ ಸಹಿತ ನೂರಾರು ಮಂದಿ ಪ್ರತಿಭಟನೆ ನಡೆಸಿದರು.
ಬೆಂಗಳೂರು ರಸ್ತೆಯಲ್ಲಿ ಟ್ರ್ಯಾಕ್ಟರ್ ನಿಷೇಧದಿಂದ 40 ಸಾವಿರಕ್ಕೂ ಅಧಿಕ ಟ್ರ್ಯಾಕ್ಟರ್ ಮಾಲೀಕರು, ಚಾಲಕರು, ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರ ಕುಟುಂಬ ಬೀದಿಪಾಲಾಗುತ್ತದೆ ಎಂದು ಕಿಡಿಕಾರಿದರು.ಇನ್ನು ಟ್ರ್ಯಾಕ್ಟರ್ ಪ್ರತಿಭಟನೆಗೆ ಬಿಗ ಬಾಸ್ ಖ್ಯಾತಿಯ ರೂಪೇಶ್ ರಾಜಣ್ಣ ಭಾಗಿಯಾಗಿದರು. ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ಸಂಬಂಧ ಮಾತನಾಡಿದ ನವ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ್ ಪಡುಕೋಟೆ, ಬೆಂಗಳೂರು ನಗರ ಸಂಚಾರಿ ಪೊಲೀಸರು ನಗರದಲ್ಲಿ ಟ್ರ್ಯಾಕ್ಟರ್ ನಿಷೇಧ ಮಾಡಿದ್ದಾರೆ. ದುಬಾರಿ ಬೆಲೆಯ ವಾಹನಗಳು ನಗರದಲ್ಲಿ ಓಡಾಡಿದ್ದರೆ ಸಂಚಾರ ದಟ್ಟಣೆ ಆಗಲ್ವ? ಎಂದು ಪ್ರಶ್ನೆ ಮಾಡಿದ್ದಾರೆ. ಟ್ರ್ಯಾಕ್ಟರ್‌ನಿಂದ ಸಂಚಾರ ದಟ್ಟಣೆ ಆಗುವುದಿಲ್ಲ. ಇಲಾಖೆ ಆದೇಶವನ್ನು ಹಿಂಪಡೆಯದಿದ್ದರೇ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಮತ್ತು ಗೃಹ ಸಚಿವರ ಭೇಟಿ ಮಾಡಿ ಮನವಿ ಮಾಡುತ್ತೇವೆ ಎಂದರು.
ರಾತ್ರೋರಾತ್ರಿ ಟ್ರ್ಯಾಕ್ಟರ್ ಸಮೇತ ಆಗಮನ
ಗಡಿದಾಟಿ ನಗರದೊಳಗೆ ಟ್ರ್ಯಾಕ್ಟರ್‌ಗಳನ್ನು ಬಿಡದಂತೆ ಪೊಲೀಸರು ಸೂಚನೆ ನೀಡಿರುವ ಹಿನ್ನೆಲೆ ರಾತ್ರಿಯೇ ಫ್ರೀಡಂ ಪಾರ್ಕ್‌ಗೆ ಟ್ರ್ಯಾಕ್ಟರ್ ಸಮೇತ ಆಗಮಿಸಿದ್ದಾರೆ. 200ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳನ್ನು ನಗರದೊಳಗೆ ತಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ರಸ್ತೆಯಲ್ಲಿ ಟ್ರ್ಯಾಕ್ಟರ್ ನಿಷೇಧದಿಂದ ಚಾಲಕರಿಗೆ ಭಾರಿ ನಷ್ಟವಾಗುತ್ತದೆ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: UKG student fail: ಯುಕೆಜಿ ವಿದ್ಯಾರ್ಥಿನಿ ಫೇಲ್; ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಶಿಕ್ಷಣ ಇಲಾಖೆ