ಹಾಸನ: ಅರಕಲಗೂಡು ತಾಲೂಕಿನ ಬರಗೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು(Tractor Overturn), ಯುವಕನೊಬ್ಬ ಮೃತಪಟ್ಟಿದ್ದಾನೆ.
19 ವರ್ಷದ ಸುಮಂತ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಪಲ್ಟಿಯಾಗಿದ್ದು, ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿದೆ. ಹೀಗಾಗಿ ಗಂಭೀರ ಗಾಯಗೊಂಡ ಸುಮಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಸುಮಂತ್ ಮೃತದೇಹವನ್ನು ಅರಕಲಗೂಡು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ. ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಅಗತ್ಯಬಿದ್ದರೆ ಕರ್ನಾಟಕದಲ್ಲೂ `ಯೋಗಿʼ ಬುಲ್ಡೋಜರ್ : ಸಿಎಂ ಬೊಮ್ಮಾಯಿ ಹೇಳಿಕೆ